KS Ramji: ಕಿರುತೆರೆ ನಿರ್ದೇಶಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ; ಅಪಪ್ರಚಾರ ಎಂದು ದೂರು ದಾಖಲಿಸಿದ ರಾಮ್‌ಜೀ
ಕಿರುತೆರೆಯ ಖ್ಯಾತ ನಿರ್ದೇಶಕ ಹಾಗೂ ನಿರ್ಮಾಪಕ ಕೆಎಸ್ ರಾಮ್‌ಜೀ ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್ಗಳು ಫೇಸ್ಬುಕ್ನಲ್ಲಿ ಹರಿದಾಡುತ್ತಿದ್ದವು. ಇದೀಗ ನಿರ್ಮಾಪಕ ರಾಮ್‌ಜೀ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಬೆಂಗಳೂರು: ಪುಟ್ಟಗೌರಿ ಮದುವೆ, ಗಿಣಿರಾಮದಂತಹ ಹಿಟ್ ಧಾರಾವಾಹಿಗಳನ್ನು ನೀಡಿದ್ದ ಕನ್ನಡ ಕಿರುತೆರೆಯ ನಿರ್ದೇಶಕ ಮತ್ತು ನಿರ್ಮಾಪಕ ಕೆಎಸ್ ರಾಮ್‌ಜೀ (KS Ramji) ಯುವತಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂಬ ಪೋಸ್ಟ್ಗಳು ಫೇಸ್ಬುಕ್ನಲ್ಲಿ ಹರಿದಾಡುತ್ತಿದ್ದವು. ಇದೀಗ ನಿರ್ಮಾಪಕ ರಾಮ್‌ಜೀ, ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ತಮ್ಮ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪ ಮಾಡಿದ್ದಾರೆ.
ಇತ್ತೀಚೆಗೆ ಯುವನಟಿ ಒಬ್ಬರು ಯ್ಯುಟ್ಯೂಬ್ ಸಂದರ್ಶನದಲ್ಲಿ ರಾಮ್‌ಜೀ ಅವರ ಹೆಸರನ್ನು ಹೇಳದೆ ಲೈಗಿಂಕ ಕಿರುಕುಳದ ಆರೋಪ ಮಾಡಿದ್ದರು. ಸದ್ಯ ರಾಮ್ ಜೀ ವಿರುದ್ಧದ ಪೋಸ್ಟ್ಗಳು ಹರಿದಾಡುತ್ತಿವೆ. ಸಾಮಾಜಿಕ ಜಾಲತಾಣದಲ್ಲಿ ‘ಎಕ್ಸ್ಪೋಸಿಂಗ್ ಕೆಎಸ್ ರಾಮ್‌ಜೀ’ ಹೆಸರಿನ ಪೇಜ್ ತೆರೆದು ರಾಮ್‌ಜೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳನ್ನು ಮಾಡಲಾಗುತ್ತಿದೆ.
ಆ ಯುವತಿ ತನಗಾದ ಅನ್ಯಾಯದ ವಿರುದ್ಧ ಸಿಡಿದೆದ್ದಿದ್ದು, ಕೆಲವು ಸುದ್ದಿ ವಾಹಿನಿಗಳ ಕದ ತಟ್ಟಿದ್ದರು. ಆದರೆ, ಯಾವುದೇ ಪ್ರಯೋಜನ ಆಗಲಿಲ್ಲ ಆದರೆ, ಕೆ ಎಸ್ ರಾಮ್‌ಜಿ ನ್ಯಾಯಾಲಯದ ಮೊರೆ ಹೋಗಿ ಕಾರ್ಯಕ್ರಮ ಪ್ರಸಾರ ಮಾಡದಂತೆ ತಡೆ ತಂದಿದ್ದಾರೆ’ ಎಂಬ ಪೋಸ್ಟ್ಗಳನ್ನು ಫೇಸ್ಬುಕ್ ಪೇಜ್ನಲ್ಲಿ ಹಂಚಿಕೊಳ್ಳಲಾಗಿದೆ.
ಈ ಸುದ್ದಿಯನ್ನೂ ಓದಿ: Actress Shashikala: ಬಲವಂತವಾಗಿ ನಿರ್ದೇಶಕನ ಮದುವೆಯಾಗಿ ಕಿರುಕುಳ; ಕಿರುತೆರೆ ನಟಿ ಶಶಿಕಲಾ ವಿರುದ್ಧ ಎಫ್‌ಐಆರ್
ಇದೀಗ ಕೆಎಸ್ ರಾಮ್‌ಜೀ ಪೊಲೀಸರಿಗೆ ದೂರು ನೀಡಿದ್ದು, ತಮ್ಮ ವಿರುದ್ಧ ಅಪಪ್ರಚಾರ ಮಾಡಿದವರನ್ನು ತಕ್ಷಣವೇ ಬಂಧಿಸಬೇಕು ಎಂದು ಮನವಿ ಮಾಡಿದ್ದಾರೆ. ತಾವು ಯಾವ ಯುವತಿಗೂ ಲೈಂಗಿಕ ಕಿರುಕುಳ ನೀಡಿಲ್ಲ, ಯಾವುದೇ ಅಪರಾಧ ಮಾಡಿಲ್ಲ ಎಂದು ರಾಮ್‌ಜೀ ಹೇಳಿದ್ದಾರೆ. ಕನ್ನಡದ ಪ್ರಸಿದ್ಧ ನಿರ್ದೇಶಕ ನಿರ್ಮಾಪಕರ ವಿರುದ್ಧ ಈ ರೀತಿಯ ಆರೋಪ ಕೇಳಿ ಬಂದಿರುವುದು ಕಿರುತೆರೆ ಲೋಕದಲ್ಲಿ ಆತಂಕ ಸೃಷ್ಟಿ ಮಾಡಿದೆ.