ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Landlord Movie: ರಚಿತಾ ರಾಮ್ ಹುಟ್ಟುಹಬ್ಬಕ್ಕೆ ʼಲ್ಯಾಂಡ್ ಲಾರ್ಡ್ʼ ಚಿತ್ರದ ಕ್ಯಾರೆಕ್ಟರ್ ಟೀಸರ್ ಬಿಡುಗಡೆ

Rachita Ram: ಈ ವರ್ಷದ ಬರ್ತ್ ಡೇ ನನಗೆ ತುಂಬಾ ಸ್ಪೆಷಲ್. ʼಲ್ಯಾಂಡ್ ಲಾರ್ಡ್ʼ ಚಿತ್ರತಂಡದ ಕಡೆಯಿಂದ ಈ ಟೀಸರ್ ನನಗೆ ಸರ್‌ಪ್ರೈಸ್ ‌ಗಿಫ್ಟ್. ಇದೊಂದು ವಿಭಿನ್ನ ಪಾತ್ರ ಎಂದು ನಟಿ ರಚಿತಾ ರಾಮ್ ತಿಳಿಸಿದ್ದಾರೆ.

ಬೆಂಗಳೂರು: ನಟಿ ರಚಿತಾ ರಾಮ್ ಅವರು ರಾಜರಾಜೇಶ್ವರಿ ನಗರದಲ್ಲಿರುವ ತಮ್ಮ‌ನಿವಾಸದಲ್ಲಿ ಅಭಿಮಾನಿಗಳೊಂದಿಗೆ ಕೇಕ್ ಕಟ್ ಮಾಡುವ ಮೂಲಕ ಹುಟ್ಟುಹಬ್ಬ ಆಚರಿಸಿಕೊಂಡರು. ಇದೇ ಸಂದರ್ಭದಲ್ಲಿ ರಚಿತಾ ರಾಮ್ (Rachita Ram) ಅಭಿನಯದ ʼಲ್ಯಾಂಡ್ ಲಾರ್ಡ್ʼ ಚಿತ್ರದ (Landlord Movie) ರಚಿತಾ ರಾಮ್ ಅವರ ಕ್ಯಾರೆಕ್ಟರ್ ಟೀಸರ್ ಬಿಡುಗಡೆ ಮಾಡಲಾಯಿತು. ಕೆ.ವಿ. ಸತ್ಯಪ್ರಕಾಶ್, ಹೇಮಂತ್ ಗೌಡ ಕೆ.ಎಸ್. ಅವರ ನಿರ್ಮಾಣದ, ಜಡೇಶ್ ಕೆ. ಹಂಪಿ ಅವರ ನಿರ್ದೇಶನದ 'ಲ್ಯಾಂಡ್ ಲಾರ್ಡ್' ಚಿತ್ರದಲ್ಲಿ ದುನಿಯಾ ವಿಜಯ್ ನಾಯಕನಾಗಿ ನಟಿಸಿದ್ದು ರಚಿತಾ ರಾಮ್ ನಾಯಕಿ ಪಾತ್ರ ನಿರ್ವಹಿಸಿದ್ದಾರೆ.

Landlord Movie 1

ಈ ಸಂದರ್ಭದಲ್ಲಿ ನಟಿ ರಚಿತಾ ರಾಮ್ ಮಾತನಾಡಿ, ಈ ವರ್ಷದ ಬರ್ತ್ ಡೇ ನನಗೆ ತುಂಬಾ ಸ್ಪೆಷಲ್. ʼಲ್ಯಾಂಡ್ ಲಾರ್ಡ್ʼ ಚಿತ್ರತಂಡದ ಕಡೆಯಿಂದ ಈ ಟೀಸರ್ ನನಗೆ ಸರ್ ಪ್ರೈಸ್ ‌ಗಿಫ್ಟ್. ಇದೊಂದು ವಿಭಿನ್ನ ಪಾತ್ರ ಎಂದು ಹೇಳಿದರು.

ನಿರ್ದೇಶಕ ಜಡೇಶ್ ಕೆ. ಹಂಪಿ ಮಾತನಾಡಿ, ಇಂಥಹ ಪಾತ್ರವನ್ನು ರಚಿತಾ ರಾಮ್ ಅವರು ಒಪ್ಪುತ್ತಾರಾ? ಎಂಬ ಆತಂಕವಿತ್ತು. ಅವರು ಒಪ್ಪಿಕೊಂಡು ಅಭಿನಯಿಸಿದ್ದು ತುಂಬಾ ಸಂತೋಷ. ʼಕೂಲಿʼ ಚಿತ್ರದಲ್ಲಿ ಕಲ್ಯಾಣಿಯಾಗಿ ನಟಿಸಿದ್ದರು. ಅದಕ್ಕಿಂತ ಬೇರೆ ಥರದಲ್ಲಿ ಈ ಪಾತ್ರ ಮೂಡಿಬಂದಿದೆ. ಇದರಲ್ಲಿ ಅವರು ಚಿನ್ನಮ್ಮ ಆಗಿದ್ದಾರೆ ಎಂದು ಹೇಳಿದರು.

ನಿರ್ಮಾಪಕ ಕೆ.ವಿ. ಸತ್ಯಪ್ರಕಾಶ್ ಮಾತನಾಡಿ, ನಮ್ಮ ಚಿತ್ರದಲ್ಲಿ ರಚಿತಾ ರಾಮ್ ಅವರು ಅದ್ಭುತ ಪಾತ್ರ ನಿರ್ವಹಿಸಿದ್ದಾರೆ. ಅವರು ರಾಷ್ಟ್ರಪ್ರಶಸ್ತಿ ಪಡೆಯುವ ಮಟ್ಟಕ್ಜೆ ಬೆಳೆಯಲಿ. ಇದು ನೈಜ ಘಟನೆಯನ್ನು ಆಧರಿಸಿ ನಿರ್ಮಿಸಿದ ಚಿತ್ರ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Dasara Holiday Fashion 2025: ದಸರಾ ರಜೆಯ ಮೋಜಿಗೂ ಬಂತು ಹಾಲಿಡೇ ಫ್ಯಾಷನ್ ವೇರ್ಸ್