DCM DK Shivakumar: ಕುಮಾರಸ್ವಾಮಿ ಖಾಲಿ ಟ್ರಂಕ್; ಬೆಂಗಳೂರು ನಡಿಗೆ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ (A Khata) ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ ಕುಮಾರಸ್ವಾಮಿ ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM) ಅವರು ವಾಗ್ದಾಳಿ ನಡೆಸಿದರು.
-
Vishakha Bhat
Oct 26, 2025 9:20 AM
ಬೆಂಗಳೂರಿನ ಬಿ ಖಾತಾ ಆಸ್ತಿಗಳನ್ನು ಎ ಖಾತಾಗೆ ಪರಿವರ್ತನೆ ಮಾಡುತ್ತಿರುವ ಬಗ್ಗೆ ಇಲ್ಲಸಲ್ಲದ ಟೀಕೆ ಮಾಡುತ್ತಿರುವ (Kumaraswamy) ಕುಮಾರಸ್ವಾಮಿ (DCM DK Shivakumar) ಖಾಲಿ ಟ್ರಂಕ್ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ಕಬ್ಬನ್ ಪಾರ್ಕ್ ನಲ್ಲಿ ಭಾನುವಾರ ನಡೆದ ಬೆಂಗಳೂರು ನಡಿಗೆ ಕಾರ್ಯಕ್ರಮದ ವೇಳೆ ಡಿಸಿಎಂ ಸಾರ್ವಜನಿಕರ ಜೊತೆ ಮಾತನಾಡಿದರು. ಈ ವೇಳೆ ನಾಗರಿಕರೊಬ್ಬರು, ಸರ್ಕಾರ ಎಲ್ಲಾ ಆಸ್ತಿಗಳನ್ನು ಎ ಖಾತಾ ಆಗಿ ಪರಿವರ್ತನೆ ಮಾಡುತ್ತಿರುವುದು ಒಳ್ಳೆಯ ಕೆಲಸ. ಈ ಪರಿವರ್ತನೆಗಾಗಿ ಅನೇಕರು, ಹಲವು ವರ್ಷಗಳಿಂದ ಕಾಯುತ್ತಿದ್ದರು ಎಂದು ಸರ್ಕಾರದ ತೀರ್ಮಾನವನ್ನು ಸ್ವಾಗತಿಸಿ, ಮುಕ್ತವಾಗಿ ಪ್ರಶಂಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ, ಎ ಖಾತಾ ನಿಮ್ಮ ಆಸ್ತಿ ದಾಖಲೆ. ಸಾರ್ವಜನಿಕರ ಆಸ್ತಿ ದಾಖಲೆಗಳನ್ನು ಸರಿಪಡಿಸಿ, ಅವುಗಳನ್ನು ಜನರಿಗೆ ನೀಡುವುದು ನಮ್ಮ ಸರ್ಕಾರದ ಆರನೇ ಗ್ಯಾರಂಟಿ. ಇದಕ್ಕಾಗಿ ನಾವು ಕೇವಲ 5% ಮಾತ್ರ ಅಭಿವೃದ್ಧಿ ಶುಲ್ಕ ಪಾವತಿ ಮಾಡುವಂತೆ ಕೇಳಿದ್ದೇವೆ. ನಿಮ್ಮಂತಹ ಪ್ರಜ್ಞಾವಂತ ನಾಗರೀಕರು ಇದನ್ನು ಸ್ವಾಗತಿಸಿರುವುದಕ್ಕೆ ಧನ್ಯವಾದ" ಎಂದು ಹೇಳಿದ್ದಾರೆ.
ಬೆಂಗಳೂರಿನ ಅಭಿವೃದ್ದಿ ಕುರಿತು ಮೊನ್ನೆ ಮಾತನಾಡಿದ್ದ ಡಿಸಿಎಂ ಬೆಂಗಳೂರಿನಲ್ಲಿ ವಾಹನಗಳ ಸಂಖ್ಯೆ ಹೆಚ್ಚಾಗಿದೆ, ರಸ್ತೆ ಗಾತ್ರ ಮಾತ್ರ ಅಷ್ಟೇ ಇದೆ. ಹೀಗಾಗಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಇದನ್ನು ಬಗೆಹರಿಸಲು 117 ಕಿ.ಮೀ ಉದ್ಧದ ಬೆಂಗಳೂರು ಬಿಸಿನೆಸ್ ಕಾರಿಡಾರ್ ರಸ್ತೆ ನಿರ್ಮಾಣ ಮಾಡುತ್ತಿದ್ದೇವೆ. ಈಗಾಗಲೇ ಅಧಿಸೂಚನೆ ಹೊರಡಿಸಿರುವ ಜಮೀನುಗಳನ್ನು ನಾನು ಯಾವುದೇ ಕಾರಣಕ್ಕೂ ಡಿನೋಟಿಫಿಕೇಷನ್ ಮಾಡುವುದಿಲ್ಲ. ಭೂಸಂತ್ರಸ್ತರಿಗೆ ಅಗತ್ಯ ಪರಿಹಾರ ನೀಡುತ್ತೇವೆ ಎಂದು ಭರವಸೆ ನೀಡಿದ್ದರು.
ಈ ಸುದ್ದಿಯನ್ನೂ ಓದಿ: DK Shivakumar: ಬೆಂಗಳೂರಿನ ಸೌಲಭ್ಯ ಬಳಸಿಕೊಂಡು ಬೆಳೆದವರು ಟೀಕೆ, ಟ್ವೀಟ್ ಮಾಡುತ್ತಿದ್ದಾರೆ: ಡಿಸಿಎಂ ಡಿಕೆಶಿ ಕಿಡಿ
“ಬೆಂಗಳೂರು ದೊಡ್ಡ ಗಾತ್ರದಲ್ಲಿ ಬೆಳೆದಿದೆ. ಜನಸಂಖ್ಯೆ 1.40 ಕೋಟಿಗೆ ಏರಿಕೆಯಾಗಿದೆ. 70 ಲಕ್ಷ ಜನ ನಿತ್ಯ ಬಂದು ಹೋಗುತ್ತಾರೆ. 110 ಹಳ್ಳಿಗಳಿಗೆ ಕಾವೇರಿ ನೀರು ಒದಗಿಸಿರಲಿಲ್ಲ, ನಾನು ಬಂದ ನಂತರ ತೊರೆಕಾಡನಹಳ್ಳಿಯಿಂದ ಕಾವೇರಿ ನೀರನ್ನು ತಂದು ನಿಮಗೆ ನೀರು ಒದಗಿಸಿದ್ದೇವೆ. ಆದರೂ ಅನೇಕರು ಇದರ ಸಂಪರ್ಕ ಪಡೆದಿಲ್ಲ. ಈ ಅವಕಾಶ ಕಳೆದುಕೊಳ್ಳಬೇಡಿ. ನೀರು ಬೇರೆಡೆಗೆ ಹೋಗುತ್ತಿದೆ. ಈ ಭಾಗದ ಜನರು ಸಂಪರ್ಕ ತೆಗೆದುಕೊಳ್ಳಿ. ಸಂಪರ್ಕ ಪಡೆಯಲು ವಿವಿಧ ಕಂತುಗಳಲ್ಲಿ ಹಣ ಪಾವತಿಗೂ ಅವಕಾಶ ಕಲ್ಪಿಸಿದ್ದೇವೆ” ಎಂದು ತಿಳಿಸಿದರು.