ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ADGP S Ravi: ಕೆಎಸ್‌ಆರ್‌ಪಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಸ್. ರವಿ ದಿಢೀರ್‌ ರಾಜೀನಾಮೆ; ಕಾರಣ ಏನು?

1998ರ ಬ್ಯಾಚ್‌ನ ದಕ್ಷ ಐಪಿಎಸ್ ಅಧಿಕಾರಿಯಾಗಿರುವ ಎಸ್. ರವಿ ಅವರು ಡಿಜಿ-ಐಜಿಪಿ ಕಚೇರಿಗೆ ತಮ್ಮ ಸ್ವಯಂ ನಿವೃತ್ತಿಯ ಅರ್ಜಿಯನ್ನು ಸಲ್ಲಿಸಿದ್ದು, ಡಿಜಿ-ಐಜಿಪಿ ಎಂ.ಎ. ಸಲೀಂ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ನಿವೃತ್ತಿ ಹತ್ತಿರವಿರುವಾಗಲೇ ಸೇವೆಗೆ ವಿದಾಯ ಹೇಳಲು ಅವರು ನಿರ್ಧರಿಸಿದ್ದಾರೆ.

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಹಿರಿಯ ಐಪಿಎಸ್ ಅಧಿಕಾರಿ, ಹಾಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ (ಕೆಎಸ್‌ಆರ್‌ಪಿ) ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಎಸ್. ರವಿ (S Ravi) ಅವರು ಮಂಗಳವಾರ ದಿಢೀರನೆ ರಾಜೀನಾಮೆ ಸಲ್ಲಿಸಿದ್ದಾರೆ. ಸೇವಾವಧಿಯ ನಿವೃತ್ತಿಗೆ ಕೇವಲ ಆರು ತಿಂಗಳು ಬಾಕಿ ಇರುವಾಗಲೇ ಅವರು ಈ ನಿರ್ಧಾರ ಕೈಗೊಂಡಿರುವುದು ಚರ್ಚೆಗೆ ಗ್ರಾಸವಾಗಿದೆ.

1998ರ ಬ್ಯಾಚ್‌ನ ದಕ್ಷ ಐಪಿಎಸ್ ಅಧಿಕಾರಿಯಾಗಿರುವ ಎಸ್. ರವಿ ಅವರು ಡಿಜಿ-ಐಜಿಪಿ ಕಚೇರಿಗೆ ತಮ್ಮ ಸ್ವಯಂ ನಿವೃತ್ತಿಯ ಅರ್ಜಿಯನ್ನು ಸಲ್ಲಿಸಿದ್ದು, ಡಿಜಿ-ಐಜಿಪಿ ಎಂ.ಎ. ಸಲೀಂ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದಾರೆ. ನಿಯಮಾವಳಿಗಳ ಪ್ರಕಾರ ಮೂರು ತಿಂಗಳ ನೋಟಿಸ್ ಅವಧಿಯಲ್ಲಿ ಮುಂದುವರಿಯುವಂತೆ ಅವರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ತಮ್ಮ ರಾಜೀನಾಮೆ ಪತ್ರದಲ್ಲಿ ಎಸ್. ರವಿ ಅವರು ‘ವೈಯಕ್ತಿಕ ಕಾರಣ’ಗಳನ್ನು ಉಲ್ಲೇಖಿಸಿದ್ದಾರೆ. ಆದರೆ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗಿನ ಆಂತರಿಕ ಮನಸ್ತಾಪ ಹಾಗೂ ಇತ್ತೀಚಿನ ಬೆಳವಣಿಗೆಗಳಿಂದ ಅಸಮಾಧಾನಗೊಂಡಿದ್ದೇ ಅವರ ಈ ದಿಢೀರ್ ನಿರ್ಧಾರಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ.

ಈ ಹಿಂದೆ ಮಹತ್ವದ ಗುಪ್ತಚರ ಇಲಾಖೆಯ ಎಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್. ರವಿ ಅವರನ್ನು ಕೆಲ ತಿಂಗಳುಗಳ ಹಿಂದಷ್ಟೇ ಯಾವುದೇ ಪೂರ್ವಸೂಚನೆಯಿಲ್ಲದೆ ಏಕಾಏಕಿ ಕೆಎಸ್‌ಆರ್‌ಪಿ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿತ್ತು. ಪ್ರಮುಖ ಹುದ್ದೆಯಿಂದ ಕೆಎಸ್‌ಆರ್‌ಪಿಗೆ ವರ್ಗಾಯಿಸಿದ್ದರಿಂದ ಅವರು ಬೇಸರಗೊಂಡಿದ್ದರು ಎನ್ನಲಾಗಿದ್ದು, ನಿವೃತ್ತಿ ಹತ್ತಿರವಿರುವಾಗಲೇ ಸೇವೆಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ.