ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

B.V. Geetha: ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ; ಕೆಪಿಎಸ್‌ಸಿ ಸದಸ್ಯೆ ಬಿ.ವಿ. ಗೀತಾ ಅರೆಸ್ಟ್‌

ಶಿವಶಂಕರಪ್ಪ ಸಾಹುಕಾರ್ ಮತ್ತು ಗ್ಯಾನೇಂದ್ರ ಅವರ ಜತೆ ಗೀತಾ ಅವರು ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದರು ಎಂಬುದು ತನಿಖೆಯ ಪ್ರಾಥಮಿಕ ಅಂಶವಾಗಿದೆ. ಅವರ ನಡುವೆ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆಯೂ ಆರೋಪವಿದೆ. ಈ ಹಿನ್ನೆಲೆಯಲ್ಲಿ ಕೆಪಿಎಸ್‌ಸಿ ಸದಸ್ಯೆಯನ್ನು ಬಂಧನ ಮಾಡಲಾಗಿದೆ.

ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮಕ್ಕೆ (B.V. Geetha) ಸಂಬಂಧಿಸಿ ಮತ್ತೊಬ್ಬ ಪ್ರಮುಖ ವ್ಯಕ್ತಿ ಬಂಧನಕ್ಕೊಳಗಾಗಿದ್ದಾರೆ. ಈ ಹಿಂದೆ ಶಿವಶಂಕರಪ್ಪ, ಗ್ಯಾನೇಂದ್ರ ಕುಮಾರ್ ಮತ್ತು ಕನ್ನಾಳೆ ಅವರನ್ನು ವಶಕ್ಕೆ ಪಡೆದಿದ್ದ ವಿಶೇಷ ತನಿಖಾ ತಂಡ ಇದೀಗ ಆಯೋಗದ ಸದಸ್ಯೆ ಬಿ.ವಿ. ಗೀತಾ ಅವರನ್ನು ಬಂಧಿಸಿದೆ. ಈ ಪ್ರಕರಣದಲ್ಲಿ ಈಗಾಗಲೇ ಜಾಮೀನಿನ ಮೇಲೆ ಹೊರಗಿದ್ದ ಗೀತಾ ಅವರು ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ಮುಗಿದ ಬಳಿಕ ಅವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಶಿವಶಂಕರಪ್ಪ ಸಾಹುಕಾರ್ ಮತ್ತು ಗ್ಯಾನೇಂದ್ರ ಅವರ ಜತೆ ಗೀತಾ ಅವರು ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದರು ಎಂಬುದು ತನಿಖೆಯ ಪ್ರಾಥಮಿಕ ಅಂಶವಾಗಿದೆ. ಅವರ ನಡುವೆ ಹಣಕಾಸಿನ ವ್ಯವಹಾರ ನಡೆದಿರುವ ಬಗ್ಗೆಯೂ ಆರೋಪವಿದೆ. ಈ ವಿಷಯವನ್ನು ಇತರ ಆರೋಪಿಗಳು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ವಿಚಾರಣೆ ವೇಳೆ ಸಹಕಾರ ನೀಡಲಿಲ್ಲ ಎಂಬ ಕಾರಣಕ್ಕೆ ಬಂಧನ ಮಾಡಲಾಗಿದ್ದು, ನ್ಯಾಯಾಲಯದಿಂದ ಐದು ದಿನಗಳ ಪೊಲೀಸ್ ಕಸ್ಟಡಿ ಪಡೆಯಲಾಗಿದೆ.

ಇದೇ ವೇಳೆ ಗ್ರಾಮೀಣಾಭಿವೃದ್ಧಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಪರೀಕ್ಷೆಯ ಅಕ್ರಮದ ಬಗ್ಗೆಯೂ ಜಾರಿ ನಿರ್ದೇಶನಾಲಯ ತನಿಖೆಯನ್ನು ಚುರುಕುಗೊಳಿಸಿದೆ. ಈ ಪ್ರಕರಣದಲ್ಲಿ ಶಿವಶಂಕರಪ್ಪ, ಗ್ಯಾನೇಂದ್ರ ಮತ್ತು ಗೀತಾ ಅವರನ್ನು ವಿಚಾರಣೆಗೆ ಒಳಪಡಿಸಿರುವ ಅಧಿಕಾರಿಗಳು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲಿನ ಆರೋಪಗಳ ಬಗ್ಗೆಯೂ ಪ್ರಶ್ನಿಸಿದ್ದಾರೆ. ಓಎಂಆ‌ರ್ ತಿದ್ದುಪಡಿ ಬಗ್ಗೆ ಸ್ಪಷ್ಟ ಉತ್ತರ ಸಿಕ್ಕಿಲ್ಲ. ಅಕ್ರಮ ನಡೆದಿರುವುದು ಮಾತ್ರ ಗೊತ್ತಿದ್ದು, ಕೆಪಿಎಸ್‌ಸಿ ಸದಸ್ಯ ಮುಸ್ತಾಫ ಅವರ ನೇತೃತ್ವದ ಆಯೋಗ ತನಿಖೆ ನಡೆಸಿದೆ ಎಂದು ಅವರು ಹೇಳಿದ್ದಾರೆ ಎನ್ನಲಾಗಿದೆ.