ಬೆಂಗಳೂರು: 2026ರ ನವೆಂಬರ್‌ನಲ್ಲಿ ನಡೆಯುವ ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟವಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಭ್ಯರ್ಥಿಗಳ ಹೆಸರನ್ನು ಅನುಮೋದಿಸಿದ್ದಾರೆ.
ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಮೋಹನ್ ಲಿಂಬಿಕಾಯಿ, ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಶಶಿ ಹುಲಿಕುಂಟೆಮಠ್, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶರಣಪ್ಪ ಮಟ್ಟೂರ್, ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.
ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಘೋಷಿಸಿದ್ದಕ್ಕೆ ಹೈಕಮಾಂಡ್ ನಾಯಕರಿಗೆ ಎಂಎಲ್‌ಸಿ ಪುಟ್ಟಣ್ಣ ಧನ್ಯವಾದ ತಿಳಿಸಿದ್ದಾರೆ. ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ನನ್ನ ಮೇಲೆ ವಿಶ್ವಾಸವಿಟ್ಟು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಕರ್ನಾಟಕ ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಯಾಗಿ ಘೋಷಿಸಿದಕ್ಕಾಗಿ ಮಾನ್ಯ ಸೋನಿಯಾ ಗಾಂಧಿ, AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್, ಪಕ್ಷದ ನಾಯಕತ್ವ ಹಾಗೂ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಹೃತ್ಪೂರ್ವಕ ಧನ್ಯವಾದಗಳು. ಶಿಕ್ಷಕರ ಹಕ್ಕುಗಳು, ಶಿಕ್ಷಣದ ಗೌರವ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ರಕ್ಷಣೆಗೆ ಪಕ್ಷದ ಮಾರ್ಗದರ್ಶನದಲ್ಲಿ ಪೂರ್ಣ ನಿಷ್ಠೆಯಿಂದ ಸದಾ ಸೇವೆ ಸಲ್ಲಿಸಲು ಬದ್ಧನಾಗಿದ್ದೇನೆ ಎಂದು ಹೇಳಿದ್ದಾರೆ.