ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಜಮೀರ್‌ʼಗೆ ʼಲೋಕಾʼ ಸಂಕಷ್ಟ

ಜಮೀರ್ ವಾರ್ಷಿಕ ಆದಾಯಕ್ಕಿಂತ ಸುಮಾರು 25 ಕೋಟಿ ರು. ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಗಳಿಸಿರುವುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ರಾಜ್ಯ ಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ (ಅಭಿಯೋಜನೆ)ಗೆ ಅನುಮತಿ ನೀಡಿದರೆ, ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಜಮೀರ್ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗುತ್ತದೆ. ಈ ಪ್ರಕರಣ ಈಗ ರಾಜ್ಯಪಾಲರ ಅಂಗಳಕ್ಕೆ ಬಂದಿದೆ ಎಂದು ರಾಜ್ಯ ಗೃಹ ಇಲಾಖೆಯ ಮೂಲಗಳು ತಿಳಿಸಿವೆ

ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಪತ್ರ

ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರ ವಿರುದ್ಧ ಸುಮಾರು 20 ಕೋಟಿ ರೂಪಾಯಿ ಮೌಲ್ಯದ ಆದಾಯ ಮೀರಿ ಆಸ್ತಿ ಹೊಂದಿರುವ ಆರೋಪ ಸಂಬಂಧ ದೋಷಾರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ರಾಜ್ಯಪಾಲರಿಗೆ ಲೋಕಾಯುಕ್ತ ಪೊಲೀಸರು ಮನವಿ ಮಾಡಿದ್ದಾರೆ. ಈ ಬೆಳವಣಿಗೆ ನಡುವೆಯೇ ರಾಜ್ಯಸರಕಾರವು ಐಪಿಎಸ್ ಅಧಿಕಾರಿ, ಲೋಕಾ ಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ಅವರನ್ನು ಬೆಂಗಳೂರು ನಗರ ಲೋಕಾಯುಕ್ತ ಪೊಲೀಸ್ ಅಧೀಕ್ಷಕ-1 (ಎಸ್‌ಪಿ-1) ಹುದ್ದೆಯಿಂದ ಬಿಡುಗಡೆಗೊಳಿಸಿ ಮೂಲ ಇಲಾಖೆಗೆ ಮತ್ತೆ ಕಳುಹಿಸಲಾಗಿದೆ.

ಲೋಕಾಯುಕ್ತ ಪೊಲೀಸರು ಜಮೀರು, ಅವರ ಕುಟುಂಬ ಸದಸ್ಯರು, ಸ್ನೇಹಿತರು ಮತ್ತು ವ್ಯವಹಾರಿಕ ಪಾಲುದಾರರನ್ನು ವಿಚಾರಣೆ ನಡೆಸಿ ತನಿಖೆ ಪೂರ್ಣಗೊಳಿಸಿದ್ದಾರೆ. ಈ ಸಂಬಂಧಿತ ಸಾವಿರಾರು ಪುಟಗಳ ದಾಖಲೆಗಳೊಂದಿಗೆ ಲೋಕಾಯುಕ್ತ ಪೊಲೀಸರು ಲೋಕಭವನಕ್ಕೆ ಮನವಿ ಸಲ್ಲಿಸಿದ್ದಾರೆ.

ಜಮೀರ್ ವಾರ್ಷಿಕ ಆದಾಯಕ್ಕಿಂತ ಸುಮಾರು 25 ಕೋಟಿ ರು. ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಗಳಿಸಿರುವುದಕ್ಕೆ ಪುರಾವೆಗಳು ಸಿಕ್ಕಿವೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ (ಅಭಿಯೋಜನೆ)ಗೆ ಅನುಮತಿ ನೀಡಿದರೆ, ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಜಮೀರ್ ಅವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗುತ್ತದೆ. ಈ ಪ್ರಕರಣ ಈಗ ರಾಜ್ಯಪಾಲರ ಅಂಗಳಕ್ಕೆ ಬಂದಿದೆ ಎಂದು ರಾಜ್ಯ ಗೃಹ ಇಲಾಖೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: Zameer Ahmed Khan: ಕಾಂಗ್ರೆಸ್‌ನಲ್ಲಿ ಬದಲಾದ ಅಲ್ಪಸಂಖ್ಯಾತ ಆದ್ಯತೆ

ಎರಡು ದಶಕಗಳ ಆಸ್ತಿ ಲೆಕ್ಕ: ಲೋಕಾಯುಕ್ತ ಐಜಿಪಿ ಸುಬ್ರಹ್ಮಣ್ಯೇಶ್ವರ ರಾವ್ ಅವರ ಮಾರ್ಗ ದರ್ಶನದಲ್ಲಿ ಎಸ್ಪಿ ಶಿವಪ್ರಕಾಶ್ ದೇವರಾಜ್ ಮತ್ತು ಡಿವೈಎಸ್ಪಿ ಎಂ. ಸತೀಶ್ ನೇತೃತ್ವದ ತಂಡವು ತನಿಖೆ ನಡೆಸಿತ್ತು. ಜಮೀರ್ ಅವರು ಶಾಸಕರಾಗುವ ಮುನ್ನ ಸಾರಿಗೆ ಮತ್ತು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ತೊಡಗಿದ್ದರು.

2005ರಲ್ಲಿ ಚಾಮರಾಜಪೇಟೆ ಕ್ಷೇತ್ರದ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಗೆದ್ದು ವಿಧಾನಸಭೆಗೆ ಪ್ರವೇಶಿಸಿದ್ದರು. ಪೊಲೀಸರು 2005ರಿಂದ 2025ರವರೆಗೆ ಅಂದರೆ ಎರಡು ದಶಕಗಳ ಆಸ್ತಿ ಲೆಕ್ಕವನ್ನು ಪರಿಶೀಲಿಸಿದ್ದಾರೆ. ಈ ಅವಧಿಯಲ್ಲಿ ಜಮೀರ್ ಐದು ಬಾರಿ ಶಾಸಕರಾಗಿ ಮತ್ತು ಮೂರು ಬಾರಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ಈ ಕಾಲದಲ್ಲಿ ಅಧಿಕಾರ ದುರ್ಬಳಕೆ ಮಾಡಿಕೊಂಡು 25 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಸಂಪಾದಿಸಿರುವುದು ತನಿಖೆಯಲ್ಲಿ ಖಚಿತವಾಗಿದೆ ಎಂದು ಲೋಕಾಯುಕ್ತ ಮೂಲಗಳು ಹೇಳಿವೆ.

ಲೋಕಾಯುಕ್ತ ಎಸ್‌ಪಿ ದಿಢೀರ್ ವರ್ಗ ಲೋಕಾಯುಕ್ತ ದಾಳಿ ನಡೆಯುವ ಮಾಹಿತಿ ಸೋರಿಕೆ ಮಾಡಿ ಸರಕಾರಿ ಅಧಿಕಾರಿಗಳಿಂದ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಕ್ಕೆ ಕಡಿವಾಣ ಹಾಕುವಲ್ಲಿಯೂ ಅವರು ಪ್ರಮುಖ ಪಾತ್ರ ವಹಿಸಿದ್ದರು ಎನ್ನಲಾಗಿದೆ. ಕಳೆದ ಜುಲೈ 7ರಂದು ಬೆಂಗಳೂರು ವಿಶೇಷ ಉಪ ಆಯುಕ್ತ ಎಂ.ಕೆ. ಜಗದೀಶ್ ಹಾಗೂ ಇತರ ಇಬ್ಬರು ಅಧಿಕಾರಿಗಳ ಕಚೇರಿ ಮತ್ತು ನಿವಾಸಗಳ ಮೇಲೆ ನಡೆದ ದಾಳಿ ನಡೆಸಲಾಗಿತ್ತು.

