ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

KPSC Recruitment Scam: ಕೆಪಿಎಸ್‌ಸಿ ಹಗರಣ: ಜ್ಞಾನೇಂದ್ರ ಅಮಾನತು: ಕರ್ಮಕಾಂಡಕ್ಕೆ ಮತ್ತೊಂದು ಬಲಿ

2016ನೇ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಜ್ಞಾನೇಂದ್ರ, ಇತ್ತೀಚೆಗೆ ದಿಢೀರನೆ ದೆಹಲಿಗೆ ಪರಾರಿ ಯಾಗಿದ್ದರು. ಈ ವೇಳೆ ಅವರ ನಿವಾಸದ ಬೀಗ ತೆರೆದು ಇಡಿ ಅಧಿಕಾರಿಗಳು ಮನೆಯ ಶೋಧ ನಡೆಸಿದ್ದರು. ಈ ವೇಳೆ ದೊರೆತ ದಾಖಲೆಗಳು ನೇಮ ಕಾತಿ ಅಕ್ರಮದಲ್ಲಿ ಇವರ ನೇರ ಪಾತ್ರವಿರುವುದನ್ನು ಸೂಚಿಸು ತ್ತವೆ ಎಂದು ಸರಕಾರ ತಿಳಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಜ್ಞಾನೇಂದ್ರ ಅಮಾನತು: ಕರ್ಮಕಾಂಡಕ್ಕೆ ಮತ್ತೊಂದು ಬಲಿ

-

Profile
Ashok Nayak Sep 4, 2026 9:05 AM

ಇಡಿ ವಿಚಾರಣೆ ಬಿಸಿ, ಅಕ್ರಮಗಳಿಗೆ ಸಾಕ್ಷ್ಯ

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಅಕ್ರಮಗಳಿಗೆ ಇನ್ನೊಂದು ಬಲಿಯಾಗಿದೆ. ರಾಜ್ಯ ಸರಕಾರವು ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಿದೆ. ಅವರು ಹಿಂದೆ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾಗ ನೇಮಕಾತಿ ಅಕ್ರಮದಲ್ಲಿ ಅವರ ಪಾತ್ರ ವಿದೆ ಎಂಬುದಕ್ಕೆ ಸಾಕ್ಷ್ಯ ಸಿಕ್ಕಿದೆ ಎಂದು ರಾಜ್ಯ ಸರಕಾರ ಹೇಳಿದೆ.

2016ನೇ ಸಾಲಿನ ಐಎಎಸ್ ಅಧಿಕಾರಿಯಾಗಿರುವ ಜ್ಞಾನೇಂದ್ರ, ಇತ್ತೀಚೆಗೆ ದಿಢೀರನೆ ದೆಹಲಿಗೆ ಪರಾರಿ ಯಾಗಿದ್ದರು. ಈ ವೇಳೆ ಅವರ ನಿವಾಸದ ಬೀಗ ತೆರೆದು ಇಡಿ ಅಧಿಕಾರಿಗಳು ಮನೆಯ ಶೋಧ ನಡೆಸಿದ್ದರು. ಈ ವೇಳೆ ದೊರೆತ ದಾಖಲೆಗಳು ನೇಮ ಕಾತಿ ಅಕ್ರಮದಲ್ಲಿ ಇವರ ನೇರ ಪಾತ್ರವಿರು ವುದನ್ನು ಸೂಚಿಸುತ್ತವೆ ಎಂದು ಸರಕಾರ ತಿಳಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಕರ್ನಾಟಕ ಸಾರ್ವಜನಿಕ ಪರೀಕ್ಷಾ (ನೇಮಕಾತಿ ಗಳಲ್ಲಿ ಭ್ರಷ್ಟಾಚಾರ ಮತ್ತು ಅನುಚಿತ ಮಾರ್ಗಗಳ ತಡೆ) ಕಾಯಿದೆ-2023ರ ಅಡಿ ಪ್ರಕರಣ ದಾಖಲಿಸಿಕೊಂಡಿದ್ದ ಸಿಐಡಿ ಪೊಲೀಸರು, ಜ್ಞಾನೇಂದ್ರ ಕುಮಾರ್ ಅವರನ್ನು ಬಂಧಿಸಿದ್ದರು.

ಇದನ್ನೂ ಓದಿ; KPSC Recruitment Scam: ಕೆಪಿಎಸ್‌ಸಿ: 6 ಫಲಾನುಭವಿಗಳಿಂದ ತಪ್ಪೊಪ್ಪಿಗೆ

ಕನ್ನಾಳೆಗೆ ಪ್ರಭಾವಿಗಳ ನಂಟು

ಬೆಂಗಳೂರು: ಕೆಪಿಎಸ್‌ಸಿ ಅಕ್ರಮ ನೇಮಕಾತಿ ಹಗರಣದ ತನಿಖೆಯನ್ನು ತೀವ್ರಗೊಳಿಸಿರುವ ಸಿಐಡಿ ಅಧಿಕಾರಿಗಳಿಗೆ ದಿನಕ್ಕೊಂದು ಸ್ಫೋಟಕ ಸತ್ಯಗಳು ಹೊರ ಬರುತ್ತಿವೆ. ಪ್ರಮುಖ ಆರೋಪಿ ಬಸವರಾಜ್ ಕನ್ನಾಳೆಯ ಮೊಬೈಲ್ ಕರೆಗಳ ವಿವರ ಪರಿಶೀಲಿಸಿದ ಅಧಿಕಾರಿಗಳಿಗೆ ಆತನ ಹೈ-ಫೈ ರಾಜಕೀಯ ಸಂಪರ್ಕ ಜಾಲ ಕಂಡುಬಂದು ತೀವ್ರ ಆಘಾತವಾಗಿದೆ. ಕನ್ನಾಳೆ ಮೊಬೈಲ್‌ನಲ್ಲಿ ಶಾಸಕರು, ಸಂಸದರು ಸೇರಿದಂತೆ ದೇಶ ಹಾಗೂ ರಾಜ್ಯದ 50ಕ್ಕೂ ಹೆಚ್ಚು ಪ್ರಭಾವಿ ರಾಜಕೀಯ ವ್ಯಕ್ತಿಗಳ ಅಸಲಿ ದೂರವಾಣಿ ಸಂಖ್ಯೆಗಳು ಪತ್ತೆಯಾಗಿವೆ.

ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಹೆಚ್ಚುವರಿ ತನಿಖೆಯ ಉದ್ದೇಶದಿಂದ ಆಗ 30 ರಂದು ಅವರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿತ್ತು. ಅಧಿಕಾರಿಯೊಬ್ಬರು 48 ಗಂಟೆಗಳಿಗೂ ಹೆಚ್ಚು ಕಾಲ ಪೊಲೀಸ್ ವಶದಲ್ಲಿ ಅಥವಾ ನ್ಯಾಯಾಂಗ ಬಂಧನದಲ್ಲಿರುವಾಗ ಅಖಿಲ ಭಾರತ ಸೇವಾ ನಿಯಮಗಳ ಪ್ರಕಾರ ಅವರನ್ನು ಅಮಾನತುಗೊಳಿಸುವುದು ಕಡ್ಡಾಯವಾಗಿದೆ. ಈ ಹಿನ್ನೆಲೆ ಯಲ್ಲಿ ರಾಜ್ಯ ಸರಕಾರವು ಈ ಕ್ರಮ ಕೈಗೊಂಡಿದೆ.

