ತಾಂತ್ರಿಕ ದೋಷ: ಲಂಡನ್‌ಗೆ ತೆರಳುತ್ತಿದ್ದ ವರ್ಜಿನ್ ಅಟ್ಲಾಂಟಿಕ್ ವಿಮಾನ ತುಮಕೂರಿನಲ್ಲಿ ಸುತ್ತು ಹಾಕಿ ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ; 270 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು
Virgin Atlantic Flight: ಲಂಡನ್‌ಗೆ ತೆರಳುತ್ತಿದ್ದ ವರ್ಜಿನ್ ಅಂಟ್ಲಾಟಿಕ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಪೇಗೌಡ ಇಂಟರ್‌ನ್ಯಾಷನಲ್ ಏರ್‌ಪೋರ್ಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, 270 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಸೆ. 6: ಬಹುದೊಡ್ಡ ವೈಮಾನಿಕ ದುರಂತವೊಂದು ಭಾನುವಾರ (ಸೆಪ್ಟೆಂಬರ್ 6) ತಪ್ಪಿದಂತಾಗಿದೆ. ಲಂಡನ್‌ಗೆ ತೆರಳುತ್ತಿದ್ದ ವರ್ಜಿನ್ ಅಂಟ್ಲಾಟಿಕ್ ವಿಮಾನದಲ್ಲಿ (Virgin Atlantic flight) ತಾಂತ್ರಿಕ ದೋಷ ಕಂಡು ಬಂದ ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಪೇಗೌಡ ಇಂಟರ್‌ನ್ಯಾಷನಲ್ ಏರ್‌ಪೋರ್ಟ್‌ನಲ್ಲಿ (Bangalore International Airport Limited) ತುರ್ತು ಭೂಸ್ಪರ್ಶ (Emergency landing) ಮಾಡಿದ್ದು, 270 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ʼʼತಾಂತ್ರಿಕ ದೋಷದ ಹಿನ್ನೆಲೆಯಲ್ಲಿ 270 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನವನ್ನು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲಾಯಿತುʼʼ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.
ವರದಿಗಳ ಪ್ರಕಾರ, ವಿಮಾನವು ಬೆಳಗ್ಗೆ 8.20ರ ಸುಮಾರಿಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಟಿತು. ಆದರೆ ನಿರ್ಗಮನದ ಸ್ವಲ್ಪ ಸಮಯದ ನಂತರ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೈಲಟ್ ತುಮಕೂರಿನ ಬಳಿ ವಿಮಾನವನ್ನು ಅರ್ಧ ಗಂಟೆಗೂ ಹೆಚ್ಚು ಕಾಲ ಸುತ್ತು ಹಾಕಿಸಿ ಬೆಂಗಳೂರಿಗೆ ಹಿಂದುರುಗಿಸಿದ್ದಾರೆ.
ಬೆಂಗಳೂರಿನಲ್ಲಿ ವಿಮಾನದ ತುರ್ತು ಭೂಸ್ಪರ್ಶ:
STORY | London-bound plane makes 'emergency landing' at Bengaluru airport after technical snag
— Press Trust of India (@PTI_News) September 6, 2026
A London-bound Virgin Atlantic flight carrying 270 passengers was forced to make an "emergency landing" at the Kempegowda International Airport here on Sunday after developing a… pic.twitter.com/4HBXwStdEb
ʼʼಯಾರಿಗೂ ಯಾವುದೇ ರೀತಿಯ ಗಾಯವಾಗಿಲ್ಲ. ಎಲ್ಲರೂ ಸುರಕ್ಷಿತವಾಗಿದ್ದಾರೆʼʼ ಎಂದು ಏರ್‌ಪೋರ್ಟ್ ಮೂಲಗಳು ತಿಳಿಸಿವೆ. ಸದ್ಯ ವರ್ಜಿನ್ ಅಂಟ್ಲಾಟಿಕ್ ಸಂಸ್ಥೆ ಈ ಬಗ್ಗೆ ಯಾವುದೇ ಹೇಳಿಕೆ ನೀಡಿಲ್ಲ. ಯಾವ ರೀತಿಯ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನುವುದನ್ನು ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗಿದೆ.
