ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ದಕ್ಷಿಣ ಪಿನಾಕಿನಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ; ಶವ ಹೊರತೆಗೆಯಲು ಹೋದ ವ್ಯಕ್ತಿಯೂ ಸಾವು!

Anekal News: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರಿನ ದಕ್ಷಿಣ ಪಿನಾಕಿನಿ ನದಿಯಲ್ಲಿ ಘಟನೆ ನಡೆದಿದೆ. ನದಿಯಲ್ಲಿ ಮಹಿಳೆಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಮೃತದೇಹವನ್ನು ಹೊರತೆಗೆಯಲು ಹೋದ ವೇಳೆ ಮಾಲೂರಿನ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ನದಿಯಲ್ಲಿ ಮಹಿಳೆಯ ಶವ ಹೊರತೆಗೆಯಲು ಹೋದ ವ್ಯಕ್ತಿಯೂ ಸಾವು!

-

Prabhakara R
Prabhakara R Nov 16, 2026 7:01 PM

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಮುಗಳೂರಿನ ದಕ್ಷಿಣ ಪಿನಾಕಿನಿ ನದಿಯಲ್ಲಿ ಘೋರ ಘಟನೆ ನಡೆದಿದೆ. ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದರು. ಅವರ ಮೃತದೇಹ ಹೊರತೆಗೆಯಲು ಹೋದ ವ್ಯಕ್ತಿಯೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಮಾಲೂರಿನ ಮಂಜುನಾಥ್ ಮೃತ ದುರ್ದೈವಿ. ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಲ್ಕುಂಟೆ ಅಗ್ರಹಾರ ಗ್ರಾಮದ ನಿವಾಸಿ ಕವಿತಾ ಶ್ರೀನಿವಾಸ್ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಸುಮಾರು 14 ವರ್ಷಗಳ ಹಿಂದೆ ವಿವಾಹವಾಗಿದ್ದ ಕವಿತಾ ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಇತ್ತೀಚೆಗೆ ಪತಿ ಮತ್ತು ಪತ್ನಿ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿತ್ತು. ಇದರಿಂದ ಮನನೊಂದ ಕವಿತಾ ದಕ್ಷಿಣ ಪಿನಾಕಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನದಿಯಲ್ಲಿ ಮಹಿಳೆಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಸರ್ಜಾಪುರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಮೃತದೇಹವಮ್ಮು ಹೊರತೆಗೆಯಲು ಮಾಲೂರಿನ ಮಂಜುನಾಥ್​ ಎಂಬುವವರನ್ನು ಪೊಲೀಸರು ಕರೆಸಿದ್ದರು. ಆದರೆ ಮೃತದೇಹವನ್ನು ಹೊರತೆಗೆಯುವ ಸಂದರ್ಭದಲ್ಲಿ ಮಂಜುನಾಥ್​ ಕೂಡ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಇನ್ನು ಸರ್ಜಾಪುರ ಪೊಲೀಸರು ಮೃತದೇಹ ಹೊರತೆಗೆಯುವ ಕಾರ್ಯಾಚರಣೆ ವೇಳೆ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿಲ್ಲ. ಅವರ ನಿರ್ಲಕ್ಷ್ಯಕ್ಕೆ ರಕ್ಷಣೆಗೆ ಬಂದ ಮಂಜುನಾಥ್ ಸಾವನ್ನಪ್ಪಿರುವ ಆರೋಪ ಕೇಳಿಬಂದಿದೆ.

ಮನೆಗೆ ನುಗ್ಗಿ ಚಾಕು ತೋರಿಸಿ ಬೆದರಿಕೆ: ಲೈಂಗಿಕ ದೌರ್ಜನ್ಯ: ಪೊಲೀಸ್ ಪೇದೆ ವಿರುದ್ಧ ಕೇಸ್

ಇನ್ನು ಅಗ್ನಿಶಾಮಕ ತಂಡ ದಕ್ಷಿಣ ಪಿನಾಕಿನಿ ನದಿಯಲ್ಲಿ ಕವಿತಾ ಹಾಗೂ ಮಂಜುನಾಥ್ ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ನದಿ ದಡದಲ್ಲಿ ನೂರಾರು ಜನರು ಜಮಾಯಿಸಿದ್ದು, ಸರ್ಜಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.