ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಆನೇಕಲ್‌ನಲ್ಲಿ ಭೀಕರ ಅಗ್ನಿ ಅವಘಡ; ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿ!

ಆನೇಕಲ್ ತಾಲೂಕಿನ ಹಳೇ ಚಂದಾಪುರದಲ್ಲಿ ಭಾನುವಾರ ಸಂಜೆ ಅಗ್ನಿ ಅವಘಡ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ ಸಮೀಪ ಬ್ಲೂ ಬಡ್ ಲಾಜಿಸ್ಟಿಕ್ ಆವರಣದಲ್ಲಿ ನಿಲ್ಲಿಸಿದ್ದ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿಯಾಗಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಆನೇಕಲ್‌ನಲ್ಲಿ ನಾಲ್ಕು ಖಾಸಗಿ ಬಸ್‌ಗಳು ಬೆಂಕಿಗಾಹುತಿ

-

Prabhakara R
Prabhakara R Jul 26, 2026 4:42 PM

ಆನೇಕಲ್: ತಾಲೂಕಿನ ಹಳೇ ಚಂದಾಪುರ ಸಮೀಪ ಭಾನುವಾರ ಸಂಜೆ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ (fire accident) ಪಾರ್ಕಿಂಗ್‌ ಲಾಟ್‌ನಲ್ಲಿ ನಿಲ್ಲಿಸಲಾಗಿದ್ದ ನಾಲ್ಕು ಖಾಸಗಿ ಬಸ್‌ಗಳು (private buses burnt) ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ರಾಷ್ಟ್ರೀಯ ಹೆದ್ದಾರಿ ಹಳೆ ಚಂದಾಪುರ ಸಮೀಪವಿರುವ ಡೀ ಸೇಲ್ಸ್ ಅಕಾಡೆಮಿ ಶಾಲೆಯ ಪಕ್ಕದಲ್ಲಿರುವ ಬ್ಲೂ ಬಡ್ ಲಾಜಿಸ್ಟಿಕ್ ಆವರಣದಲ್ಲಿ ಖಾಸಗಿ ಬಸ್‌ಗಳನ್ನು ನಿಲ್ಲಿಸಲಾಗಿತ್ತು. ಸಂಜೆ ಏಕಾಏಕಿ ಒಂದು ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆ ಎಲ್ಲ ನಾಲ್ಕು ಬಸ್‌ಗಳಿಗೂ ಬೆಂಕಿ ವ್ಯಾಪಿಸಿದೆ.

ಬೆಂಕಿ ಹೊತ್ತಿಕೊಂಡ ತಕ್ಷಣವೇ ಸ್ಥಳೀಯರು ಆತಂಕಗೊಂಡಿದ್ದು, ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಅದೃಷ್ಟವಶಾತ್ ಘಟನೆಯ ಸಮಯದಲ್ಲಿ ಬಸ್‌ಗಳಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಬಸ್‌ಗಳು ಬೆಂಕಿಗೆ ಆಹುತಿಯಾಗಲು ನಿಖರವಾದ ಕಾರಣವೇನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಶಾರ್ಟ್ ಸರ್ಕ್ಯೂಟ್ ಅಥವಾ ಬೇರೆ ಯಾವುದಾದರೂ ಕಾರಣದಿಂದ ಈ ಅವಘಡ ಸಂಭವಿಸಿರಬಹುದೇ ಎಂಬ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ಮಗುವಿನ ಎದುರೇ ಪತ್ನಿ ಆತ್ಮಹತ್ಯೆ!

ಬೆಂಗಳೂರು: 7 ತಿಂಗಳ ಹಸುಗುಸಿನ ಮುಂದೆಯೇ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಪರಪ್ಪನ ಅಗ್ರಹಾರದ ರಾಯಸಂದ್ರದಲ್ಲಿ ನಡೆದಿದೆ. ಸಾನಿಕ ಗೌಡ ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪತಿ ಶರಣ ಗೌಡನಿಗೆ ವಿಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

Bagalkot Car Blast: ಜಮಖಂಡಿಯಲ್ಲಿ ಬಾರ್‌ ಮುಂದೆ ನಿಲ್ಲಿಸಿದ್ದ ಕಾರು ಏಕಾಏಕಿ ಸ್ಫೋಟ, ಛಿದ್ರಛಿದ್ರಗೊಂಡ ವಾಹನ!

ಕಳೆದ ಒಂದೂವರೆ ವರ್ಷದ ಹಿಂದೆ ಶರಣಗೌಡನ ಜತೆಗೆ ಸಾನಿಕ ಮದುವೆ ಆಗಿತ್ತು. ಆದರೆ ಕೆಲವು ತಿಂಗಳ ಹಿಂದೆ ಸಾನಿಕಾಗೆ ಪತಿಯ ಅಕ್ರಮ ಸಂಬಂಧದ ಬಗ್ಗೆ ತಿಳಿದಿತ್ತು. ಇದರಿಂದ ಮನನೊಂದು ಸಾನಿಕ ಕಳೆದ ರಾತ್ರಿ ಪತಿಗೆ ವಿಡಿಯೋ ಕಾಲ್ ಮಾಡಿ ತನ್ನ 7 ತಿಂಗಳ ಹಸುಗೂಸಿನ ಮುಂದೆಯೇ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.