ಗೋವಾದಿಂದ ದೆಹಲಿಗೆ ತೆರಳುತ್ತಿದ್ದ ಇಂಡಿಗೋ ವಿಮಾನದ ಎಂಜಿನ್‌ನಲ್ಲಿ ದೋಷ; ತುರ್ತು ಭೂಸ್ಪರ್ಶ
ಅಧಿಕಾರಿಗಳು ಹೇಳಿದ್ದೇನು?
ʼʼಬೆಂಗಳೂರಿಗೆ ಮರಳುವ ಮೊದಲು ವಿಮಾನ ತುಮಕೂರಿನಲ್ಲಿ ಸುಮಾರು 30 ನಿಮಿಷಗಳ ಕಾಲ ರೌಂಡ್ ಹೊಡೆದಿದೆ. ಇಂಧನ ಬಹುತೇಕ ಖಾಲಿ ಮಾಡಿದ ಬಳಿಕ ಬೆಂಗಳೂರಿನಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ವಿಮಾನದಲ್ಲಿ ಯಾವ ರೀತಿಯ ತಾಂತ್ರಿಕ ದೋಷ ಕಾಣಿಸಿಕೊಂಡಿದೆ ಎನ್ನುವುದನ್ನು ಪತ್ತೆ ಹಚ್ಚಲು ಪರಿಶೀಲನೆ ನಡೆಸಲಾಗುತ್ತಿದೆʼʼ ಎಂದು ಬೆಂಗಳೂರು ವಿಮಾನ ನಿಲ್ದಾಣ ಅಧಿಕಾರಿಗಳು ವಿವರಿಸಿದ್ದಾರೆ. ಸದ್ಯ ಪ್ರಯಾಣಿಕರಿಗೆ ಎಲ್ಲ ರೀತಿಯ ವ್ಯವಸ್ಥೆ ಮಾಡಲಾಗಿದ್ದು, ಶೀಘ್ರದಲ್ಲೇ ಪರ್ಯಾಯ ವಿಮಾನದ ಮೂಲಕ ಕರೆದೊಯ್ಯಲಾಗುತ್ತದೆ ಎಂದು ವಿಮಾನಯಾನ ಸಂಸ್ಥೆ ಭರವಸೆ ನೀಡಿದೆ. ಆಗಸ ಮಧ್ಯದಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಳ್ಳಲು ಕಾರಣವೇನು ಎನ್ನುವ ಬಗ್ಗೆ ತನಿಖೆ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.
ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ ಲಖನೌನಲ್ಲಿ ತುರ್ತು ಭೂಸ್ಪರ್ಶ
ಉತ್ತರ ಪ್ರದೇಶದ ವಾರಣಾಸಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಪರಿಣಾಮ ಗುರುವಾರ (ಸೆಪ್ಟೆಂಬರ್ 3) ಲಖನೌನಲ್ಲಿ ತುರ್ತು ಭೂಸ್ಪರ್ಶ ಮಾಡಿರುವ ಘಟನೆ ನಡೆದಿತ್ತು. ಸಿಬ್ಬಂದಿ ಸೇರಿದಂತೆ ಒಟ್ಟು 155 ಮಂದಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಎಲ್ಲರನ್ನು ಲಖನೌನಲ್ಲಿ ಸುರಕ್ಷಿತವಾಗಿ ಇಳಿಸಲಾಗಿದೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ತಿಳಿಸಿದೆ.
ದೆಹಲಿಯಲ್ಲಿ ಇಂಡಿಗೋ ವಿಮಾನ ತುರ್ತು ಭೂಸ್ಪರ್ಶ: ಎಂಜಿನ್ ವೈಫಲ್ಯ ಶಂಕೆ
ಅದೇ ದಿನ ಕತಾರ್‌ನ ದೋಹಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನವನ್ನು ಓಮನ್‌ನ ಮಸ್ಕತ್‌ಗೆ ಮಾರ್ಗ ಬದಲಿಸಲಾಯಿತು. ವಿಮಾನದಲ್ಲಿದ್ದ ಸಿಬ್ಬಂದಿಯೊಬ್ಬರಿಗೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಬೇಕಾಗಿದ್ದರಿಂದ ವಿಮಾನವನ್ನು ಮಸ್ಕತ್‌ಗೆ ತಿರುಗಿಸಲಾಗಿದ್ದು, ಅಲ್ಲಿ ಅವರಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಯಿತು.
ರಾಜ್ಯದ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.