ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತು; ರಾಜ್ಯಪಾಲರಿಂದ ಆದೇಶ

Shivashankarappa Sahukar: ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಸೋಮವಾರ ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ (Shivashankarappa Sahukar) ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಹತ್ವದ ಕ್ರಮ ಕೈಗೊಂಡಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅವರನ್ನು ತಕ್ಷಣದಿಂದಲೇ ಅಮಾನತುಗೊಳಿಸಿ ಸೋಮವಾರ ಬೆಳಿಗ್ಗೆ ಆದೇಶ ಹೊರಡಿಸಲಾಗಿದೆ. ಅಲ್ಲದೆ, ಶಿವಶಂಕರಪ್ಪ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಶಿಫಾರಸು ಮಾಡಲಾಗಿದೆ.

ಸಂವಿಧಾನದ ವಿಧಿ 317(1)ರ ಅಡಿಯಲ್ಲಿ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ ಉಲ್ಲೇಖಿಸುವಂತೆ ರಾಜ್ಯಪಾಲರು ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಲಾಗಿದೆ. ಮುಂದಿನ ಆದೇಶದವರೆಗೆ KPSC ಹಿರಿಯ ಸದಸ್ಯರೊಬ್ಬರನ್ನ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಶಿವಶಂಕರಪ್ಪ ಎಸ್ ಸಾಹುಕಾರ್ ಮೇಲಿದ್ದ ಆರೋಪಗಳೇನು?

ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಸ್ವಜನಪಕ್ಷಪಾತ ಸೇರಿದಂತೆ ವಿವಿಧ ಆರೋಪಗಳು ಕೇಳಿಬಂದಿದ್ದವು. ತಮ್ಮ ಇಬ್ಬರು ಹೆಣ್ಣುಮಕ್ಕಳನ್ನು 'ಕೈಗಾರಿಕಾ ವಿಸ್ತರಣಾ ಅಧಿಕಾರಿ' ಹುದ್ದೆಗಳಿಗೆ ಕಾನೂನುಬಾಹಿರವಾಗಿ ಆಯ್ಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬ ಗಂಭೀರ ಮಾಡಲಾಗಿತ್ತು. ಅಷ್ಟೇ ಅಲ್ಲದೆ ಸುಳ್ಳು ಆದಾಯ ಪ್ರಮಾಣಪತ್ರದ ಆರೋಪ ನಿಯಮಿತ ಮಿತಿಗಿಂತ ಹೆಚ್ಚಿನ ಆದಾಯವಿದ್ದರೂ, ಸಾಹುಕಾರ್ ಅವರ ಪುತ್ರಿಯೊಬ್ಬರು ತಮ್ಮ ಕುಟುಂಬದ ವಾರ್ಷಿಕ ಆದಾಯ ಕೇವಲ 40,000 ರೂ. ಎಂದು ಸುಳ್ಳು ಘೋಷಣೆ ನೀಡಿ ಆದಾಯ ಮತ್ತು ಜಾತಿ ಪ್ರಮಾಣಪತ್ರ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ.

ಈ ಆರೋಪಗಳ ಕುರಿತು ಸಲ್ಲಿಕೆಯಾಗಿದ್ದ ದೂರಿನ ಆಧಾರದ ಮೇಲೆ ರಾಜ್ಯಪಾಲರು ಈ ಕ್ರಮ ಕೈಗೊಂಡಿದ್ದಾರೆ. ಇತ್ತೀಚೆಗೆ ಶಿವಶಂಕರಪ್ಪ ಸಾಹುಕಾರ್ ಅವರ ಪುತ್ರಿ ಸುಮಾ ಎಸ್. ಸಾಹುಕಾರ್ ವಿರುದ್ಧವೂ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ವೇಳೆ ನಕಲಿ ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಸಲ್ಲಿಸಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದ್ದು, ದಾಖಲೆಗಳ ಪರಿಶೀಲನೆ ವೇಳೆ ಅಕ್ರಮ ಬೆಳಕಿಗೆ ಬಂದಿತ್ತು.

ʼʼಪತ್ನಿ ಗರ್ಭಿಣಿ, ವಿಐಪಿಗಾಗಿ ಸಂಚಾರ ನಿರ್ಬಂಧಿಸೋದು ಎಷ್ಟು ಸರಿ?ʼʼ ಬೆಂಗಳೂರಿನಲ್ಲಿ ರಸ್ತೆ ಮಧ್ಯೆ ಕೂತು ರಾಜ್ಯಪಾಲರ ಬೆಂಗಾವಲು ವಾಹನ ತಡೆದ ವ್ಯಕ್ತಿ

ರಾಜ್ಯಪಾಲರ ಆದೇಶದಲ್ಲೇನಿದೆ?

‘ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ವಿರುದ್ಧ ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಹಾಗೂ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಿರುವ ಆರೋಪಗಳು ಕೇಳಿಬಂದಿವೆ. ವಿಶೇಷವಾಗಿ ತಮ್ಮ ಪುತ್ರಿ ಸುಮಾ ಎಸ್. ಸಾಹುಕಾರ್ ಅವರಿಗೆ ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆ ಪಡೆಯಲು ಅನುಕೂಲವಾಗುವಂತೆ ಸುಳ್ಳು ಆದಾಯ ಮತ್ತು ಜಾತಿ ಪ್ರಮಾಣಪತ್ರಗಳನ್ನು ಬಳಸಿಕೊಂಡು ಮೀಸಲಾತಿಯ ಲಾಭ ಪಡೆಯಲು ಅವಕಾಶ ಮಾಡಿಕೊಟ್ಟಿರುವ ಆರೋಪವೂ ಉಲ್ಲೇಖಿಸಲಾಗಿದೆ. ಈ ಆರೋಪಗಳು ಗಂಭೀರ ಸ್ವರೂಪದ್ದಾಗಿರುವ ಹಿನ್ನೆಲೆಯಲ್ಲಿ ಅವುಗಳ ಬಗ್ಗೆ ಸಮಗ್ರ ತನಿಖೆ ನಡೆಸುವುದು ಅಗತ್ಯ ಎಂದು ರಾಜ್ಯಪಾಲರು ಅಭಿಪ್ರಾಯಪಟ್ಟಿದ್ದಾರೆ. ಸಂವಿಧಾನದ 317(1) ನೇ ವಿಧಿಯ ಅನ್ವಯ ಪ್ರಕರಣವನ್ನು ರಾಷ್ಟ್ರಪತಿಗಳಿಗೆ ಉಲ್ಲೇಖಿಸಲು ಶಿಫಾರಸು ಮಾಡಲಾಗಿದೆ. ತನಿಖೆ ಪೂರ್ಣಗೊಳ್ಳುವವರೆಗೆ ಶಿವಶಂಕರಪ್ಪ ಸಾಹುಕಾರ್ ಅವರನ್ನು ಕೆಪಿಎಸ್‌ಸಿ ಅಧ್ಯಕ್ಷ ಹುದ್ದೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ’ ಎಂದು ರಾಜ್ಯಪಾಲರ ಆದೇಶದ ಕುರಿತು ಲೋಕಭವನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

Vishakha Bhat Heggar

View all posts by this author