Karnataka Budget 2026: ರಾಜ್ಯದಲ್ಲಿ ಮೊತ್ತ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ
ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ -
ಬೆಂಗಳೂರು, ಮಾರ್ಚ್ 5: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6 ರಂದು (ಶುಕ್ರವಾರ) ವಿಧಾನಸೌಧದಲ್ಲಿ ಮಂಡಿಸಲಿರುವ 2026–27ನೇ ಸಾಲಿನ ರಾಜ್ಯ ಬಜೆಟ್ (Karnataka Budget 2026) ಭಾಷಣವನ್ನು ರಾಜ್ಯದ ಆಯ್ದ ಬಸ್ ನಿಲ್ದಾಣಗಳಲ್ಲಿರುವ ಎಲ್‌ಇಡಿ ಮತ್ತು ಟಿವಿ ಪರದೆಗಳ ಮೂಲಕ ಮೊತ್ತ ಮೊದಲ ಬಾರಿಗೆ ನೇರ ಪ್ರಸಾರ ಮಾಡಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕ್ರಮ ಕೈಗೊಂಡಿದೆ.
ಆರ್ಥಿಕ ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 17ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಹೊಸ ದಾಖಲೆ ಸೃಷ್ಟಿಸುತ್ತಿದ್ದಾರೆ. ಈ ಮಹತ್ವದ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸಲು ವಿಶೇಷ ವ್ಯವಸ್ಥೆ ಮಾಡಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ (ಡಿಐಪಿಆರ್)ಯು ಬೆಂಗಳೂರು ಮೂಲದ ವೃತ್ತಿ ಮೀಡಿಯಾ ಸಲ್ಯೂಷನ್ಸ್ ಸಂಸ್ಥೆಯ ಸಹಭಾಗಿತ್ವದಲ್ಲಿ ರಾಜ್ಯದಾದ್ಯಂತ ಇರುವ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಅಳವಡಿಸಿರುವ ಡಿಜಿಟಲ್ ಡಿಸ್ಪ್ಲೇ (ಎಲ್‌ಇಡಿ) ಮತ್ತು ಟಿವಿ ಪರದೆಗಳ ಮೂಲಕ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ಮಾರ್ಚ್ 6 ರಂದು ಬೆಳಗ್ಗೆ 10.15 ಗಂಟೆಯಿಂದ ಪ್ರಸಾರ ಮಾಡಲಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 6ರಂದು 2026-27 ನೇ ಸಾಲಿನ ಆಯವ್ಯಯವನ್ನು ಮಂಡಿಸಲಿದ್ದಾರೆ. ಈ ಬಜೆಟ್ ಮಂಡನೆಯ ನೇರಪ್ರಸಾರವನ್ನು ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಪ್ರಸಾರ ಮಾಡಲು ಉದ್ದೇಶಿಸಲಾಗಿದೆ.
— DIPR Karnataka (@KarnatakaVarthe) March 5, 2026
ಬಜೆಟ್ ಮಂಡನೆಯ ನೇರ ಪ್ರಸಾರವನ್ನು ರಾಜ್ಯದ ಜನತೆಗೆ ತಲುಪಿಸುವ ಉದ್ದೇಶದಿಂದ ವೃತ್ತಿ ಸೊಲ್ಯೂಷನ್ಸ್ ಲಿಮಿಟೆಡ್… pic.twitter.com/6IbmyhsbX0
ವಿಧಾನಸೌಧದಲ್ಲಿ ನಡೆಯುವ ಬಜೆಟ್ ಮಂಡನೆ ಹಾಗೂ ನಂತರ ನಡೆಯಲಿರುವ ಮುಖ್ಯಮಂತ್ರಿಗಳ ಪತ್ರಿಕಾಗೋಷ್ಠಿಯನ್ನೂ ಇದೇ ಪರದೆಗಳ ಮೂಲಕ ರಾಜ್ಯದ ವಿವಿಧ ಬಸ್ ನಿಲ್ದಾಣಗಳಲ್ಲಿ ನೇರವಾಗಿ ಪ್ರಸಾರ ಮಾಡಲಾಗುತ್ತದೆ. ಇದರ ಮೂಲಕ ಸಾರ್ವಜನಿಕರು ಬಸ್ ನಿಲ್ದಾಣಗಳಲ್ಲಿಯೇ ಈ ಮಹತ್ವದ ಕಾರ್ಯಕ್ರಮವನ್ನು ವೀಕ್ಷಿಸುವ ಅವಕಾಶವನ್ನು ಪಡೆಯಲಿದ್ದಾರೆ.
Petrol Price hike: ಗಲ್ಫ್ ಯುದ್ಧದ ನಡುವೆ ರಾಜ್ಯ ಬಜೆಟ್‌ನಲ್ಲೂ ಪೆಟ್ರೋಲ್ ಬೆಲೆ ಏರಿಕೆ ಚಿಂತನೆ!
ರಾಜ್ಯದಲ್ಲಿಯೇ ಮೊದಲ ಬಾರಿಗೆ ಬಸ್ ನಿಲ್ದಾಣಗಳ ಮೂಲಕ ಜನಸಾಮಾನ್ಯರಿಗೆ ಬಜೆಟ್ ಮಂಡನೆಯ ನೇರ ಪ್ರಸಾರವನ್ನು ತಲುಪಿಸುವ ಪ್ರಯತ್ನವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕೈಗೊಂಡಿದೆ. ಸಾರ್ವಜನಿಕರು ಈ ನೇರ ಪ್ರಸಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ಆಯುಕ್ತರು ಮನವಿ ಮಾಡಿದ್ದಾರೆ.