ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Actress Ramya: ಪ್ರಜ್ವಲ್‌ ರೇವಣ್ಣಗೆ ಶಿಕ್ಷೆ; ಕಾನೂನು ಎಲ್ಲರಿಗೂ ಒಂದೇ ಎಂದ ನಟಿ ರಮ್ಯಾ

Prajwal Revanna News: ಅತ್ಯಾಚಾರ ಪ್ರಕರಣಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಶುಕ್ರವಾರ ಕೋರ್ಟ್‌ ತೀರ್ಪು ನೀಡಿದ್ದ ಬಗ್ಗೆ ಪ್ರತಿಕ್ರಿಯಿಸಿದ್ದ ನಟಿ ರಮ್ಯಾ, ʼಎಲ್ಲ ಮಹಿಳೆಯರಿಗೂ ನ್ಯಾಯ ಸಂದಿದೆ. ವೆಲ್​ಡನ್ ಹೈಕೋರ್ಟ್ʼ ಎಂದು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು. ಇದೀಗ ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.

ಬೆಂಗಳೂರು: ಕೆ.ಆರ್. ನಗರ ಮಹಿಳೆ ಮೇಲೆ ಅತ್ಯಾಚಾರ ಪ್ರಕರಣದಲ್ಲಿ (Prajwal Revanna Case) ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯಾಗಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ನಟಿ ರಮ್ಯಾ (Actress Ramya) ಅವರು, ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣ ಶಿಕ್ಷೆಯಾಗಲಿದೆ ವಿಧಿಸಲಾಗುವುದು ಎಂದಿದ್ದಾರೆ.

ಇನ್ನು ಪ್ರಕರಣಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದು ಶುಕ್ರವಾರ ಕೋರ್ಟ್‌ ತೀರ್ಪು ನೀಡಿದ್ದ ಬಗ್ಗೆ ಪ್ರತಿಕ್ರಿಯಿಸಿದ್ದ ನಟಿ ರಮ್ಯಾ, ʼಎಲ್ಲ ಮಹಿಳೆಯರಿಗೂ ನ್ಯಾಯ ಸಂದಿದೆ. ವೆಲ್​ಡನ್ ಹೈಕೋರ್ಟ್ʼ ಎಂದು ಇನ್‌ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದರು. ಇದೀಗ ಕಾನೂನು ಎಲ್ಲರಿಗೂ ಒಂದೇ ಎಂದು ಹೇಳಿದ್ದಾರೆ.



ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ

ಬೆಂಗಳೂರು : ಮೈಸೂರಿನ (Mysuru) ಕೆ.ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ (Physical Abuse) ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ (Prajwal Revanna Case) ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಜತೆಗೆ ಪ್ರಜ್ವಲ್‌ಗೆ ಒಟ್ಟು 11.6 ಲಕ್ಷ ದಂಡವನ್ನು ವಿಧಿಸಲಾಗಿದೆ. ಅಲ್ಲದೇ ಸಂತ್ರಸ್ತೆಗೆ 7 ಲಕ್ಷ ರೂ. ಪರಿಹಾರ ನೀಡಲು ಸೂಚಿಸಲಾಗಿದೆ.

ಐಪಿಸಿ ಸೆಕ್ಷನ್ 376(2)(ಕೆ) ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ, 376(2)(ಎನ್) ಪದೇ ಪದೇ ಅತ್ಯಾಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು, 5 ಲಕ್ಷ ದಂಡ, ಐಪಿಸಿ ಸೆಕ್ಷನ್ 354(ಎ) ಅಡಿಯಲ್ಲಿ 3 ವರ್ಷ ಸೆರೆವಾಸ, 25,000 ದಂಡ, ಐಪಿಸಿ ಸೆಕ್ಷನ್ 354(ಬಿ) ಅಡಿಯಲ್ಲಿ 7 ವರ್ಷ ಸೆರೆವಾಸ, 50,000 ದಂಡ, ಐಪಿಸಿ ಸೆಕ್ಷನ್ 354(ಸಿ) ಅಡಿಯಲ್ಲಿ 3 ವರ್ಷ ಸೆರೆವಾಸ 25,000 ದಂಡ, ಐಪಿಸಿ ಸೆಕ್ಷನ್ 506ರಡಿಯಲ್ಲಿ 2 ವರ್ಷ ಸೆರೆವಾಸ, 10,000 ದಂಡ, ಐಪಿಸಿ ಸೆಕ್ಷನ್ 201ರಡಿಯಲ್ಲಿ 3 ವರ್ಷ ಸೆರೆವಾಸ, 25,000 ದಂಡ, ಐಟಿ ಕಾಯ್ದೆ ಸೆಕ್ಷನ್ 66(ಇ) ಅಡಿಯಲ್ಲಿ 3 ವರ್ಷ ಸೆರೆವಾಸ, 25,000 ದಂಡ ವಿಧಿಸಲಾಗಿದೆ.

ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ದೋಷಿ (Prajwal Revanna Case) ಎಂದು ತೀರ್ಪು ನೀಡಿತ್ತು. ಇದೀಗ ಶಿಕ್ಷೆ ಪ್ರಕಟವಾಗಿದೆ. ವಿಚಾರಣೆಯ ಬಳಿಕ ಆದೇಶವನ್ನು ಮಧ್ಯಾಹ್ನಕ್ಕೆ ಕಾಯ್ದಿರಿಸಿದ್ದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು, ತೀರ್ಪು ಪ್ರಕಟಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Prajwal Revanna Case: ಜೀವಾವಧಿ ಶಿಕ್ಷೆ; ಪ್ರಜ್ವಲ್‌ ರೇವಣ್ಣ ಮುಂದಿನ ಆಯ್ಕೆ ಏನು?