ಪ್ರಯಾಣಿಕರಿಗೆ ಶಾಕ್; ನಾಳೆಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಹೆಚ್ಚಳ
ನಾಳೆಯಿಂದ (ಫೆ.16) ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್‌ಗೆ ನೂತನ ಪರಿಷ್ಕ್ರತ ದರ ಜಾರಿಗೆಯಾಗಲಿದೆ. ಡೀಸೆಲ್, ಸಿಬ್ಬಂದಿ ಹಾಗೂ ಇತರೆ ಖರ್ಚುಗಳ ಏರಿಕೆ ಹಿನ್ನೆಲೆ ಲಗೇಜ್ ದರ ಏರಿಕೆ ಮಾಡಲಾಗಿದೆ ಎಂದು ಸಾರಿಗೆ ನಿಗಮ ತಿಳಿಸಿದೆ.
ಕೆಎಸ್‌ಆರ್‌ಟಿಸಿ ಬಸ್ (ಸಂಗ್ರಹ ಚಿತ್ರ) -
ಬೆಂಗಳೂರು: ಪ್ರಯಾಣಿಕರಿಗೆ ಕೆಎಸ್‌ಆರ್‌ಟಿಸಿ (KSRTC bus) ದರ ಏರಿಕೆಯ ಶಾಕ್ ನೀಡಿದೆ. ನಾಳೆಯಿಂದ (ಫೆ.16) ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್ ದರ (luggage charges) ಹೆಚ್ಚಳವಾಗಲಿದೆ. ಈ ಬಗ್ಗೆ ಕೆಎಸ್‌ಆರ್‌ಟಿಸಿ ಎಂಡಿ ಅಕ್ರಂ ಪಾಷಾ ಮಾಹಿತಿ ನೀಡಿದ್ದಾರೆ.
ನಾಳೆಯಿಂದ (ಫೆ.16) ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಪ್ರಯಾಣಿಕ ರಹಿತವಾಗಿ ಸಾಗಿಸುವ ಲಗೇಜ್‌ಗೆ ನೂತನ ಪರಿಷ್ಕ್ರತ ದರ ಜಾರಿಗೆಯಾಗಲಿದೆ. ಡೀಸೆಲ್, ಸಿಬ್ಬಂದಿ ಹಾಗೂ ಇತರೆ ಖರ್ಚುಗಳ ಏರಿಕೆ ಹಿನ್ನೆಲೆ ಲಗೇಜ್ ದರ ಏರಿಕೆ ಮಾಡಲಾಗಿದೆ. ಈ ಮೊದಲು 2021ರಲ್ಲಿ ಲಗೇಜ್ ದರ ಏರಿಕೆಯಾಗಿತ್ತು. ಅದಾದ ಬಳಿಕ ಟಿಕೆಟ್ ದರ ಪರಿಷ್ಕ್ರರಣೆ ಆದಾಗ ಲಗೇಜ್ ದರ ಏರಿಕೆಯಾಗಿರಲಿಲ್ಲ ಎಂದಿದ್ದಾರೆ.
ಪರಿಷ್ಕೃತ ಲಗೇಜ್ ದರಪಟ್ಟಿ
- 1ರಿಂದ 5 ಸ್ಟೇಜ್‌ವರೆಗೆ 6 ರೂ.
- 6 ರಿಂದ 12 ಸ್ಟೇಜ್‌ವರೆಗೆ 12 ರೂ.
- 156 ರಿಂದ 160 ಸ್ಟೇಜ್‌ವರೆಗೆ 145 ರೂ.
ಲಗೇಜ್ ದರ ಏರಿಕೆಯಿಂದ ಮುಖ್ಯವಾಗಿ ಕೊರಿಯರ್ ಸೇವೆ ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಹೆಚ್ಚಿನ ಪ್ರಭಾವ ಬೀರಲಿದೆ. ಪ್ರಯಾಣಿಕರಿಲ್ಲದೆ ಬಸ್ ಮೂಲಕ ಪಾರ್ಸೆಲ್ ಕಳುಹಿಸುವ ವ್ಯವಸ್ಥೆಯನ್ನು ಅನೇಕರು ಬಳಸಿಕೊಳ್ಳುತ್ತಿದ್ದರು. ಈಗ ಹೊಸ ದರ ಜಾರಿಗೆ ಬರುತ್ತಿರುವುದರಿಂದ ಸಾಮಾನ್ಯ ಜನರು ಮತ್ತು ವ್ಯಾಪಾರಸ್ಥರು ತಮ್ಮ ಜೇಬಿಗೆ ಕತ್ತರಿ ಬೀಳಲಿದೆ. ಕೆಎಸ್‌ಆರ್‌ಟಿಸಿ ಸಿಬ್ಬಂದಿಗೂ ಈ ಕುರಿತು ಈಗಾಗಲೇ ಸೂಚನೆ ನೀಡಲಾಗಿದ್ದು, ನಾಳೆಯಿಂದ ಹೊಸ ದರದಂತೆ ರಸೀದಿ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣ
ಬೆಂಗಳೂರು: 2026ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಿ ಕೆಎಸ್‌ಆರ್‌ಟಿಸಿ ಸುತ್ತೋಲೆ ಹೊರಡಿಸಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಫೆ. 28ರಿಂದ ಕರ್ನಾಟಕದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ, ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರು ಕೋರಿದ್ದರು.
ಇದರನ್ವಯ ಕ.ರಾ.ರ.ಸಾ.ನಿಗಮವು, ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ ಫೆ.28ರಿಂದ ಮಾರ್ಚ್ 17ರವರೆಗೆ, ಪರೀಕ್ಷೆಗೆ ಹಾಜರಾಗುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ದ್ವಿತೀಯ ಪಿಯುಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ನೆಲಮಂಗಲ ಬಳಿ ಭೀಕರ ಅಪಘಾತ; KSRTC ಬಸ್ಗೆ ಗುದ್ದಿದ ಕಾರು, ಐವರು ಸ್ಥಳದಲ್ಲಿಯೇ ಸಾವು
ಈ ಸಂಬಂಧ, ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ನಿಯೋಜಿತ ಪರೀಕ್ಷಾ ಕೇಂದ್ರಗಳಿಗೆ ತೆರಳಲು ಹಾಗೂ ವಾಸಸ್ಥಳಕ್ಕೆ ಮರಳಲು ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪ್ರಯಾಣಿಸಲು ಅನುಮತಿಸಲು ಸೂಕ್ತ ತಿಳುವಳಿಕೆ ನೀಡಲು ಸೂಚಿಸಲಾಗಿದೆ.