ರಾಜ್ಯ ನಿಗಮ-ಮಂಡಳಿ ಅಧ್ಯಕ್ಷರು, ಮುಖ್ಯ ಸಚೇತಕರ ಪಟ್ಟಿ ಬಿಡುಗಡೆ: ತನ್ವೀರ್ ಸೇಠ್, ಬೇಳೂರು ಗೋಪಾಲಕೃಷ್ಣ ಸೇರಿ 18 ಮಂದಿಗೆ ಸ್ಥಾನ
ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಹಲವು ದಿನಗಳ ಕಸರತ್ತಿಗೆ ಅಂತಿಮ ತೆರೆ ಬಿದ್ದಿದ್ದು, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಗಳು, ಸರ್ಕಾರಿ ಮುಖ್ಯ ಸಚೇತಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗಳಿಗೆ ಒಟ್ಟು 18 ಪ್ರಮುಖ ನಾಯಕರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧಿಕೃತ ಪಟ್ಟಿಯನ್ನು ಪ್ರಕಟಿಸಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್ ಪಕ್ಷದ ಹಲವು ದಿನಗಳ ಕಸರತ್ತಿಗೆ ಅಂತಿಮ ತೆರೆ ಬಿದ್ದಿದ್ದು, ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಗಳು, ಸರ್ಕಾರಿ ಮುಖ್ಯ ಸಚೇತಕರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗಳಿಗೆ ಒಟ್ಟು 18 ಪ್ರಮುಖ ನಾಯಕರನ್ನು ನೇಮಕ ಮಾಡಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧಿಕೃತ ಪಟ್ಟಿಯನ್ನು ಪ್ರಕಟಿಸಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ನವೆಂಬರ್ 21 ರಂದು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.
ನಿಗಮ-ಮಂಡಳಿಗಳ ನೂತನ ಅಧ್ಯಕ್ಷರ ಪಟ್ಟಿ
| 1 | ತನ್ವೀರ್ ಸೇಠ್ | ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ |
|---|---|---|
| 2 | ಬೇಲೂರು ಗೋಪಾಲಕೃಷ್ಣ | ವಿಧಾನಸಭೆ ಸರ್ಕಾರಿ ಮುಖ್ಯ ಸಚೇತಕ |
| 3 | ಮಂಜುನಾಥ ಭಂಡಾರಿ | ವಿಧಾನಪರಿಷತ್ ಸರ್ಕಾರಿ ಮುಖ್ಯ ಸಚೇತಕ |
| 4 | ಬಿ. ಶಿವಣ್ಣ | ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (KSPCB) ಅಧ್ಯಕ್ಷ |
| 5 | ಕೆ. ಷಡಕ್ಷರಿ | ಕರ್ನಾಟಕ ರಾಜ್ಯ ಖನಿಜ ನಿಗಮದ ಅಧ್ಯಕ್ಷ |
| 6 | ಪಿ.ಎಂ. ಅಶೋಕ್ | ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಅಧ್ಯಕ್ಷ |
| 7 | ಎ.ಆರ್. ಕೃಷ್ಣಮೂರ್ತಿ | ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಅಧ್ಯಕ್ಷ |
| 8 | ಹಂಪನಗೌಡ ಬಾದರ್ಲಿ | ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ |
| 9 | ಡಿ.ಜಿ. ಶಾಂತನಗೌಡ | ಬೆಂಗಳೂರು ಘನತ್ಯಾಜ್ಯ ನಿರ್ವಹಣಾ ಸಂಸ್ಥೆ ಅಧ್ಯಕ್ಷ |
| 10 | ಜಿ.ಎಚ್. ಶ್ರೀನಿವಾಸ್ | ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ (KSTDC) ಅಧ್ಯಕ್ಷ |
| 11 | ಮಹಾಂತೇಶ ಕೌಜಲಗಿ | ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ (KRDCL) ಅಧ್ಯಕ್ಷ |
| 12 | ಎಸ್.ಎನ್. ಸುಬ್ಬಾರೆಡ್ಡಿ | ಮೈಸೂರು ಸೇಲ್ಸ್ ಇಂಟರ್‌ನ್ಯಾಷನಲ್ ಲಿಮಿಟೆಡ್ (MSIL) ಅಧ್ಯಕ್ಷ |
| 13 | ಎನ್.ಎಚ್. ಕೋನರಡ್ಡಿ | ಕರ್ನಾಟಕ ಕೃಷಿ ಬೆಲೆ ಆಯೋಗದ ಅಧ್ಯಕ್ಷ |
| 14 | ಬಸನಗೌಡ ದದ್ದಲ್ | ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (KKRDB) ಅಧ್ಯಕ್ಷ |
| 15 | ಅಲ್ಲಮಪ್ರಭು ಪಾಟೀಲ್ | ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ (KSSIDC) ಅಧ್ಯಕ್ಷ |
| 16 | ಶ್ಯಾಮ್ ನಾಟೇಕರ್ | ಕರ್ನಾಟಕ ಸಾಂಬಾರು ಪದಾರ್ಥಗಳ ಅಭಿವೃದ್ಧಿ ಮಂಡಳಿ ಅಧ್ಯಕ್ಷ |
| 17 | ಎಚ್.ಸಿ. ಲಲಿತ್ ರಾಘವ್ | ಕರ್ನಾಟಕ ವಿದ್ಯುತ್ ಕಾರ್ಖಾನೆ (KAVIKA) ಅಧ್ಯಕ್ಷ |
| 18 | ಸುಭಾಷ್ ರಾಠೋಡ್ | ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ |
ಅಧಿಕಾರಕ್ಕೆ ಬಂದಾಗಿನಿಂದಲೂ ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನಕ್ಕಾಗಿ ಶಾಸಕರು ಹಾಗೂ ಪಕ್ಷದ ಮುಖಂಡರ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರೊಂದಿಗೆ ಹಲವು ಸುತ್ತಿನ ಚರ್ಚೆ ನಡೆಸಿದ್ದರು. ಇತ್ತೀಚೆಗಷ್ಟೇ ರಾಜ್ಯ ಸರ್ಕಾರವು ವಿವಿಧ ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳಿಗೆ 428 ಮಂದಿಯನ್ನು ನಿರ್ದೇಶಕರು ಮತ್ತು ಸದಸ್ಯರನ್ನಾಗಿ ನೇಮಕ ಮಾಡಿತ್ತು. ಇದೀಗ ಪ್ರಮುಖ 18 ಹುದ್ದೆಗಳಿಗೆ ಅಧ್ಯಕ್ಷರು ಮತ್ತು ಮುಖ್ಯ ಸಚೇತಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.