ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ (Karnataka SSLC Result 2026) ಇಂದು (ಏ.23) ಮಧ್ಯಾಹ್ನ 12 ಗಂಟೆಗೆ ಪ್ರಕಟವಾಗಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪ್ರಕಟಣೆಯಲ್ಲಿ ತಿಳಿಸಿದ್ದು, ವಿದ್ಯಾರ್ಥಿಗಳು ಫಲಿತಾಂಶವನ್ನು https://karresults.nic.in/ ಮತ್ತು ಕರ್ನಾಟಕ ಒನ್ ಆ್ಯಪ್ (KarnatakaOne Mobile App) ಮೂಲಕ ಪಡೆಯಬಹುದಾಗಿದೆ. ಅಲ್ಲದೆ, ವಿದ್ಯಾರ್ಥಿಗಳ ನೊಂದಾಯಿತ ಮೊಬೈಲ್ ಸಂಖ್ಯೆಗೆ ವಾಟ್ಸ್ ಆ್ಯಪ್/ಎಸ್‌ಎಂಎಸ್ (SMS) ಮೂಲಕವೂ ಫಲಿತಾಂಶದ ಮಾಹಿತಿಯನ್ನು ಮಂಡಲಿಯಿಂದ ರವಾನಿಸಲಾಗುತ್ತದೆ.
ಈ ವರ್ಷ ಪ್ರಥಮ ಬಾರಿಗೆ ವಿಶೇಷವಾಗಿ, ವಿದ್ಯಾರ್ಥಿಗಳ ಫಲಿತಾಂಶದ ಅಂಕಪಟ್ಟಿಯನ್ನು (Marks Card) ಡಿಜಿಲಾಕರ್ (DigiLocker) ಮೂಲಕ ಇಂದು ಮಧ್ಯಾಹ್ನ 12 ಗಂಟೆಗೆ https://www.digilocker.gov.in/ ಮೂಲಕ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಅಂಕಪಟ್ಟಿಯನ್ನು ಡಿಜಿಲಾಕರ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳವ ಪ್ರಕ್ರಿಯೆಯನ್ನು ಈ Video link https://www.youtube.com/shorts/mu-B4tBwaf8 ಬಳಸಿ ತಿಳಿದುಕೊಳ್ಳಬಹುದು. ಫಲಿತಾಂಶ ಪಟ್ಟಿಯು ಸಂಬಂಧಿತ ಶಾಲೆಗಳಿಗೆ ಏಪ್ರಿಲ್ 23 ಮಧ್ಯಾಹ್ನ 12 ಗಂಟೆಗೆ ಲಭ್ಯವಾಗಲಿದೆ ಎಂದು ಪರೀಕ್ಷಾ ಮಂಡಲಿ ತಿಳಿಸಿದೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ನೋಡುವುದು ಹೇಗೆ?
- ಮೊದಲು ಕೆಎಸ್ಎಇಅಬಿ ಅಧಿಕೃತ ವೆಬ್‌ಸೈಟ್ karresults.nic.in ಗೆ ಭೇಟಿ ಕೊಡಿ
- ಜಾಲತಾಣದ ಪರದೆ ಮೇಲೆ ಕಾಣುವ SSLC Result 2026 ಆಯ್ಕೆ ಮೇಲೆ ಕ್ಲಿಕ್ ಮಾಡಿ
- ಬಳಿಕ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕ ಮಾಹಿತಿ ನಮೂದಿಸಿ
- ವಿವರ ಹಾಕಿದ ಬಳಿಕ ಸಲ್ಲಿಸು/ಸಮ್ಮಿಟ್ ಬಟನ್ ಒತ್ತಿ
- ಪರದೆ ಮೇಲೆ SSLC 2026 ಅಂಕಪಟ್ಟಿ ಕಾಣಿಸುತ್ತದೆ
- ನಿಮ್ಮ ಅಂಕಪಟ್ಟಿಯೇ ಎಂದು ಪರಿಶೀಲಿಸಿಕೊಂಡು ಡೌನ್‌ಲೋಡ್ ಮಾಡಿಕೊಳ್ಳಬಹುದು.
- ಡಿಜಿಲಾಕರ್ ಮತ್ತು ಕರ್ನಾಟಕ ಒನ್ ಅಪ್ಲಿಕೇಶನ್‌ನಲ್ಲೂ ಸಹ KSEAB 10 ನೇ ತರಗತಿ ಅಂಕಪಟ್ಟಿ 2026 ದೊರೆಯಲಿದೆ.
ರಾಜ್ಯದಲ್ಲಿ ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ - 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆದಿತ್ತು. ಪರೀಕ್ಷೆಗೆ 9,02,889 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 8,12,855 ಮಂದಿ ಹೊಸಬರು, 62,845 ಮಂದಿ ಪುನರಾವರ್ತಿತ ಅಭ್ಯರ್ಥಿಗಳು ಹಾಗೂ 27,189 ಖಾಸಗಿ ಅಭ್ಯರ್ಥಿಗಳು ಇದ್ದರು.