ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನೆಫ್ರೋ ಯುರಾಲಜಿ ಆಸ್ಪತ್ರೆಯ ವೈದ್ಯರ ಕಳ್ಳಾಟ ಬೆಳಕಿಗೆ: ಸರಕಾರಿ ವೈದ್ಯರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಸೇವೆ

ತನಿಖೆ ವೇಳೆಯಲ್ಲಿ ಆರೋಪಿತ ವೈದ್ಯರುಗಳ ವಿರುದ್ಧ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದೆ. ಇದನ್ನಾಧರಿಸಿ ಈ ವೈದ್ಯರುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಲೋಕಾಯುಕ್ತ ಸಂಸ್ಥೆಯು 12(3) ಅಡಿಯಲ್ಲಿ ತನಿಖಾ ವರದಿಯನ್ನು ಸರಕಾರಕ್ಕೆ ಸಲ್ಲಿಸಿತ್ತು. ಅಲ್ಲದೆ ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆಯು ಇಲಾಖೆ ವಿಚಾರಣೆ ನಡೆಸಿದ್ದು, ಶೀಘ್ರದಲ್ಲೆ ಕ್ರಮ ಕೈಗೊಳ್ಳಲಿದೆ.

ಬೆಂಗಳೂರು: ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿ ಐವರು 5 ವೈದ್ಯರುಗಳು ಕರ್ತವ್ಯದ ಅವಧಿ ಯಲ್ಲಿ ಖಾಸಗಿ ಆಸ್ಪತ್ರೆಗಳಿಗೆ ತೆರಳುವ ಮೂಲಕ ಸರಕಾರಿ ವೈದ್ಯಕೀಯ ಸಂಸ್ಥೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಅನಾನುಕೂಲ ಮಾಡಿರುವುದು ಮತ್ತು ಕರ್ತವ್ಯದ ವೇಳೆಯಲ್ಲಿ ತಮ್ಮದೇ ಸ್ವಂತ ಮಾಲೀಕತ್ವದ ಖಾಸಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ತೆರಳಿರುವುದು ಲೋಕಾಯುಕ್ತ ಸಂಸ್ಥೆಯು ತನಿಖೆಯಿಂದ ಸಾಬೀತುಪಡಿಸಿದೆ.

ಈ ಪ್ರಕರಣವು ಲೋಕಾಯುಕ್ತದ ಹಂತದಲ್ಲಿ ಮುಕ್ತಾಯಗೊಂಡಿದ್ದು, ಕ್ರಮಕ್ಕೆ ವೈದ್ಯಕೀಯ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಟ್ಟಿದೆ. ಮಾಜಿ ನಿದೇರ್ಶಕ ಡಾ.ಆರ್.ಕೇಶವಮೂರ್ತಿ, ಡಾ.ಪ್ರದೀಪ್ ಎಂ ಎಸ್, ಡಾ.ಶ್ರೀಧರ, ಡಾ ಕಿಶನ್, ಡಾ ಶ್ರೀನಿವಾಸ ಅವರ ವಿರುದ್ಧ ಡಾ ಸುಜಾತ ಸಿದ್ದಪ್ಪ ಎಂಬುವರು ಲೋಕಾಯುಕ್ತಕ್ಕೆ 2021ರಲ್ಲಿ ದೂರು ಸಲ್ಲಿಸಿದ್ದರು. ಈ ದೂರನ್ನಾಧರಿಸಿ ಲೋಕಾಯುಕ್ತ ಸಂಸ್ಥೆಯು 5 ವರ್ಷಗಳ ಕಾಲ ತನಿಖೆ ನಡೆಸಿದೆ.

ತನಿಖೆ ವೇಳೆಯಲ್ಲಿ ಆರೋಪಿತ ವೈದ್ಯರುಗಳ ವಿರುದ್ಧ ಆರೋಪವು ಮೇಲ್ನೋಟಕ್ಕೆ ಸಾಬೀತಾಗಿದೆ. ಇದನ್ನಾಧರಿಸಿ ಈ ವೈದ್ಯರುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಲೋಕಾಯುಕ್ತ ಸಂಸ್ಥೆಯು 12(3) ಅಡಿಯಲ್ಲಿ ತನಿಖಾ ವರದಿಯನ್ನು ಸರಕಾರಕ್ಕೆ ಸಲ್ಲಿಸಿತ್ತು. ಅಲ್ಲದೆ ಈ ಕುರಿತು ವೈದ್ಯಕೀಯ ಶಿಕ್ಷಣ ಇಲಾಖೆಯು ಇಲಾಖೆ ವಿಚಾರಣೆ ನಡೆಸಿದ್ದು, ಶೀಘ್ರದಲ್ಲೆ ಕ್ರಮ ಕೈಗೊಳ್ಳಲಿದೆ.

