ಬೆಂಗಳೂರು: ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ (KN Rajanna) ಸಲ್ಲಿಸಿದ್ದ ರಾಜೀನಾಮೆ ಪತ್ರವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅಂಗೀಕರಿಸಿದ್ದಾರೆ. ಸಿಎಂ ಕಚೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿದ್ದರು. ರಾಜೀನಾಮೆ ಪತ್ರವನ್ನು ರಾಜ್ಯಪಾಲರಿಗೆ ಸಿಎಂ ರವಾನಿಸಿದ್ದರು. ಇದೀಗ ರಾಜೀನಾಮೆಯನ್ನು ಗವರ್ನರ್ ಅಂಗೀಕರಿಸಿದ್ದು, ರಾಜಣ್ಣ ಅವರನ್ನು ತಕ್ಷಣದಿಂದಲೇ ಸಚಿವ ಸಂಪುಟದಿಂದ ಕೈಬಿಡಲು ಸೂಚನೆ ನೀಡಿದ್ದಾರೆ.
ಮುಖ್ಯ ಕಾರ್ಯದರ್ಶಿಗೆ ರಾಜಭವನದಿಂದ ಪತ್ರ
ಈ ಬಗ್ಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದ್ದು, ರಾಜ್ಯಪಾಲರ ಅಧಿಸೂಚನೆ ಅನುಸಾರ ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ತಕ್ಷಣದಿಂದ ಜಾರಿಗೆ ಬರುವಂತೆ ಕೈಬಿಡುವ ಕುರಿತು ಮುಂದಿನ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ್ದಾರೆ.

ರಾಜೀನಾಮೆಗೆ ಕಾರಣವೇನು?
ಬಿಜೆಪಿ ಮತಗಳ್ಳತನ ಕುರಿತಂತೆ ಕೆ.ಎನ್ ರಾಜಣ್ಣ ಅವರು ನೀಡಿದ್ದ ಹೇಳಿಕೆಗೆ ಕಾಂಗ್ರೆಸ್ ಹೈಕಮಾಂಡ್ ತೀವ್ರವಾಗಿ ಗರಂ ಆಗಿತ್ತು. ಈ ಹಿನ್ನೆಲೆಯಲ್ಲಿ ಹೈಕಮಾಂಡ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ರಾಜೀನಾಮೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿದುಬಂದಿದೆ.
ಈ ಸುದ್ದಿಯನ್ನೂ ಓದಿ | KN Rajanna: ಸಚಿವ ರಾಜಣ್ಣ ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರು