ಬೆಂಗಳೂರು: ಮಲೇಷ್ಯಾ ಪ್ರಧಾನಿ ಅನ್ವರ್ ಇಬ್ರಾಹಿಂ ಅವರು ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ವಿಡಿಯೊ ಕರೆ ಮೂಲಕ ಮಾಡಿ ಶುಭಾಶಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಡಿ.ಕೆ. ಶಿವಕುಮಾರ್ (CM DK Shivakumar) ವಿಡಿಯೊ ಹಂಚಿಕೊಂಡಿದ್ದಾರೆ.
ಕರ್ನಾಟಕದ ಮುಖ್ಯಮಂತ್ರಿಯಾಗಿ ನನ್ನ ಹೊಸ ಜವಾಬ್ದಾರಿಗೆ ಶುಭಾಶಯಗಳನ್ನು ತಿಳಿಸಲು ಕರೆ ಮಾಡಿದ ಮಲೇಷ್ಯಾದ ಗೌರವಾನ್ವಿತ ಪ್ರಧಾನಿಯವರೊಂದಿಗೆ ಮಾತನಾಡಿದ್ದು ಸಂತಸ ತಂದಿದೆ. ನಮ್ಮ ಚರ್ಚೆಯು ಕರ್ನಾಟಕ ಮತ್ತು ಮಲೇಷ್ಯಾ ನಡುವಿನ ಸಂಬಂಧಗಳನ್ನು ಬಲಪಡಿಸುವ ಬಗ್ಗೆ, ವಿಶೇಷವಾಗಿ ಶಿಕ್ಷಣ, ತಂತ್ರಜ್ಞಾನ, ನಾವೀನ್ಯತೆ ಬಗ್ಗೆ ಕೇಂದ್ರೀಕರಿಸಿತ್ತು. ಮಲೇಷ್ಯಾದ ಅನೇಕ ವಿದ್ಯಾರ್ಥಿಗಳು ಕರ್ನಾಟಕದಲ್ಲಿ ಶಿಕ್ಷಣ ಪಡೆಯುತ್ತಿರುವುದರಿಂದ, ನಮ್ಮ ಪಾಲುದಾರಿಕೆ ಇನ್ನಷ್ಟು ವೃದ್ಧಿಯಾಗುವ ನಿರೀಕ್ಷೆ ಇದೆ.
ನಾನು ಮಲೇಷ್ಯಾಕ್ಕೆ ಭೇಟಿ ನೀಡಲು ಎದುರು ನೋಡುತ್ತಿದ್ದೇನೆ. ಅರ್ಥಪೂರ್ಣ ಸಹಯೋಗ ಮತ್ತು ಪ್ರಗತಿಯತ್ತ ಹೆಜ್ಜೆಹಾಕಲು ಮಲೇಷ್ಯಾ ಪ್ರಧಾನಿಯವರನ್ನು ಕರ್ನಾಟಕಕ್ಕೆ ಆಹ್ವಾನಿಸಲು ಬಯಸುವೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಜೆಡಿಎಸ್ ಕಾರ್ಯಕರ್ತರಿಗೂ ನನ್ನ ಮನೆ ಬಾಗಿಲು ತೆರೆದಿದೆ: ಸಿಎಂ ಡಿ.ಕೆ. ಶಿವಕುಮಾರ್
ಕನಕಪುರ: "ಜನತಾದಳದ ಕಾರ್ಯಕರ್ತರಿಗೂ ಈ ಡಿ.ಕೆ. ಶಿವಕುಮಾರ್ ಇದ್ದಾನೆ. ನನ್ನ ಮನೆ ಬಾಗಿಲು ನಿಮಗೂ ತೆರೆದಿದೆ. ನೀವು ನನ್ನನ್ನು ಬಳಸಿಕೊಂಡು, ಸಹಾಯ ಪಡೆಯಬಹುದು" ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಜೆಡಿಎಸ್‌ನವರಿಗೆ ಮುಕ್ತ ಕರೆ ನೀಡಿದರು. ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಶಿವಕುಮಾರ್ ಅವರು ಇದೇ ಮೊದಲ ಬಾರಿಗೆ ಭಾನುವಾರ ತವರು ಕ್ಷೇತ್ರ ಕನಕಪುರದ ವಿವಿಧ ಭಾಗಗಳಿಗೆ ಭೇಟಿ ನೀಡಿ ಜನರಿಗೆ ಕೃತಜ್ಞತೆ ಸಲ್ಲಿಸಿ ಮಾತನಾಡಿದರು.
