ಲಂಚ ಪ್ರಕರಣ; ಬಂಧನದ ವೇಳೆ ರಂಪಾಟ ಮಾಡಿದ್ದ ಇನ್ಸ್‌ಪೆಕ್ಟರ್ ಗೋವಿಂದರಾಜು ಸಸ್ಪೆಂಡ್
Police Inspector Govindaraju suspended: ಲಂಚ ಪಡೆದ ಆರೋಪದಡಿ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಗೋವಿಂದರಾಜು ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಪ್ರಕರಣದಲ್ಲಿ ಬಂಧನದ ವೇಳೆ ಪೊಲೀಸ್ ಅಧಿಕಾರಿ ಕೂಗಾಡಿ ರಂಪಾಟ ಮಾಡಿದ್ದ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಆರೋಪಿ ಇನ್ಸ್‌ಪೆಕ್ಟರ್ ಗೋವಿಂದರಾಜು ಮತ್ತು ಗೃಹ ಸಚಿವ ಪರಮೇಶ್ವರ್ -
ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದ ಕೆ.ಪಿ.ಅಗ್ರಹಾರ ಠಾಣೆ ಇನ್ಸ್‌ಪೆಕ್ಟರ್ ಗೋವಿಂದರಾಜು ಅವರನ್ನು ಅಮಾನತು ಮಾಡಲಾಗಿದೆ. ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಸಹಾಯ ಮಾಡಲು 4 ಲಕ್ಷ ರೂ ಲಂಚ ಸ್ವೀಕರಿಸುವಾಗ ಇನ್ಸ್‌ಪೆಕ್ಟರ್ ಗೋವಿಂದರಾಜು ಲೋಕಾಯುಕ್ತ ಬಲೆಗೆ ಬಿದ್ದಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ ನೀಡಿದ್ದಾರೆ. ಲಂಚ ಪಡೆದ ಆರೋಪ ಸಂಬಂಧ ಇನ್ಸ್ಪೆಕ್ಟರ್ನ ಸಸ್ಪೆಂಡ್ ಮಾಡಲಾಗಿದೆ. ವರದಿ ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ. ಕೆಲ ದಿನಗಳ ಹಿಂದೆ ವಾರ್ಷಿಕ ಪೊಲೀಸ್ ಸಮ್ಮೇಳನದಲ್ಲಿ ಭ್ರಷ್ಟಾಚಾರ ಪ್ರಕರಣಗಳಲ್ಲಿ ಭಾಗಿಯಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿತ್ತು. ಪದೇಪದೆ ಇಂತಹ ಘಟನೆಯಾದಾಗ ಸರ್ಕಾರಕ್ಕೆ ಹಾಗೂ ವೈಯುಕ್ತಿಕವಾಗಿ ನನಗೂ ಮುಜುಗರವಾಗಲಿದೆ. ಇಂತಹ ಘಟನೆಗಳು ಯಾಕೆ ನಡೆಯುತ್ತದೆ ಎಂಬುದರ ಬಗ್ಗೆ ಅಧ್ಯಯನ ಮಾಡೋಣ ಎಂದರು.
ಪೋಸ್ಟಿಂಗ್ ಕೊಡಲು ಹಣ ಕೊಡುವ ವ್ಯವಸ್ಥೆ ಇದೆಯಾ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ನನ್ನ ಹಂತದಲ್ಲಿ ಇಂತಹವುಗಳಿಗೆ ಅವಕಾಶ ನೀಡಲ್ಲ. ನಮಗೆ ಜವಾಬ್ದಾರಿ ಇದೆ. ಜನರಿಗೆ ನಾವು ಉತ್ತರ ಕೊಡಬೇಕು. ಜನ ನಮ್ಮನ್ನು ಗೆಲ್ಲಿಸಿದ್ದಾರೆ. ಆದಷ್ಟು ಈ ತರಹದ ಘಟನೆ ಆಗದ ರೀತಿ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಏನಿದು ಪ್ರಕರಣ?
ಅಪರಾಧ ಪ್ರಕರಣಕ್ಕೆ ಸಂಬಂದಿಸಿ ಮಹಮ್ಮದ್ ಅಕ್ಟರ್ ಎಂಬಾತನಿಗೆ ಸಹಾಯ ಮಾಡಲು ಇನ್ಸ್‌ಪೆಕ್ಟರ್ ಗೋವಿಂದರಾಜು ಅವರು ಒಟ್ಟು 5 ಲಕ್ಷ ಲಂಚದ ಬೇಡಿಕೆ ಇಟ್ಟಿದ್ದರು. ಮೊದಲ ಹಂತವಾಗಿ 1 ಲಕ್ಷ ರೂಪಾಯಿ ಹಣ ಪಡೆದು, ಬಳಿಕ ಉಳಿದ 4 ಲಕ್ಷ ರೂಪಾಯಿಯನ್ನು ಕೂಡಲೇ ನೀಡಲೇಬೇಕು ಎಂದು ಒತ್ತಡ ಹಾಕಿದ್ದರು.
The #Karnataka Lokayukta police on Thursday arrested a Bengaluru police inspector for allegedly accepting Rs 4 lakh from a builder who was facing a cheating case.
— Kiran Parashar (@KiranParashar21) January 30, 2026
The police identified the accused as Govindaraju, who was posted at the KP Agrahara police station. pic.twitter.com/63KOBeRaGS
ತುಮಕೂರಿನಲ್ಲಿ 40 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ
ಈ ಬಗ್ಗೆ ಲೋಕಾಯುಕ್ತರಿಗೆ ಮಹಮ್ಮದ್ ಅಕ್ಟರ್ ಅಧಿಕೃತ ದೂರು ಸಲ್ಲಿಸಿದ್ದರು. ದೂರುದಾರನಿಂದ ಉಳಿದ ಹಣವನ್ನು ಮೈಸೂರು ರಸ್ತೆಯ ಸಿಎಎಆರ್ ಮೈದಾನ ಬಳಿ ಪೊಲೀಸ್ ಸಮವಸ್ತ್ರದಲ್ಲಿಯೇ ಪಡೆಯುತ್ತಿದ್ದಾಗ ಇನ್ಸ್‌ಸ್ಪೆಕ್ಟರ್, ಲೋಕಾಯುಕ್ತ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದರು. ಟ್ರ್ಯಾಪ್ಗೆ ಒಳಗಾಗುತ್ತಿದ್ದಂತೆ ಗೋವಿಂದರಾಜು ಜೋರಾಗಿ ಕಿರುಚಾಡಿ ರಂಪಾಟ ಮಾಡಿದ್ದರು. ಇನ್ಸ್‌ಪೆಕ್ಟರ್ ಹೈಡ್ರಾಮದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.