ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

KPSC chairman: ಕೆಪಿಎಸ್‌‍ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ ಅಮಾನತುಗೊಳಿಸಿ ರಾಜ್ಯಪಾಲರ ಆದೇಶ

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರು ತಮ್ಮ ಇಬ್ಬರು ಪುತ್ರಿಯರನ್ನು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳಿಗೆ ನಿಯಮಬಾಹಿರ ಹಾಗೂ ಕಾನೂನುಬಾಹಿರವಾಗಿ ಆಯ್ಕೆ ಮಾಡಲು ನೆರವಾಗಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಲೋಕಭವನಕ್ಕೆ ದೂರುಗಳನ್ನು ಸಲ್ಲಿಕೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.

ಬೆಂಗಳೂರು: ಪುತ್ರಿಗೆ ಸರಕಾರಿ ಹುದ್ದೆ ಕೊಡಿಸಲು ಮೀಸಲಾತಿ ದುರುಪಯೋಗಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕ ಸೇವಾ ಆಯೋಗದ (ಕೆಪಿಎಸ್‌‍ಸಿ) ಹಾಲಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌ (KPSC chairman Shivashankarapppa Sahukar) ಅವರನ್ನು ತಕ್ಷಣದಿಂದಲೇ ಜಾರಿಯಾಗುವಂತೆ ಅಮಾನತುಗೊಳಿಸಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ಆದೇಶ ಹೊರಡಿಸಿದ್ದಾರೆ. ಅಲ್ಲದೆ ಅವರ ವಿರುದ್ಧದ ಆರೋಪಗಳ ಕುರಿತು ತನಿಖೆ ನಡೆಸಲು ಶಿಫಾರಸು ಮಾಡಿದ್ದು, ಈ ಮೂಲಕ ಕೆಪಿಎಸ್‌‍ಸಿ ಇತಿಹಾಸದಲ್ಲೇ ಅಧ್ಯಕ್ಷರೊಬ್ಬರು ಭ್ರಷ್ಟಾಚಾರ ಅಥವಾ ಅಕ್ರಮದ ಆರೋಪದ ಮೇಲೆ ಅಮಾನತುಗೊಂಡ ಮೊದಲ ಪ್ರಕರಣ ಇದಾಗಿದೆ.

ಅಧಿಕಾರ ದುರುಪಯೋಗ, ಸ್ವಜನಪಕ್ಷಪಾತ ಮತ್ತು ನಕಲಿ ದಾಖಲೆಗಳ ಸೃಷ್ಟಿ ಆರೋಪದ ಹಿನ್ನೆಲೆಯಲ್ಲಿ ಈ ಹಠಾತ್‌ ಕ್ರಮ ಕೈಗೊಳ್ಳಲಾಗಿದೆ. ಸುಪ್ರೀಂಕೋರ್ಟ್‌ ಉಲ್ಲೇಖ ಹಾಗೂ ರಾಷ್ಟ್ರಪತಿಗಳ ಮುಂದಿನ ನಿರ್ಧಾರದ ಮೇಲೆ ಈ ಪ್ರಕರಣದ ಅಂತಿಮ ತೀರ್ಪು ಆಧಾರಿತವಾಗಿದೆ ಎಂದು ರಾಜ್ಯಪಾಲರ ಆದೇಶದಲ್ಲಿ ತಿಳಿಸಲಾಗಿದೆ.

ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರು ತಮ್ಮ ಇಬ್ಬರು ಪುತ್ರಿಯರನ್ನು ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳಿಗೆ ನಿಯಮಬಾಹಿರ ಹಾಗೂ ಕಾನೂನುಬಾಹಿರವಾಗಿ ಆಯ್ಕೆ ಮಾಡಲು ನೆರವಾಗಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಲೋಕಭವನಕ್ಕೆ ದೂರುಗಳನ್ನು ಸಲ್ಲಿಕೆ ಮಾಡಲಾಗಿತ್ತು. ಕೆಪಿಎಸ್‌ಸಿ ಆಯ್ಕೆ ಪ್ರಕ್ರಿಯೆಯಲ್ಲಿ ತಮ್ಮ ನೇರ ಅವಲಂಬಿತರು ಭಾಗವಹಿಸಿದ್ದ ಸಂದರ್ಭದಲ್ಲಿ, ಅಧ್ಯಕ್ಷರು ಆ ಪ್ರಕ್ರಿಯೆಯಿಂದ ದೂರ ಸರಿಯಲು ಹಾಗೂ ಹಿತಾಸಕ್ತಿ ಸಂಘರ್ಷದ ಬಗ್ಗೆ ಔಪಚಾರಿಕ ಘೋಷಣೆ ಮಾಡಲು ವಿಫಲರಾಗಿದ್ದಾರೆ ಎಂಬುದು ಪತ್ತೆಯಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅಧ್ಯಕ್ಷರ ಪುತ್ರಿಯಲ್ಲೊಬ್ಬರು ವಾರ್ಷಿಕ 40,000 ರೂ. ಕೌಟುಂಬಿಕ ಆದಾಯವನ್ನು ಘೋಷಿಸಿ ಆದಾಯ ಮತ್ತು ಜಾತಿ ಪ್ರಮಾಣಪತ್ರವನ್ನು ಪಡೆದುಕೊಂಡಿದ್ದಾರೆ. ಅವರ ತಂದೆ ಆಯೋಗದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಮತ್ತು ನಿಗದಿತ ಮಿತಿಗಿಂತ ಹೆಚ್ಚಿನ ಆದಾಯವನ್ನು ಹೊಂದಿದ್ದಾರೆ ಎಂಬ ಸತ್ಯ ತಿಳಿದಿದ್ದರೂ ಸಹ, ಉದ್ದೇಶಪೂರ್ವಕವಾಗಿ ಸತ್ಯವನ್ನು ಮರೆಮಾಚಿ ಮತ್ತು ತಿರುಚಿದ ಕಡಿಮೆ ಆದಾಯದ ಘೋಷಣೆಗಳನ್ನು ಬಳಸುವ ಮೂಲಕ ಅಧ್ಯಕ್ಷರ ಪುತ್ರಿಯು ಒಬಿಸಿ ಮೀಸಲಾತಿ ಮತ್ತು ಕೆನೆಪದರ (Creamy Layer) ವಿನಾಯಿತಿಯನ್ನು ಪಡೆದುಕೊಂಡಿದ್ದಾರೆ ಎಂಬುದನ್ನು ಈ ಪುರಾವೆಗಳು ಸೂಚಿಸುತ್ತವೆ ಎಂದು ವಿವರಿಸಲಾಗಿದೆ.

ಜೊತೆಗೆ ನಿಯಮದಂತೆ ಲೋಕಸೇವಾ ಆಯೋಗದ ಅಧ್ಯಕ್ಷರ ಮಕ್ಕಳು ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಕೋಟಾದಡಿ ಮೀಸಲಾತಿಯನ್ನು ಪಡೆಯಲು ಅರ್ಹರಲ್ಲ. ಈ ನಿರ್ಬಂಧದ ಹೊರತಾಗಿಯೂ, ಅನಗತ್ಯ ಲಾಭವನ್ನು ಪಡೆಯಲು ಅಧ್ಯಕ್ಷರು ಮತ್ತು ಅವರ ಪುತ್ರಿ ಪ್ರಮುಖ ಮಾಹಿತಿಯನ್ನು ಮರೆಮಾಚಿದ್ದಾರೆ. ಆದ್ದರಿಂದ, ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ್ ಅವರನ್ನು ಅಮಾನತು ಮಾಡಿ, ಆರೋಪಗಳ ಬಗ್ಗೆ ಅಗತ್ಯ ತನಿಖೆ ನಡೆಸಲು ಭಾರತದ ಸಂವಿಧಾನದ 317(1)ನೇ ವಿಧಿಯಡಿ ರಾಷ್ಟ್ರಪತಿಯವರಿಗೆ ಉಲ್ಲೇಖ ಮಾಡಲು ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ.

ಬಿಡದಿ ರೈತ ಮಹಿಳೆಯರ ಪೊರಕೆ ಸೇವೆ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ಗಂಟೆ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಕೆಪಿಎಸ್‌ಸಿಯ ಹಂಗಾಮಿ ಅಧ್ಯಕ್ಷರನ್ನಾಗಿ ಡಾ. ಬಿ. ಪ್ರಭುದೇವ್ ನೇಮಕ

ಬೆಂಗಳೂರು: ಕೆಪಿಎಸ್‌ಸಿ ಹಾಲಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅಮಾನತುಗೊಂಡ ಹಿನ್ನೆಲೆಯಲ್ಲಿ ಆಯೋಗದ ಹಿರಿಯ ಸದಸ್ಯರಾದ ಡಾ. ಬಿ. ಪ್ರಭುದೇವ್ (Dr. B. Prabhudev) ಅವರನ್ನು ಕೆಪಿಎಸ್‌ಸಿಯ ಹಂಗಾಮಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

ಡಾ. ಬಿ. ಪ್ರಭುದೇವ್ ಅವರು 2021 ರಿಂದ ಕೆಪಿಎಸ್‌ಸಿ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಕೆಪಿಎಸ್‌ಸಿಯಲ್ಲಿ ತರಲಾದ ಹಲವು ಪ್ರಮುಖ ಸುಧಾರಣೆಗಳು ಮತ್ತು ಬದಲಾವಣೆಗಳಲ್ಲಿ ಇವರು ಮಹತ್ತರ ಪಾತ್ರ ವಹಿಸಿದ್ದರು. ಇವರ ದಕ್ಷತೆ ಮತ್ತು ಹಿರಿತನವನ್ನು ಪರಿಗಣಿಸಿ ರಾಜ್ಯಪಾಲರು ಇವರಿಗೆ ಈ ಜವಾಬ್ದಾರಿಯನ್ನು ನೀಡಿದ್ದಾರೆ.