ಇದನ್ನೂ ಓದಿ: Bagepally Crime: ಹಾಡಹಗಲೇ ವ್ಯಕ್ತಿಯ ಕತ್ತು ಕೊಯ್ದು ಕೊಲೆ: ಬಾಗೇಪಲ್ಲಿಯಲ್ಲಿ ಬೆಚ್ಚಿಬೀಳಿಸಿದ ಘಟನೆ; ಆರೋಪಿಗಳ ಪತ್ತೆಗೆ ಪೊಲೀಸರ ಶೋಧ

ಆರೋಪಿತ ವೈದ್ಯರುಗಳು ತಮ್ಮ ಕರ್ತವ್ಯದ ಅವಧಿಯಲ್ಲಿ ಖಾಸಗಿ ಆಸ್ಪತ್ರೆಗೆ ತೆರಳಿದ್ದರು. ಈ ಮೂಲಕ ಸರಕಾರಿ ವೈದ್ಯಕೀಯ ಸಂಸ್ಥೆಗೆ ಚಿಕಿತ್ಸೆಗಾಗಿ ಬರುವ ರೋಗಿಗಳಿಗೆ ಅನಾನುಕೂಲವನ್ನು ಉಂಟು ಮಾಡಿದ್ದರು. ಸಂಸ್ಥೆಯ ಕರ್ತವ್ಯದ ವೇಳೆಯಲ್ಲಿ ಹೊರಗಡೆ ಹೋಗಿ ಮರಳಿ ಕರ್ತವ್ಯಕ್ಕೆ ಹೋಗಿದ್ದರು ಎಂದು ತನಿಖಾ ವರದಿಯಲ್ಲಿ ವಿವರಿಸಿರುವುದು ಸರಕಾರಿ ಆದೇಶದಿಂದ ತಿಳಿದು ಬಂದಿದೆ. ಅಲ್ಲದೇ ಈ ಆರೋಪಿತ ವೈದ್ಯರುಗಳು ತಮ್ಮದೇ ಆದ ಸ್ವಂತ ಮಾಲೀಕತ್ವದ ಹಾಗೂ ಖಾಸಗಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗಳಿಗೆ ತೆರಳಿದ್ದರು. ಈ ಪ್ರಕರಣದ 1ನೇ ಪ್ರತಿವಾದಿಯು ತಮ್ಮ ಅಧೀನ ವೈದ್ಯರನ್ನು ನಿಯಂತ್ರಿಸುವಲ್ಲಿ ವಿಫಲವಾಗಿದ್ದರು. ಅಲ್ಲದೇ ಈ ವೈದ್ಯರುಗಳು ಸ್ವಾಯತ್ತ ಸಂಸ್ಥೆಯ ನೌಕರರಿಗೆ ತರವಲ್ಲದ ರೀತಿಯ ದುರ್ನಡತೆ ತೋರಿದ್ದರು ಎಂದು ಲೋಕಾಯುಕ್ತ ತನಿಖಾ ವರದಿಯಲ್ಲಿ ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಆದೇಶದಲ್ಲಿ ವಿವರಿಸಿರುವುದು ಗೊತ್ತಾಗಿದೆ.

