ಬೆಂಗಳೂರು: ಅ.11ರಂದು ನಡೆಸಲಾದ ಪದವಿ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಯ (ಕೆಸೆಟ್) 37 ವಿಷಯಗಳ ತಾತ್ಕಾಲಿಕ ಫಲಿತಾಂಶವನ್ನು (KSET Result 2026) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಪ್ರಕಟಿಸಿದೆ. ಅಭ್ಯರ್ಥಿಗಳು ಕೆಇಎ ವೆಬ್ಸೈಟ್ನಲ್ಲಿ ತಾತ್ಕಾಲಿಕ ಫಲಿತಾಂಶ ವೀಕ್ಷಿಸಬಹುದು.
ಈ ಬಗ್ಗೆ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಮಾಹಿತಿ ನೀಡಿದ್ದಾರೆ. ತಾತ್ಕಾಲಿಕ ಫಲಿತಾಂಶದ ಬಗ್ಗೆ ಆಕ್ಷೇಪಣೆಗಳು ಇದ್ದಲ್ಲಿ ಪೂರಕ ದಾಖಲೆಗಳೊಂದಿಗೆ ಅ.26ರ ಬೆಳಿಗ್ಗೆ 10.30 ಗಂಟೆ ಒಳಗೆ ಇ-ಮೇಲ್ ಮೂಲಕ ತಿಳಿಸಬೇಕು. ಇನ್ನು ಪರೀಕ್ಷೆಯ ಅಂತಿಮ ಕೀ ಉತ್ತರಗಳನ್ನೂ ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2026 ಅನ್ನು ಅ.11ರಂದು ನಡೆಸಲಾಗಿತ್ತು. ಪತ್ರಿಕೆ-1 ಮತ್ತು ಪತ್ರಿಕೆ-2ರ ಒಟ್ಟು 37 ವಿಷಯಗಳಿಗೆ ಕೀ ಉತ್ತರಗಳನ್ನು ಕೆಇಎ ವೆಬ್ಸೈಟ್ನಲ್ಲಿ ಅ.12ರಂದು ಪ್ರಕಟಿಸಿ, ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ ಅ.14ರ ಬೆಳಿಗ್ಗೆ 10.30 ಗಂಟೆಯೊಳಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಅದರಂತೆ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಮೂಲಕ ಪರಿಶೀಲಿಸಿ ಪರಿಷ್ಕೃತ ಕೀ ಉತ್ತರಗಳನ್ನು ಅ.23ರಂದು ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿದೆ. ಪ್ರಕಟಿತ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಫಲಿತಾಂಶವನ್ನು ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ.
ತಾತ್ಕಾಲಿಕ ಫಲಿತಾಂಶಕ್ಕೆ ಆಕ್ಷೇಪಣೆಗಳಿದ್ದಲ್ಲಿ https://cetonline.karnataka.gov.in/kea/ಮೂಲಕ ಅ.26ರ ಬೆಳಗ್ಗೆ 10.30 ರೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಇನ್ನು ಕೀ ಉತ್ತರಗಳಿಗೆ ಸಂಬಂಧಿಸಿದ ಅಥವಾ ಪೂರಕ ದಾಖಲೆಗಳಿಲ್ಲದೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ತಿಳಿಸಿದ್ದಾರೆ.
ಕೆಸೆಟ್ ಫಲಿತಾಂಶದ ತಾತ್ಕಾಲಿಕ ಫಲಿತಾಂಸ ವೀಕ್ಷಿಸಲು ಈ ಲಿಂಕ್ ಕ್ಲಿಕ್ KEA Website ಮಾಡಿ
ಫಲಿತಾಂಶ ಚೆಕ್ ಮಾಡುವುದು ಹೇಗೆ?
- ಕೆಇಎ ವೆಬ್ಸೈಟ್ಗೆ ಭೇಟಿ ನೀಡಿ https://cetonline.karnataka.gov.in/kea/kset2026
- ಮುಖಪುಟದಲ್ಲಿ ಪ್ರವೇಶ ಕೆಟಗರಿಯಲ್ಲಿ ಕೆಸೆಟ್ - 2026 ಮೇಲೆ ಕ್ಲಿಕ್ ಮಾಡಿ
- ಅರ್ಜಿ ಸಂಖ್ಯೆ ಮತ್ತು ಜನ್ಮ ದಿನಾಂಕ ನಮೂದು ಮಾಡಿ, ಫಲಿತಾಂಶ ಪಡೆಯಿರಿ
ಫಲಿತಾಂಶ ಪ್ರಕಟಣೆಯ ವಿಧಾನ :
ಸಹಾಯಕ ಪ್ರಾಧ್ಯಾಪಕರ ಅರ್ಹತೆಗೆ ಪರಿಗಣಿಸಬೇಕಾದರೆ, ಪತ್ರಿಕೆ I ಮತ್ತು ಪತ್ರಿಕೆ - II ರಲ್ಲೂ ಹಾಜರಾಗಿ, GM ಅಭ್ಯರ್ಥಿಗಳು ಎರಡೂ ಪತ್ರಿಕೆಗಳೂ ಸೇರಿ ಒಟ್ಟು ಶೇ.40 ಅಂಕಗಳು ಮತ್ತು ಮೀಸಲಾತಿ ವ್ಯಾಪ್ತಿಗೆ ಬರುವ ಪ.ಜಾ/ಪ.ಪಂ, ಇತರೆ ಹಿಂದುಗಳಿದ ವರ್ಗ, ತೃತೀಯ ಲಿಂಗದ ಮತ್ತು ವಿಶೇಷಚೇತನ ಅಭ್ಯರ್ಥಿಗಳು ಎರಡೂ ಪತ್ರಿಕೆಗಳಲ್ಲೂ ಸೇರಿ ಶೇ.35 ಅಂಕಗಳನ್ನು ಗಳಿಸಿರಬೇಕು. ಅಂತಹ ಅಭ್ಯರ್ಥಿಗಳನ್ನು ಮಾತ್ರ ಅರ್ಹತಾ ಪಟ್ಟಿಗೆ ಪರಿಗಣಿಸಲಾಗುವುದು. ಅಭ್ಯರ್ಥಿಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ವಿಷಯವಾರು, ವರ್ಗವಾರು ಮೆರಿಟ್ ಪಟ್ಟಿಯನ್ನು ತಯಾರಿಸಲಾಗುವುದು.
ಯುಜಿಸಿಯ ಫಲಿತಾಂಶದ ಸೂತ್ರದ ಪ್ರಕಾರ ಒಟ್ಟು ಸ್ಲಾಟ್ಗಳನ್ನು ಲೆಕ್ಕಾಚಾರಮಾಡಿ ರಾಜ್ಯ ಸರ್ಕಾರದ ಮೀಸಲಾತಿ ನೀತಿಯ ಅನುಸಾರವಾಗಿ ಅರ್ಹತಾ ಪಟ್ಟಿಯನ್ನು ವಿಷಯವಾರು, ವರ್ಗವಾರು ಸಿದ್ದಪಡಿಸಿ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.
ಯುಜಿಸಿಯ ಸೆಟ್ ಮಾರ್ಗಸೂಚಿಗಳ ಪ್ರಕಾರ, ಎರಡು ಪತ್ರಿಕೆಗಳಿಗೂ ಹಾಜರಾಗುವ ಅಭ್ಯರ್ಥಿಗಳಲ್ಲಿ ಶೇ.6 ರಷ್ಟು ಅಭ್ಯರ್ಥಿಗಳು ಮಾತ್ರ ಸಹಾಯಕ ಪ್ರಾಧ್ಯಾಪಕರಿಗೆ ಅರ್ಹರು ಎಂದು ಪರಿಗಣಿಸಲಾಗುತ್ತದೆ. ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಮೀಸಲಾತಿ ನೀತಿಯನ್ನು ಅನುಸರಿಸಿ ಪ್ರವರ್ಗವಾರು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪಟ್ಟಿಯನ್ನು ತಯಾರಿಸಲಾಗುತ್ತದೆ.