ಹುಣಸಮಾರನಹಳ್ಳಿಯಲ್ಲಿ ಹಲವು ಕೋಟಿ ರೂಪಾಯಿ ಮೌಲ್ಯದ 13 ಎಕರೆ ಭೂಮಿಯನ್ನು ಖಾಸಗಿಯವರಿಗೆ ಅಕ್ರಮವಾಗಿ ಹಂಚಿಕೆ ಮಾಡಿದ ಆರೋಪದಡಿ ಈ ದಾಳಿ ನಡೆಸಲಾಗಿತ್ತು. ಇದಲ್ಲದೆ, ಮದ್ಯ ಮಾರಾಟ ಪರವಾನಗಿ ನವೀಕರಣ ಸೇರಿದಂತೆ ವಿವಿಧ ಪ್ರಕ್ರಿಯೆಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅಬಕಾರಿ ಇಲಾ ಖೆಯ ಎಂಟು ಉಪ ಆಯುಕ್ತರ ಮೇಲೂ ದಾಳಿ ನಡೆಸಲಾಗಿತ್ತು.

ಲೋಕಾಯುಕ್ತದಲ್ಲಿ ಒಂದು ವರ್ಷಕ್ಕೂ ಕಡಿಮೆ ಅವಧಿಯಲ್ಲಿ ಶಿವಪ್ರಕಾಶ್ ದೇವರಾಜು 31 ಟ್ರ್ಯಾಪ್ ಕಾರ್ಯಾಚರಣೆಗಳು, 17 ಆದಾಯ ಮೀರಿ ಆಸ್ತಿ ಪ್ರಕರಣಗಳು ಹಾಗೂ 11 ಇತರೆ ಪ್ರಕರಣ ಗಳನ್ನು ದಾಖಲಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಪ್ರಕರಣಗಳಲ್ಲಿ ಅಂದಿನ ಮುಖ್ಯಮಂತ್ರಿ ಯವರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದ ಅಧಿಕಾರಿಯೊಬ್ಬರೂ ಸೇರಿದ್ದರು. ಭ್ರಷ್ಟ ಅಧಿಕಾರಿಗಳನ್ನು ಪತ್ತೆಹಚ್ಚಲು ಕೃತಕ ಬುದ್ಧಿಮತ್ತೆ (ಎಐ) ಬಳಸಿ ಇಲಾಖೆವಾರು ಮಾಹಿತಿ ಸಂಗ್ರಹ ಸಿದ್ಧಪಡಿಸಿದ್ದ ಮೊದಲ ಅಧಿಕಾರಿಯಾಗಿಯೂ ಅವರು ಗುರುತಿಸಿಕೊಂಡಿದ್ದರು.

ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೋರಿ ಸಂಬಂಧಪಟ್ಟ ಪ್ರಾಧಿಕಾರಗಳಿಗೆ ಹಲವು ಪ್ರಸ್ತಾವನೆಗಳನ್ನು ಕಳುಹಿಸಿದ್ದರು ಎಂದು ಮೂಲಗಳು ತಿಳಿಸಿವೆ. 2016ರಲ್ಲಿ ಸೇವೆಗೆ ಸೇರಿದ ಬಳಿಕ ತಮ್ಮ ಹತ್ತು ವರ್ಷಗಳ ವೃತ್ತಿಜೀವನದಲ್ಲಿ ಅವರು ಒಂಭತ್ತು ಬಾರಿ ವರ್ಗಾವಣೆ ಗೊಂಡಿzರೆ.

ಶಾಸಕರ ಆಸ್ತಿ ವಿವರ ಶಾಸಕರಾಗುವ ಮುನ್ನ ಜಮೀರ್ ಅವರ ಬಳಿ ಬೆಂಗಳೂರಿನ ಸದಾಶಿವನಗರದಲ್ಲಿ ಫ್ಲ್ಯಾಟ್, ಮೈಸೂರಿನಲ್ಲಿ ನಿವೇಶನ ಮತ್ತು ಬ್ಯಾಂಕ್ ಖಾತೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಇತ್ತು. ಆದರೆ ಶಾಸಕರಾದ ನಂತರ ಶಿವಾಜಿನಗರದಲ್ಲಿ 20 ಕೋಟಿ ರು. ಮೌಲ್ಯದ ವೈಭವವಾದ ಬಂಗಲೆ ಕಟ್ಟಿದ್ದಾರೆ. ವಿದೇಶ ಪ್ರವಾಸ ಮತ್ತು ಇತರರಿಗೆ ಹಣದಾನ ಮಾಡಿದ್ದಾರೆ.

