ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Kiccha Sudeep: ಧ್ರುವ ಸರ್ಜಾ ನಟನೆಯ ಕೆಡಿ ಸೆಟ್‌ಗೆ ಸುದೀಪ್‌ ಎಂಟ್ರಿ; ಅತಿಥಿ ಪಾತ್ರದಲ್ಲಿ ಕಿಚ್ಚ ನಟನೆ?

KD: The Devil Movie: ಧ್ರುವ ಸರ್ಜಾ ನಟಿಸುತ್ತಿರುವ ‘ಕೆಡಿ’ ಸಿನಿಮಾದ ಚಿತ್ರೀಕರಣ ಹೈದರಾಬಾದ್​​ನ ರಾಮೋಜಿ ಫಿಲಂ ಸಿಟಿ ಸ್ಟುಡಿಯೋನಲ್ಲಿ ನಡೆಯುತ್ತಿದೆ. ಸಿನಿಮಾ ಚಿತ್ರೀಕರಣಕ್ಕಾಗಿ ದೊಡ್ಡ ರೈಲಿನ ಸೆಟ್ ಹಾಕಿ ಆಕ್ಷನ್ ದೃಶ್ಯದ ಚಿತ್ರೀಕರಣವನ್ನು ಮಾಡಲಾಗುತ್ತಿದೆ. ಇದೀಗ ಸಿನಿಮಾ ಸೆಟ್​​ಗೆ ಕಿಚ್ಚ ಸುದೀಪ್ ಭೇಟಿಯಾಗಿ, ಚಿತ್ರತಂಡದ ಜತೆ ಮಾತುಕತೆ ನಡೆಸಿದ್ದಾರೆ.

ಕೆಡಿ ಸೆಟ್‌ಗೆ ಸುದೀಪ್‌ ಎಂಟ್ರಿ; ಅತಿಥಿ ಪಾತ್ರದಲ್ಲಿ ಕಿಚ್ಚ ನಟನೆ?

-

Prabhakara R Prabhakara R Sep 13, 2025 4:42 PM

ಬೆಂಗಳೂರು: ನಟ ಧ್ರುವ ಸರ್ಜಾ ನಟನೆ, ಜೋಗಿ ಪ್ರೇಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಸಿನಿಮಾ ‘ಕೆಡಿ’ ಶೂಟಿಂಗ್ ಭರದಿಂದ ಸಾಗುತ್ತಿದೆ. ಈ ಸಿನಿಮಾದಲ್ಲಿ ಹಲವು ದೊಡ್ಡ ಸ್ಟಾರ್​​ಗಳನ್ನು ಅತಿಥಿ ಪಾತ್ರಗಳಿಗೆ ಹಾಕಿಕೊಂಡಿದ್ದು, ಇದೀಗ ಮತ್ತೊಬ್ಬ ಪ್ಯಾನ್ ಇಂಡಿಯಾ ಸ್ಟಾರ್ ಸುದೀಪ್ (Kiccha Sudeep) ಅವರು ಸಹ ‘ಕೆಡಿ’ಗೆ ಸಾಥ್‌ ನೀಡಿದ್ದಾರೆ.

