ಬೆಂಗಳೂರು: ಕೆಪಿಎಸ್‌ಸಿ ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ (KPSC Scam) ಅವರನ್ನು ಸಿಐಡಿ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಈ ವೇಳೆ ಜ್ಞಾನೇಂದ್ರ ಕುಮಾರ್ ಹಲವು ಮಹತ್ವದ ಸಂಗತಿಗಳನ್ನು ಹೇಳಿದ್ದಾರೆ. CID ವಿಚಾರಣೆ ವೇಳೆ, 6 ಮಾದರಿ ಪ್ರಶ್ನೆಪತ್ರಿಕೆಗಳನ್ನು ಮನೆಗೆ ತೆಗೆದುಕೊಂಡು ಹೋಗಿ ಪರಿಶೀಲನೆ ನಡೆಸುತ್ತಿದ್ದೆ ಎಂದು ಅವರು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ.
ಜ್ಞಾನೇಂದ್ರ ಕುಮಾರ್ ಪರೀಕ್ಷಾ ನಿಯಂತ್ರಕರಾಗಿದ್ದರು. ಇವರಿಂದಲೇ ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿದ್ದು, ಬಸವರಾಜ್ ಕನ್ನಾಳೆಗೆ ಕೊಟ್ಟು, ಕನ್ನಾಳೆ ಮೂಲಕ ಬೇರೆಯವರಿಗೆ ಮಾರಾಟವಾಗಿವೆ ಎಂಬ ಮಾಹಿತಿ ಬಹಿರಂಗವಾಗಿದೆ. ಪ್ರಿಂಟಿಂಗ್ ಹಂತದಲ್ಲಿ ನಡೆದ ಗೋಲ್‌ಮಾಲ್ ಬಗ್ಗೆಯೂ ಬಾಯಿಬಿಟ್ಟಿದ್ದಾರೆ. 'ಅಂತಿಮವಾಗಿ ಪ್ರಿಂಟ್ ಆದ ಪ್ರಶ್ನೆ ಪತ್ರಿಕೆಯನ್ನು ನಾನು ನೇರವಾಗಿ ಹೊರಗೆ ತೆಗೆದಿಲ್ಲ' ಜ್ಞಾನೇಂದ್ರ ಎಂದು ಹೇಳಿದ್ದಾರೆ. ಆದರೆ, ಪ್ರಶ್ನೆ ಪತ್ರಿಕೆ ಪ್ರಿಂಟ್ ಆಗುವುದಕ್ಕೆ ಮುಂಚಿತವಾಗಿ ಶೇ. 60 ರಷ್ಟು ಪ್ರಶ್ನೆಗಳನ್ನು ಮೊದಲೇ ಬರೆದುಕೊಳ್ಳಲಾಗಿತ್ತು ಎಂಬ ಆಘಾತಕಾರಿ ಸಂಗತಿಯನ್ನು ಬಹಿರಂಗಪಡಿಸಿದ್ದಾರೆ.
ನಾವು ಮುಂಚಿತವಾಗಿ ಬರೆದುಕೊಂಡಿದ್ದ ಪ್ರಶ್ನೆಗಳ ಸೀರಿಸ್ ಅನ್ನೇ ಅಂತಿಮವಾಗಿ ಪ್ರಿಂಟ್ ಮಾಡಲು ಸೂಚನೆ ನೀಡಲಾಗಿತ್ತು. ತಾವು ಒಪ್ಪಿಗೆ ಮತ್ತು ಅನುಮೋದನೆ ನೀಡಿದ ಬಳಿಕವೇ ಪ್ರಶ್ನೆಪತ್ರಿಕೆ ಮುದ್ರಣಗೊಂಡಿತ್ತು ಎಂಬುದನ್ನು ಅವರು ಸಿಐಡಿ ಜ್ಞಾನೇಂದ್ರ ಎದುರು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ. ಅಕ್ರಮ ನೇಮಕಾತಿ ಪ್ರಕ್ರಿಯೆಯಲ್ಲಿ ಈತ ಸಹ ಪ್ರಮುಖ ಪಾತ್ರ ವಹಿಸಿರುವ ಶಂಕೆಯ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆಯಲಾಗಿತ್ತು. ಇಬ್ಬರನ್ನೂ ಇಂದು 1ನೇ ಎಸಿಜೆಎಂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಸೆಪ್ಟೆಂಬರ್ 9ರವರೆಗೂ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ ಎಂದು ಸಿಐಡಿ ಮೂಲಗಳು ಖಚಿತಪಡಿಸಿವೆ.
ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಇದೇ ವರ್ಷ ಜನವರಿ 8 ಹಾಗೂ 9ರಂದು ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಂದ ಸುಮಾರು 70ರಿಂದ 80 ಲಕ್ಷ ರೂಪಾಯಿಗಳವರೆಗೆ ಲಂಚ ಪಡೆದಿರುವ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇ.ಡಿ ತನಿಖೆ ಆರಂಭಿಸಿದೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಪಶು ವೈದ್ಯಾಧಿಕಾರಿಗಳ ನೇಮಕಾತಿ ಪರೀಕ್ಷೆಯಲ್ಲಿ ಅಭ್ಯರ್ಥಿಗಳಿಂದ ಸುಮಾರು 70ರಿಂದ 80 ಲಕ್ಷ ರೂಪಾಯಿಗಳವರೆಗೆ ಲಂಚ ಪಡೆದಿರುವ ಗಂಭೀರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ತನಿಖೆ ನಡೆಯುತ್ತಿದೆ. ಅಲ್ಲದೆ, ರಾಜ್ಯ ಸರ್ಕಾರ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಿದೆ.