ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ರಾಜಭವನದ ಎದುರೇ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Self Harming: ಪೊಲೀಸರು ದೂರು ಸ್ವೀಕರಿಸುತ್ತಿಲ್ಲ ಎಂದು ಆತ್ಮಹತ್ಯೆ ಯತ್ನಕ್ಕೂ ಮುನ್ನಾ ವ್ಯಕ್ತಿ ಆರೋಪಿಸಿದ್ದಾನೆ. ಮತ್ತೊಂದೆಡೆ ಹೆಂಡತಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದೆ. ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ಸಾಯುವುದೊಂದೇ ದಾರಿ ಎಂದು ವ್ಯಕ್ತಿ ಹೇಳಿದ್ದಾನೆ.

ರಾಜಭವನದ ಎದುರೇ ಪೆಟ್ರೋಲ್ ಸುರಿದುಕೊಂಡು ವ್ಯಕ್ತಿ ಆತ್ಮಹತ್ಯೆಗೆ ಯತ್ನ

Profile Prabhakara R Apr 13, 2025 8:15 PM

ಬೆಂಗಳೂರು: ಪೊಲೀಸರು ದೂರು ಸ್ವೀಕರಿಸುತ್ತಿಲ್ಲ ಎಂದು ಮನನೊಂದು ವ್ಯಕ್ತಿಯೊಬ್ಬ ನಗರದ ರಾಜಭವನದ ಎದುರೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಭಾನುವಾರ ನಡೆದಿದೆ. ಪೊಲೀಸರು ದೂರು ಸ್ವೀಕರಿಸುತ್ತಿಲ್ಲ ಎಂದು ಆತ್ಮಹತ್ಯೆಗೆ ಮುನ್ನಾ ವ್ಯಕ್ತಿ ಆರೋಪಿಸಿದ್ದಾನೆ. ಮತ್ತೊಂದೆಡೆ ಹೆಂಡತಿ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದೆ. ನನ್ನ ಮೇಲೆ ಕೊಲೆ ಯತ್ನ ನಡೆದಿದೆ. ನನಗೆ ಬದುಕಲು ದಾರಿ ಇಲ್ಲ. ಸಾಯುವುದೊಂದೇ ದಾರಿ ಎಂದು ವ್ಯಕ್ತಿ ಹೇಳಿದ್ದಾನೆ. ಆತ್ಮಹತ್ಯೆಗೆ ಯತ್ನಿಸಿದಂತ ವ್ಯಕ್ತಿಯನ್ನು ವಿಧಾನಸೌಧ ಠಾಣೆ ಪೊಲೀಸರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಚಾಕೋಲೆಟ್ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ!

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಚಾಕೋಲೆಟ್ ಆಸೆ ತೋರಿಸಿ 5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಘಟನೆ (Murder Case) ಹುಬ್ಬಳ್ಳಿಯಲ್ಲಿ ನಡೆದಿದೆ. ಮಗುವಿನ ತಾಯಿ ಮನೆಯೊಳಗೆ ಕೆಲಸ ಮಾಡುತ್ತಿದ್ದಾಗ ಮಗು ಮನೆಯ ಹೊರಗೆ ಆಟವಾಡುತ್ತಿದ್ದಳು. ಈ ವೇಳೆ ಆರೋಪಿ ಗೇಟ್ ತೆರೆದು ಒಳ ನುಗ್ಗಿ ಬಾಲಕಿಗೆ ಚಾಕೋಲೆಟ್ ಆಸೆ ತೋರಿಸಿ ಹೊತ್ತೊಯ್ದಿದ್ದಾನೆ. ಬಳಿಕ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದಾನೆ. ಆರೋಪಿ ಮನೆಯ ಬಳಿ ಬರುತ್ತಿರುವ ಹಾಗೂ ಬಾಲಕಿಯನ್ನು ಹೊತ್ತೊಯ್ದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಬಿಹಾರ ಮೂಲದ ಯುವಕನಿಂದ ಕೃತ್ಯ ನಡೆದಿದೆ ಎನ್ನಲಾಗಿದೆ. ಹುಬ್ಬಳ್ಳಿ ಅಶೋಕನಗರ ಠಾಣೆಗೆ ನುಗ್ಗಿರುವ ಬಾಲಕಿ ಪೋಷಕರು ಹಾಗೂ ಸಾರ್ವಜನಿಕರು, ಆರೋಪಿಯನ್ನು ಬಂಧಿಸಿ ತಮಗೊಪ್ಪಿಸುವಂತೆ ಪಟ್ಟು ಹಿಡಿದಿದ್ದಾರೆ, ಪೊಲೀಸ್ ಠಾಣೆ ಎದಿರು ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಬೆಳಗಾವಿಯ ಹಾಸ್ಟೆಲ್‌ನಲ್ಲಿ ಬಿಸಿಎ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಬೆಳಗಾವಿ: ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ನೇಣಿಗೆ ಶರಣಾದ ಘಟನೆ ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ನಡೆದಿದೆ. ಶಿಲ್ಪಾ ಯರಮಸನಾಳ (20) ಆತ್ಮಹತ್ಯೆ (Self Harming) ಮಾಡಿಕೊಂಡ ಯುವತಿ.‌ ಹಾವೇರಿ ಜಿಲ್ಲೆಯ ಶಿಗ್ಗಾಂವ ಮೂಲದ ವಿದ್ಯಾರ್ಥಿನಿ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ಕಾಲೇಜಿನಲ್ಲಿ ಬಿಸಿಎ ಮೊದಲ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದುಬಂದಿದೆ. ಹಾಸ್ಟೆಲ್‌ನ ಐದನೇ ಕೊಠಡಿಯಲ್ಲಿ ವಿದ್ಯಾರ್ಥಿನಿ ನೇಣಿಗೆ ಶರಣಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಮಾಳಮಾರುತಿ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.‌

ಈ ಸುದ್ದಿಯನ್ನೂ ಓದಿ | West Bengal Violence: ಪಶ್ಚಿಮ ಬಂಗಾಳದಲ್ಲಿ ಭಾರೀ ಹಿಂಸಾಚಾರ; ರೈಲಿಗೆ ಕಲ್ಲು ತೂರಾಟ- ಕಚ್ಚಾ ಬಾಂಬ್‌ ಎಸೆದು ಅಟ್ಟಹಾಸ