‘ಕೆಡಿ’ ಸಿನಿಮಾದ ಚಿತ್ರೀಕರಣ ಹೈದರಾಬಾದ್​​ನ ರಾಮೋಜಿ ಫಿಲಂ ಸಿಟಿ ಸ್ಟುಡಿಯೋನಲ್ಲಿ ನಡೆಯುತ್ತಿದೆ. ಸಿನಿಮಾ ಚಿತ್ರೀಕರಣಕ್ಕಾಗಿ ದೊಡ್ಡ ರೈಲಿನ ಸೆಟ್ ಹಾಕಿ ಆಕ್ಷನ್ ದೃಶ್ಯದ ಚಿತ್ರೀಕರಣವನ್ನು ಮಾಡಲಾಗುತ್ತಿದೆ. ಸಿನಿಮಾ ಸೆಟ್​​ಗೆ ಕಿಚ್ಚ ಸುದೀಪ್ ಭೇಟಿ ನೀಡಿದ್ದು, ಸಿನಿಮಾದ ಅತಿಥಿ ಪಾತ್ರದಲ್ಲಿ ಕಿಚ್ಚ ನಟಿಸಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸುದೀಪ್ ಅವರು ಈ ಹಿಂದೆ ಪ್ರೇಮ್ ನಿರ್ದೇಶನದ ‘ದಿ ವಿಲನ್’ ಸಿನಿಮಾನಲ್ಲಿ ನಟಿಸಿದ್ದರು. ಆದರೆ ಆ ಸಿನಿಮಾ ನಿರೀಕ್ಷಿತ ಮಟ್ಟದಲ್ಲಿ ಪ್ರೇಕ್ಷಕರನ್ನು ತಲುಪಿರಲಿಲ್ಲ. ಇದೀಗ ಹಲವು ಸ್ಟಾರ್ ನಟ-ನಟಿಯರನ್ನು ಹಾಕಿಕೊಂಡು ಪ್ರೇಮ್ ಅವರು ‘ಕೆಡಿ’ ಸಿನಿಮಾ ಮಾಡುತ್ತಿದ್ದು, ಧ್ರುವ ಸರ್ಜಾ ಪಾಲಿಗೆ ಇದು ಮಹತ್ವದ ಸಿನಿಮಾ ಆಗಿದೆ. ಧ್ರುವ ಸರ್ಜಾ, ಸುದೀಪ್ ಅವರ ಆಪ್ತ ನಟ ಆಗಿರುವ ಕಾರಣ, ಇದೀಗ ಸುದೀಪ್ ‘ಕೆಡಿ’ ಸಿನಿಮಾನಲ್ಲಿ ಮಹತ್ವದ ಅತಿಥಿ ಪಾತ್ರದಲ್ಲಿ ನಟಿಸಲು ಒಪ್ಪಿಕೊಂಡಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಇನ್ನಷ್ಟೆ ಚಿತ್ರತಂಡದಿಂದ ಹೊರಬೀಳಬೇಕಿದೆ.

ಈ ಸುದ್ದಿಯನ್ನೂ ಓದಿ |Priya Sudeep: ನಟ ಸುದೀಪ್ ಬರ್ತ್‌ಡೇಗೆ ಮಹತ್ತರ ಕಾರ್ಯ ಮಾಡಿದ ಪತ್ನಿ ಪ್ರಿಯಾ; ಅಂಗ-ಅಂಗಾಂಶ ದಾನ

‘ಕೆಡಿ’ ಸಿನಿಮಾ 80ರ ದಶಕದ ರೌಡಿಸಂ ಕತೆಯನ್ನು ಒಳಗೊಂಡಿದ್ದು, ಸಿನಿಮಾನಲ್ಲಿ ಬಾಲಿವುಡ್ ಸ್ಟಾರ್ ನಟ, ‘ಕೆಜಿಎಫ್’ ಅಧೀರ ಖ್ಯಾತಿಯ ಸಂಜಯ್ ದತ್ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಇನ್ನು ಸಿನಿಮಾನಲ್ಲಿ ಬಾಲಿವುಡ್ ಬೆಡಗಿ, ಕನ್ನಡ ಚಿತ್ರರಂಗಕ್ಕೆ ಚಿರಪರಿಚಿತರಾಗಿರುವ ಶಿಲ್ಪಾ ಶೆಟ್ಟಿ ಸಹ ನಟಿಸುತ್ತಿದ್ದಾರೆ. ರೀಷ್ಮಾ ನಾಣಯ್ಯ ಸಿನಿಮಾದ ನಾಯಕಿ. ರವಿಚಂದ್ರನ್, ರಮೇಶ್ ಅರವಿಂದ್ ಹಾಗೂ ಅಭಿಜಿತ್ ಅವರು ಹಿಂದೆಂದೂ ಕಾಣದಿದ್ದ ರೀತಿಯ ರಫ್ ಪಾತ್ರದಲ್ಲಿ ಈ ಸಿನಿಮಾನಲ್ಲಿ ಕಾಣಿಸಿಕೊಂಡಿದ್ದಾರೆ. ಸಿನಿಮಾನಲ್ಲಿ ಮೋಹನ್​​ಲಾಲ್ ಸಹ ಇದ್ದಾರೆ ಎನ್ನಲಾಗುತ್ತಿದೆ. ಸಿನಿಮಾದ ಐಟಂ ಹಾಡಿಗೆ ನೋರಾ ಫತೇಹಿ ಸೊಂಟ ಕುಣಿಸಿದ್ದಾರೆ. ಸಿನಿಮಾ ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ.