ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೋಟಾರು ವಾಹನ ನಿರೀಕ್ಷಕರ ನೇಮಕಾತಿಯಲ್ಲೂ ಅಕ್ರಮ ಆರೋಪ; ಹೆಚ್ಚುವರಿ ಆಯ್ಕೆಪಟ್ಟಿ ಹಿಂಪಡೆದ ಕೆಪಿಎಸ್‌ಸಿ

2016ರ ಫೆ.4ರಂದು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ 'ಸಿ' ವೃಂದದ ಮೋಟಾರು ವಾಹನ ನಿರೀಕ್ಷಕರು 127+23 (ಹೈ.ಕ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ನೇಮಕಾತಿಯಲ್ಲಿ ಅಕ್ರಮ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕೆಪಿಎಸ್‌ಸಿ ಹಿಂಪಡೆದಿದೆ ಎಂದು ತಿಳಿದುಬಂದಿದೆ.

ಬೆಂಗಳೂರು: ಮೋಟಾರು ವಾಹನ ನಿರೀಕ್ಷಕ ಹುದ್ದೆಗಳ ನೇಮಕಾತಿಯಲ್ಲಿ (Motor Vehicle inspector Recruitment) ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಹಿಂಪಡೆದಿದೆ. ಈ ಸಂಬಂಧ ಕೆಪಿಎಸ್‌ಸಿ ಕಾರ್ಯದರ್ಶಿ ಕೆ.ಜ್ಯೋತಿ ಅವರು ಅಧಿಸೂಚನೆ ಹೊರಡಿಸಿದ್ದಾರೆ.

2016ರ ಫೆ.4ರಂದು ಸಾರಿಗೆ ಇಲಾಖೆಯಲ್ಲಿನ ಗ್ರೂಪ್ 'ಸಿ' ವೃಂದದ ಮೋಟಾರು ವಾಹನ ನಿರೀಕ್ಷಕರು 127+23 (ಹೈ.ಕ) ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ, ನಂತರ ಹೈಕೋರ್ಟ್‌ನಲ್ಲಿ ದಾಖಲಾದ ರಿಟ್ ಅರ್ಜಿ ಮತ್ತು ಇತರೆ ಪ್ರಕರಣಗಳ ಸಂಬಂಧ 2021ರ ಆ.25ರಂದು ನೀಡಿದ ನಿರ್ದೇಶನದಂತೆ 2022ರ ಏ.30 ಮತ್ತು ಜುಲೈ 22ರಂದು ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿತ್ತು.

ತದನಂತರ ಸದರಿ ಹುದ್ದೆಗಳ ನೇಮಕಾತಿ ಸಂಬಂಧ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ದಾಖಲಾಗಿದ್ದ ಅರ್ಜಿ ಮತ್ತು ಪ್ರಕರಣಗಳ ಸಂಬಂಧ ನ್ಯಾಯಮಂಡಳಿಯು ನೀಡಿದ ನಿರ್ದೇಶನದಂತೆ ಹಾಗೂ ಹೈಕೋರ್ಟ್‌ನಲ್ಲಿ ದಾಖಲಾಗಿದ್ದ ರಿಟ್ ಅರ್ಜಿ ಸಂಬಂಧ ನ್ಯಾಯಾಲಯವು 2024ರ ನ.8ರಂದು ನೀಡಿದ ಆದೇಶದಂತೆ, ಅನುಕ್ರಮವಾಗಿ 2023ರ ಅ.26 ಹಾಗೂ 2025ರ ಫೆ.13ರಂದು ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಗಳನ್ನು ಪ್ರಕಟಿಸಲಾಗಿತ್ತು.

ಮುಂದುವರಿದು, ಹೆಚ್ಚುವರಿ ಆಯ್ಕೆಪಟ್ಟಿ ಸಂಬಂಧ ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ದಾಖಲಾಗಿದ್ದ ಅರ್ಜಿ ಕುರಿತು ನ್ಯಾಯಮಂಡಳಿಯು 2024ರ ಫೆ.13 ರಂದು ನೀಡಿದ ಆದೇಶದಂತೆ 2025ರ ಏ.16ರಂದು ಹೆಚ್ಚುವರಿ ಪಟ್ಟಿಯನ್ನು ಪ್ರಕಟಿಸಲಾಗಿತ್ತು.

2026ರ ಆ.20ರಂದು ಆಯೋಗದ ಸಭೆಯಲ್ಲಿ ಪರಿಷ್ಕೃತ ಅಂತಿಮ ಆಯ್ಕೆಪಟ್ಟಿಯನ್ನು ಮರು ಪರಿಷ್ಕರಿಸಲು ನಿರ್ಣಯಿಸಿರುವ ಹಿನ್ನೆಲೆಯಲ್ಲಿ 2025ರ ಏ.16ರಂದು ಪ್ರಕಟಿಸಿರುವ ಹೆಚ್ಚುವರಿ ಪಟ್ಟಿಯನ್ನು ಹಿಂಪಡೆಯಲಾಗಿದೆ ಎಂದು ಕೆಪಿಎಸ್‌ಸಿ ಕಾರ್ಯದರ್ಶಿ ತಿಳಿಸಿದ್ದಾರೆ.