ಕನ್ನಾಳೆಗೆ ದೇಶ, ರಾಜ್ಯದ 50ಕ್ಕೂ ಅಧಿಕ ಪ್ರಭಾವಿ ರಾಜಕಾರಣಿಗಳ ನಂಟು: ಇಷ್ಟೊಂದು ಪ್ರಭಾವಿ ರಾಜಕಾರಣಿಗಳ ಸಂಪರ್ಕ ಹೇಗೆ ಸಿಕ್ಕಿತು ಎಂಬ ಸಿಐಡಿ ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸಿದ ಕನ್ನಾಳೆ, ನಾನೊಬ್ಬ ಉದ್ಯಮಿ ಹಾಗೂ ರಾಜಕಾರಣಿ. ನನಗೆ ಟ್ರಾವೆಲ್ಸ್ ಸೇರಿದಂತೆ ಹಲವು ಉದ್ದಿಮೆ ಗಳಿವೆ, ಹೀಗಾಗಿ ದೆಹಲಿಯಿಂದ ಭಾಲ್ಕಿಯವರೆಗೆ ಎಲ್ಲರೂ ನನಗೆ ಪರಿಚಿತರು ಎಂದು ಜಾರಿಕೊಳ್ಳಲು ಯತ್ನಿಸಿದ್ದಾನೆ.

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನವನಾಗಿದ್ದರೂ ಬಸವ ರಾಜ್ ಕನ್ನಾಳೆ ತುಮಕೂರು ವಿಶ್ವ ವಿದ್ಯಾಲಯದ ಹಾಲಿ ಸಿಂಡಿಕೇಟ್ ಸದಸ್ಯನಾಗಿದ್ದಾನೆ ಎಂಬ ವಿಚಾರ ತನಿಖೆಯಲ್ಲಿ ಬಯಲಾಗಿದೆ. ಬಿಜೆಪಿಯ ತುಮಕೂರಿನ ಪ್ರಭಾವಿ ನಾಯಕರೊಬ್ಬರ ನಿಕಟ ಸಂಪರ್ಕ ಬಳಸಿಕೊಂಡು ಈತ ಸಿಂಡಿಕೇಟ್ ಸದಸ್ಯ ಸ್ಥಾನ ಗಿಟ್ಟಿಸಿಕೊಂಡಿದ್ದನು ಎಂಬುದು ಸಿಐಡಿ ವಿಚಾರಣೆ ವೇಳೆ ಬೆಳಕಿಗೆ ಬಂದಿದೆ.

ಕೆಪಿಎಸ್‌ಸಿ ಅಕ್ರಮದ ಜತೆಗೆ ರಾಜ್ಯದಲ್ಲಿ ನಡೆದಿದ್ದ ಸಹಾಯಕ ಪ್ರಾಧ್ಯಾ ಪಕರ ಹುದ್ದೆಗಳ ನೇಮಕಾತಿಯಲ್ಲೂ ದೊಡ್ಡ ಮಟ್ಟದ ಅಕ್ರಮ ನಡೆದಿದೆ ಎಂಬ ಶಾಕಿಂಗ್ ಮಾಹಿತಿ ಸಿಐಡಿಗೆ ಲಭ್ಯವಾಗಿದೆ. ಈ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳಿಗೆ ಮಹತ್ವದ ಸಾಕ್ಷ್ಯಗಳು ಸಿಕ್ಕಿದ್ದು, ಆ ಆಧಾರದ ಮೇಲೆ ದಾಖಲೆಗಳನ್ನು ಕಲೆ ಹಾಕಲಾಗುತ್ತಿದೆ. ಬಸವರಾಜ್ ಕನ್ನಾಳೆ ಬಂಧನದ ಬೆನ್ನ ಆತನ ಜಾಲ ದಲ್ಲಿದ್ದ ಹಲವು ಪ್ರಭಾವಿಗಳು ಹಾಗೂ ಅಕ್ರಮದ ಫಲಾ ನುಭವಿಗಳ ಎದೆಯಲ್ಲಿ ಇದೀಗ ನಡುಕ ಶುರುವಾಗಿದೆ.