ಲೋಕಾಯುಕ್ತ ತನಿಖಾ ವರದಿಯಲ್ಲಿನ ಅಂಶಗಳಿಗೆ ಸಂಬಂಧಿಸಿದಂತೆ ಸಮಜಾಯಿಷಿ ನೀಡಲು ಈ ಆರೋಪಿತ ವೈದ್ಯರುಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯು ಕರ್ನಾಟಕ ನಾಗರೀಕ ಸೇವಾ (ವರ್ಗೀ ಕರಣ, ನಿಯಂತ್ರಣ ಮತ್ತು ಮೇಲ್ಮನವಿ) ದೋಷಾರೋಪಣೆ ಜಾರಿಗೊಳಿಸಿತ್ತು. ಈ ದೋಷಾ ರೋಪಣೆ ಪಟ್ಟಿಯಲ್ಲಿನ ಆರೋಪಗಳನ್ನು ಆರೋಪಿತ ವೈದ್ಯರುಗಳು ತಳ್ಳಿ ಹಾಕಿದ್ದರು. ಆದರೆ ವೈದ್ಯಕೀಯ ಶಿಕ್ಷಣ ಇಲಾಖೆಯು ಆರೋಪಿತ ವೈದ್ಯರುಗಳ ಸಮಜಾಯಿಷಿಯನ್ನು ಒಪ್ಪಿರಲಿಲ್ಲ.

ಮೊದಲನೇ ಪ್ರತಿವಾದಿ ಡಾ.ಕೇಶವಮೂರ್ತಿ ಅವರು ಸರಕಾರಿ ಹಣವನ್ನು ವೈಯಕ್ತಿಕವಾಗಿ ಬಳಸಿ ಕೊಂಡಿದ್ದರು. ಮತ್ತು ನಿಯಮಗಳಿಗೆ ವಿರುದ್ಧವಾಗಿ ತಮಗೆ ಬೇಕಾದವರಿಗೆ ಟೆಂಡರ್‌ಗಳನ್ನು ನೀಡಿದ್ದರು ಎಂದು ದೂರುದಾರರು ಲೋಕಾಯುಕ್ತಕ್ಕೆ ಸಲ್ಲಿಸಿದ್ದ ದೂರಿನಲ್ಲಿ ವಿವರಿಸಿದ್ದರು.

ಏನಿದು ಪ್ರಕರಣ? : ಸರಕಾರಿ ಸ್ವಾಮ್ಯದ ಸ್ವಾಯತ್ತ ಸಂಸ್ಥೆಯಾದ ನೆಫ್ರೋ ಯುರಾಲಜಿ ಸಂಸ್ಥೆಯಲ್ಲಿನ ಐವರು ವೈದ್ಯರು ಕರ್ತವ್ಯದ ಅವಧಿಯಲ್ಲಿ ಖಾಸಗಿಯಾಗಿ ಬೇರೆಡೆಗೆ ವೈದ್ಯಕೀಯ ವೃತ್ತಿ ನಡೆಸುತ್ತಿರುವುದು ಲೋಕಾಯುಕ್ತ ಪೊಲೀಸರ ತನಿಖೆಯಿಂದ ದೃಢಪಟ್ಟಿದ್ದು, ಕ್ರಮ ಕೈಗೊಳ್ಳುವಂತೆ ಸರಕಾರಕ್ಕೆ ವರದಿ ಸಲ್ಲಿಕೆಯಾಗಿದೆ.

ನೆಫ್ರೋ ಯುರಾಲಜಿ ಸಂಸ್ಥೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರದೀಪ್, ಸಹಾಯಕ ಪ್ರಾಧ್ಯಾಪಕರಾದ ಡಾ.ಶ್ರೀಧರ್, ಡಾ. ಕಿಶನ್, ಸಹ ಪ್ರಾಧ್ಯಾಪಕ ಡಾ.ಶಿವಕುಮಾರ್ ಹಾಗೂ ಪ್ರಾಧ್ಯಾಪಕ ಶ್ರೀನಿವಾಸ್ ಅವರು ವಿಚಾರಣೆಗೆ ಒಳಪಟ್ಟಿದ್ದರು. ಇವರು ಖಾಸಗಿ ಆಸ್ಪತ್ರೆಗಳಲ್ಲಿಯೂ ಕಾರ್ಯನಿರ್ವಹಿಸು ತ್ತಿರುವುದರಿಂದ ರೋಗಿಗಳಿಗೆ ಸಮಸ್ಯೆಯಾಗುತ್ತಿದೆಯೆಂದು ವರದಿಯಲ್ಲಿ ಹೇಳಲಾಗಿದ್ದು, 12(3) ಲೋಕಾಯುಕ್ತ ಕಾಯಿದೆ 1984ರ ಕಾಯಿದೆಯಡಿ ಕ್ರಮ ಕೈಗೊಳ್ಳುವಂತೆ ಶಿಫಾರಸು ಮಾಡಿದೆ.