ಇದಲ್ಲದೆ ನಟಿ ರಾಧಿಕಾ ಕುಮಾರಸ್ವಾಮಿ, ಮಾಜಿ ಸಚಿವ ದಿನೇಶ್ ಗುಂಡೂರಾವ್, ಚೆಲುವರಾಯ ಸ್ವಾಮಿ, ಶಾಸಕ ಎಚ್.ಸಿ.ಬಾಲಕೃಷ್ಣ, ಮಾಜಿ ರಾಜ್ಯಸಭಾ ಸದಸ್ಯ ಕುಪೇಂದ್ರ ರೆಡ್ಡಿ ಸೇರಿದಂತೆ ಸುಮಾರು 30ಕ್ಕೂ ಹೆಚ್ಚು ಪರಿಚಿತರಿಂದ ಕೋಟ್ಯಂತರ ರೂಪಾಯಿ ಸಾಲ ಪಡೆದಿದ್ದಾರೆ. ಆದರೆ ಈ ಸಾಲಗಳನ್ನು ಮರುಪಾವತಿ ಮಾಡಿzರೆ ಎಂಬ ದಾಖಲೆ ಸಿಕ್ಕಿಲ್ಲ. ತಮ್ಮ ಸ್ನೇಹಿತರಿಗೆ ಸಾಲ ಕೊಟ್ಟಿರುವುದಕ್ಕೂ ಲೆಕ್ಕಪತ್ರವಿಲ್ಲ ಎಂಬುದು ಅಂದಿನ ದಿನಗಳಲ್ಲಿ ಆರೋಪಿಸಲಾತ್ತು

ಲೋಕಾಯುಕ್ತ ಎಸ್‌ಪಿ ದಿಢೀರ್ ವರ್ಗ ಜಮೀರ್ ವಿರುದ್ಧ ದೋಷಾರೋಪಕ್ಕೆ ಅನುಮತಿ ಕೋರಿ ಲೋಕಾಯುಕ್ತ ಪೊಲೀಸರು ರಾಜ್ಯಪಾಲರಿಗೆ ಪತ್ರ ಬರೆದ ಬೆನ್ನಲ್ಲೇ, ಈ ಪ್ರಕರಣದ ತನಿಖೆ ನಡೆಸಿದ್ದ ಲೋಕಾಯುಕ್ತ ಎಸ್‌ಪಿ ಶಿವಪ್ರಕಾಶ್ ದೇವರಾಜು ವರ್ಗಾವಣೆಯಾಗಿದ್ದಾರೆ. ಲೋಕಾಯುಕ್ತ ಎಸ್‌ಪಿಯಾಗಿ ಒಂದು ವರ್ಷ ಪೂರೈಸುವ ಮುನ್ನವೇ ದೇವರಾಜು ವರ್ಗಾವಣೆ ಆದೇಶ ಪಡೆದಿದ್ದಾರೆ. 2014ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿ ಶಿವಪ್ರಕಾಶ್ ದೇವರಾಜು, 2025ರ ಜುಲೈ 30ರಂದು ಭ್ರಷ್ಟಾಚಾರ ನಿಗ್ರಹ ಸಂಸ್ಥೆಯಲ್ಲಿ ಸೇವೆ ಸಲ್ಲಿಸುವ ಆಸಕ್ತಿ ವ್ಯಕ್ತಪಡಿಸಿ ಪತ್ರ ಬರೆದ ಬಳಿಕ ಲೋಕಾಯುಕ್ತ ಎಸ್ಪಿ-1 ಆಗಿ ನೇಮಕಗೊಂಡಿ ದ್ದರು. ಅವರು ಹಲವು ಸೂಕ್ಷ್ಮ ಹಾಗೂ ಹೈ-ಪ್ರೊಫೈಲ್ ಪ್ರಕರಣಗಳ ತನಿಖೆ ನಡೆಸಿದ್ದರು.