ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಜಾಗತಿಕ ಭಾಷಾ ಜಾತ್ರೆಯಾಗಿ ಕುಂದಾಪ್ರ ಕನ್ನಡ ಹಬ್ಬ ಆಚರಣೆ

Kundapra Kannada Habba: ರಾಜಧಾನಿ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ ಕಳೆದ ಎಂಟು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ 'ವಿಶ್ವ ಕುಂದಾಪ್ರ ಕನ್ನಡ ಹಬ್ಬ ಈ ಸಲ ಜಾಗತಿಕ ಸ್ವರೂಪ ತಳೆದಿದ್ದು, 'ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027' ಎಂಬ ಹೆಸರಿನಲ್ಲಿ ಅದು ಅದ್ಧೂರಿಯಾಗಿ ಆಚರಣೆ ಆಗಲಿದೆ.

ಕುಂದಾಪ್ರ ಕನ್ನಡ ಹಬ್ಬ ಆಚರಣೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕುಂದಾಪ್ರ ಕನ್ನಡ ಪ್ರತಿಷ್ಠಾನ ಕಳೆದ ಎಂಟು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿರುವ 'ವಿಶ್ವ ಕುಂದಾಪ್ರ ಕನ್ನಡ ಹಬ್ಬ' (Kundapra Kannada Habba) ಈ ಸಲ ಜಾಗತಿಕ ಸ್ವರೂಪ ತಳೆದಿದ್ದು, 'ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027' ಎಂಬ ಹೆಸರಿನಲ್ಲಿ ಅದು ಅದ್ಧೂರಿಯಾಗಿ ಆಚರಣೆ ಆಗಲಿದೆ. ವಿಜಯನಗರದ ಬಂಟರ ಸಂಘದಲ್ಲಿ ಶನಿವಾರ ಆಯೋಜಿಸಿದ 'ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ'ಯಲ್ಲಿ ಹಲವು ಅತಿಥಿ ಗಣ್ಯರ ಸಮ್ಮುಖದಲ್ಲಿ ಈ ಬಗ್ಗೆ ಬೃಹತ್ ಘೋಷಣೆ ಮಾಡಲಾಗಿದೆ.

ವಿಶ್ವದ ಎಲ್ಲ ಕಡೆಯಲ್ಲಿ ನಡೆಯುತ್ತಿರುವ ಕುಂದಾಪ್ರ ಕನ್ನಡ ದಿನಾಚರಣೆಯನ್ನು ಬೃಹತ್ ಪ್ರಮಾಣದಲ್ಲಿ ಒಂದೇ ಕಡೆ ಆಯೋಜಿಸಿದರೆ ಹೇಗೆ ಎಂಬ ಕಲ್ಪನೆ-ಕನಸಿನಲ್ಲಿ ಈ ಸಾಹಸಕ್ಕೆ ಮುಂದಾಗಿದ್ದೇವೆ' ಎಂದು ಕುಂದಾಪ್ರ ಕನ್ನಡ ಪ್ರತಿಷ್ಠಾನದ ಅಧ್ಯಕ್ಷ ಡಾ.ದೀಪಕ್ ಶೆಟ್ಟಿ ಬಾರ್ಕೂರು ಘೋಷಿಸಿದ್ದಾರೆ. ಅರಮನೆ ಮೈದಾನದ ರಾಯಲ್ ತ್ರಿಪುರವಾಸಿನಿಯಲ್ಲಿ 2027ರ ಜನವರಿ 30-31ರಂದು ಹಿಂದೆಂದಿಗಿಂತಲೂ ಅದ್ಭುತ ರೀತಿಯಲ್ಲಿ 'ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027' ನಡೆಯಲಿದ್ದು, ಇದರಲ್ಲಿ ಸುಮಾರು ಮೂರು ಲಕ್ಷಕ್ಕೂ ಅಧಿಕ ಜನರು ಸೇರುವ ನಿರೀಕ್ಷೆ ಇದೆ ಎಂದು ತಿಳಿಸಿದರು.

Kundrapra Habba

ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ, ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು, ನಾಯಕ ನಟ ನಿರಂಜನ ಸುಧೀಂದ್ರ, ನಟ-ನಿರ್ಮಾಪಕ ಪ್ರಮೋದ್ ಶೆಟ್ಟಿ, ಚಿತ್ರಸಾಹಿತಿ ಪ್ರಮೋದ್ ಮರವಂತೆ, ಎ.ಎಸ್.ಕೇಟರರ್ಸ್‌ನ ಸತೀಶ್ ಶೆಟ್ಟಿ ಮತ್ತು ಅಮರನಾಥ ಶೆಟ್ಟಿ ಹೆಗ್ಗುಂಜೆ ಮುಂತಾದ ಗಣ್ಯರ ಸಮ್ಮುಖದಲ್ಲಿ ವಿಭಿನ್ನ ರೀತಿಯಲ್ಲಿ ವಿಶ್ವ ಕುಂದಾಪ್ರ ಕನ್ನಡ ಸಮ್ಮೇಳನ-2027ರ ಬೃಹತ್ ಘೋಷಣೆ ಮಾಡಲಾಯಿತು. ಕುಂದಾಪ್ರ ಕನ್ನಡ ಪ್ರತಿಷ್ಠಾನದ ಗೌರವಾಧ್ಯಕ್ಷ ಉದಯಕುಮಾರ್ ಹೆಗ್ಡೆ, ಉಪಾಧ್ಯಕ್ಷ ನರಸಿಂಹ ಬೀಜಾಡಿ, ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಕಾಂಚನ್, ಖಜಾಂಚಿ ವಿಜಯ್ ಶೆಟ್ಟಿ ಹಾಲಾಡಿ, ಜಂಟಿ ಕಾರ್ಯದರ್ಶಿ ಅಜಿತ್ ಶೆಟ್ಟಿ ಉಳ್ತೂರು ಮುಂತಾದವರು ಉಪಸ್ಥಿತರಿದ್ದರು

Vishakha Bhat Heggar

View all posts by this author