"ನಿಮಗೆ ಒಳ್ಳೆಯದು ಮಾಡಲು ನಾನು ಸಿದ್ಧನಾಗಿದ್ದೇನೆ. ದೇವರು ವರ, ಶಾಪ ನೀಡುವುದಿಲ್ಲ. ಅವಕಾಶ ಮಾತ್ರ ನೀಡುತ್ತಾನೆ. ನೀವು ಸಿಕ್ಕಂತಹ ಅವಕಾಶವನ್ನು ಬಳಸಿಕೊಳ್ಳಬೇಕು. ಬಿಜೆಪಿಯನ್ನು ದೂರ ಇಡಬೇಕು ಎಂದು ಹಿಂದೆ ಅನಿತಾ ಕುಮಾರಸ್ವಾಮಿ ಹಾಗೂ ಕುಮಾರಸ್ವಾಮಿ ಅವರಿಗೆ ನಾವು ಬೆಂಬಲ ನೀಡಿದ್ದೆವು. ಈ ಹಿಂದೆ ಆಗಿದ್ದನ್ನು ನಾನು ಈಗ ಚರ್ಚೆ ಮಾಡುವುದಿಲ್ಲ" ಎಂದು ಹೇಳಿದರು.
ಈ ಕ್ಷೇತ್ರದಲ್ಲಿ ಎಲ್ಲರನ್ನೂ ಒಟ್ಟಾಗಿ ತೆಗೆದುಕೊಂಡು ಹೋಗಲಾಗುವುದು. ಲೋಕಸಭೆ ಚುನಾವಣೆಯಲ್ಲಿ ನಮಗೆ ಬೆಂಬಲ ಕೊಡಲಿಲ್ಲ ಎಂದು ದೂಷಣೆ ಮಾಡುವುದಿಲ್ಲ. ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಏನೋ ಒಮ್ಮೆ ಹೆಚ್ಚು ಕಮ್ಮಿ ಆಗಿ ತಪ್ಪಾಗಿದೆ. ಅದನ್ನು ಕ್ಷಮಿಸಿ, ಮುಂದೆ ನನ್ನನ್ನು ಯಾವ ರೀತಿ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಿಸಿದ್ದೀರೋ ಅದೇ ರೀತಿ ನಮ್ಮವರನ್ನು ಮುಂದೆಯೂ ಬೆಂಬಲಿಸಿ. ಎಲ್ಲಾರೂ ಒಂದಾಗಿ ಹೋಗೋಣ. ನಮ್ಮ ಮುಖಂಡರು ಯಾರ ವಿರುದ್ಧವೂ ದ್ವೇಷ ಸಾಧಿಸಬಾರದು. ಅವರ ಮನಪರಿವರ್ತನೆ ಆಗಲಿ ಎಂದು ಪ್ರಾರ್ಥಿಸಿ ಎಂದರು.
ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ
ನನ್ನ ಕಷ್ಟ ಕಾಲದಲ್ಲಿ ನೀವು ನನಗಾಗಿ ಪ್ರಾರ್ಥನೆ ಮಾಡಿದ್ದೀರಿ, ಹರಕೆ ಕಟ್ಟಿಕೊಂಡಿದ್ದೀರಿ, ಹೋರಾಟ ಮಾಡಿದ್ದೀರಿ, ಕೇಸ್ ಹಾಕಿಸಿಕೊಂಡಿದ್ದೀರಿ. ನಿಮ್ಮ ಶ್ರಮಕ್ಕೆ ಈಗ ಫಲ ಸಿಕ್ಕಿದೆ. ಎರಡು ದಿನ ತಡವಾದರೂ ಸಿದ್ದರಾಮಯ್ಯ ಅವರು ನುಡಿದಂತೆ ನಡೆದಿದ್ದಾರೆ. ನಾನು ಪಕ್ಷದ ಮಾರ್ಗದರ್ಶನದಂತೆ ನಡೆಯಬೇಕು. ನಾನು ಹಾಗೂ ಸಿದ್ದರಾಮಯ್ಯ ಅವರು ಸೇರಿ 2028ರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ,ಸರ್ಕಾರ ರಚಿಸಲು ನೀವು ಅನುವು ಮಾಡಿಕೊಡಬೇಕು ಎಂದರು.
CM DK Shivakumar: ಜೀರೋ ಟ್ರಾಫಿಕ್‌ನಿಂದ ಜನರಿಗೆ ತೊಂದ್ರೆ ತಪ್ಪಿಸಲು ಮೆಟ್ರೋ ರೈಲಿನಲ್ಲಿ ಪ್ರಯಾಣಿಸಿದ ಸಿಎಂ ಡಿಕೆಶಿ
ನನಗೆ ಜಾತಿ, ಧರ್ಮ ಭೇದ ಭಾವದ ಮೇಲೆ ನಂಬಿಕೆ ಇಲ್ಲ. ಕುವೆಂಪು ಅವರು ಹೇಳಿರುವಂತೆ ಈ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವಾಗಿ ಮಾಡಬೇಕು. ಎಲ್ಲ ಸಮುದಾಯದವರನ್ನು ನಾನು ನನ್ನ ಅಣ್ಣ ತಮ್ಮಂದಿರೆಂದು ಕಂಡಿದ್ದೇನೆ ಎಂದು ಹೇಳಿದರು.