ವಿಧಾನ ಪರಿಷತ್ ಚುನಾವಣೆ; ಅಡ್ಡ ಮತದಾನ ಮಾಡಿದ್ರಾ ಜಿ. ಟಿ ದೇವೇಗೌಡ?
ರಾಜ್ಯದಲ್ಲಿ ವಿಧಾನಪರಿಷತ್‌ನ 7 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಮತದಾನ ಪ್ರಕ್ರಿಯೆ ಆರಂಭಗೊಂಡಿದೆ. 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. . ಈ ಮಧ್ಯೆ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಪಕ್ಷಕ್ಕೆ ಶಾಕ್ ಕೊಟ್ಟಿದ್ದಾರೆ. ಜೆಡಿಎಸ್ನ ಬಹುತೇಕ ಶಾಸಕರು ರೆಸಾರ್ಟ್ಗೆ ಶಿಫ್ಟ್ ಆಗಿದ್ದಾರೆ. ಆದರೆ ಜಿಟಿ ದೇವೇಗೌಡರು ಮಾತ್ರ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಹೇಳಲಾಗಿತ್ತು.
ಸಂಗ್ರಹ ಚಿತ್ರ -
ಬೆಂಗಳೂರು: ರಾಜ್ಯದಲ್ಲಿ ವಿಧಾನ ಪರಿಷತ್‌ನ 7 ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಮತದಾನ (Legislative Council elections) ಪ್ರಕ್ರಿಯೆ ಆರಂಭಗೊಂಡಿದೆ. 8 ಅಭ್ಯರ್ಥಿಗಳು ಕಣದಲ್ಲಿದ್ದಾರೆ. . ಈ ಮಧ್ಯೆ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ಅವರು ಪಕ್ಷಕ್ಕೆ ಶಾಕ್ ಕೊಟ್ಟಿದ್ದಾರೆ. ಜೆಡಿಎಸ್ನ ಬಹುತೇಕ ಶಾಸಕರು ರೆಸಾರ್ಟ್ಗೆ ಶಿಫ್ಟ್ ಆಗಿದ್ದಾರೆ. ಆದರೆ ಜಿಟಿ ದೇವೇಗೌಡರು ಮಾತ್ರ ಯಾರ ಸಂಪರ್ಕಕ್ಕೂ ಸಿಕ್ಕಿಲ್ಲ ಎಂದು ಹೇಳಲಾಗಿತ್ತು. ಈಗ ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಟಿಡಿ ಅಡ್ಡ ಮತದಾನ ಮಾಡಿದ್ದಾರೆ ಎನ್ನುವ ಗುಮಾನಿ ಎದ್ದಿದೆ. ಒಂದು ವೇಳೆ, ಅವರು ಅಡ್ಡ ಮತದಾನ ಮಾಡಿದಿದ್ದೇ ಆದಲ್ಲಿರೆ, ಅವರನ್ನು ಜೆಡಿಎಸ್‌ನಿಂದ ಉಚ್ಚಾಟನೆ ಮಾಡುವ ಸಾಧ್ಯತೆಯಿದೆ.
ಮತ ಚಲಾವಣೆ ಮಾಡಿದ ನಂತರ, ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿದ್ದೇನೆ ಎಂದು ಜಿಟಿ ದೇವೇಗೌಡ ಹೇಳಿದ್ದಾರೆ. ಜಿಟಿ ದೇವೇಗೌಡ ಅವರ ಪುತ್ರ ಮತ್ತು ಜೆಡಿಎಸ್ ಶಾಸಕ ಹರೀಶ್ ಗೌಡ, ಪಕ್ಷದ ಶಾಸಕರಿಗೆ ವಿಪ್ ಜಾರಿಗೊಳಿಸಿದ್ದರು. ಒಂದು ವೇಳೆ, ಜಿಟಿಡಿ ವಿಪ್ ಉಲ್ಲಂಘಿಸಿದ್ದೇ ಆದಲ್ಲಿ, ಅವರು ಉಚ್ಚಾಟನೆಗೊಳ್ಳುವುದು ನಿಶ್ಚಿತ ಎಂದು ಮೂಲಗಳು ತಿಳಿಸಿವೆ.
ಜಿಟಿ ದೇವೇಗೌಡರಂತೆ, ಬಿಜೆಪಿಯ ಉಚ್ಚಾಟಿತ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಂ ಹೆಬ್ಬಾರ್ ಕೂಡಾ ಮತದಾನ ಮಾಡಿದ್ದಾರೆ. ಇಬ್ಬರೂ, ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಿರುವುದಾಗಿ ಹೇಳಿದ್ದಾರೆ. ಕನಿಷ್ಠ ಸೌಜನ್ಯಕ್ಕೂ ಬಿಜೆಪಿಯವರು ನಮ್ಮನ್ನು ಸಂಪರ್ಕಿಸಿ, ಮತ ಚಲಾಯಿಸಲು ಕೇಳಿಕೊಂಡಿಲ್ಲ ಎಂದು ಇಬ್ಬರೂ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.
ರಂಗೇರಿದ ವಿಧಾನ ಪರಿಷತ್ ಚುನಾವಣೆ; ಅಡ್ಡ ಮತದಾನದ ಭೀತಿ! 7ನೇ ಸ್ಥಾನಕ್ಕೆ ಭಾರೀ ಪೈಪೋಟಿ
ಆಡಳಿತಾರೂಢ ಕಾಂಗ್ರೆಸ್ ಐದೂ ಸ್ಥಾನಗಳನ್ನು ಗೆಲ್ಲಲು ರಣತಂತ್ರ ಹೂಡಿದ್ದು, ಅಡ್ಡ ಮತದಾನ ಭೀತಿ ಹಿನ್ನೆಲೆಯಲ್ಲಿ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿರುವ ಶಾಸಕರು ಗುರುವಾರ ನೇರವಾಗಿ ವಿಧಾನಸೌಧಕ್ಕೆ ಪಾಲ್ಗೊಳ್ಳಲಿದ್ದಾರೆ. ಬಂದು ಮತದಾನದಲ್ಲಿ ಮೇಲ್ಮನೆಗೆ ಸ್ಪರ್ಧಿಸಿರುವ ಐವರು ಅಭ್ಯರ್ಥಿ ಗಳಿಗೆ ಮತ ಹಾಕುವ ಶಾಸಕರಿಗಾಗಿ ಐದು ಪ್ರತ್ಯೇಕ ಬಸ್ ವ್ಯವಸ್ಥೆ ಮಾಡಲಾಗಿದೆ. ಯಾರು, ಯಾವ ಅಭ್ಯರ್ಥಿ ಪರ ಮತ ಚಲಾವಣೆ ಮಾಡಬೇಕು ಎಂದು ಈಗಾಗಲೇ ನಿರ್ಧರಿಸಲಾಗಿದೆ. ಈ ತಂಡದ ಪ್ರಕಾರವೇ ವಿಧಾನಸೌಧಕ್ಕೆ ಪ್ರತ್ಯೇಕ ಬಸ್‌ನಲ್ಲಿ ತೆರಳಲಿದ್ದಾರೆ.