ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Byrati Suresh: ಬಡ ಜನರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ಸಿಗಲಿ: ಬೈರತಿ ಸುರೇಶ್‌

ಕೆಲವು ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ಹೋಗುವ ರೋಗಿಗಳು ಗುಣಮುಖರಾಗಿ ಹೊರ ಬಂದರೂ, ಅವರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಬೇಕಾಗುವಂತಹ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗಳನ್ನು ನೀಡಿ ಜನಸಾಮಾನ್ಯರ ಮೊಗದಲ್ಲಿ ಮಂದಹಾಸ ಬೀರುವಂತಹ ಮಾನವೀಯತೆಯನ್ನು ವೈದ್ಯರು ಮತ್ತು ಆಸ್ಪತ್ರೆಗಳು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಬೆಂಗಳೂರು: ಬಡ ಜನರಿಗೆ ಕಡಿಮೆ ವೆಚ್ಚದಲ್ಲಿ ಉತ್ತಮ ಚಿಕಿತ್ಸೆ ನೀಡಬೇಕೆಂದು ಸಾರಿಗೆ ಸಚಿವ ಬೈರತಿ ಸುರೇಶ್‌(Byrati Suresh) ಖಾಸಗಿ ಆಸ್ಪತ್ರೆಗಳಿಗೆ ಕರೆ ನೀಡಿದ್ದಾರೆ. ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್‌ ಆಸ್ಪತ್ರೆಯಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಸ್ಪತ್ರೆಯ ಸಾಧನೆ ಮತ್ತು ಸೇವೆಗಳ ಕುರಿತಾದ ಕಾಫಿ ಟೇಬಲ್‌ ಪುಸ್ತಕ(Coffee Table Book)ವನ್ನು ಬಿಡುಗಡೆ ಮಾಡಿ ಮಾತನಾಡಿದರು.

With Byrati Suresh

ಕೆಲವು ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ಹೋಗುವ ರೋಗಿಗಳು ಗುಣಮುಖರಾಗಿ ಹೊರ ಬಂದರೂ, ಅವರು ಆರ್ಥಿಕವಾಗಿ ತೀವ್ರ ಸಂಕಷ್ಟಕ್ಕೆ ಒಳಗಾಗಬೇಕಾಗುವಂತಹ ಪರಿಸ್ಥಿತಿ ಇದೆ. ಈ ಹಿನ್ನೆಲೆಯಲ್ಲಿ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಗಳನ್ನು ನೀಡಿ ಜನಸಾಮಾನ್ಯರ ಮೊಗದಲ್ಲಿ ಮಂದಹಾಸ ಬೀರುವಂತಹ ಮಾನವೀಯತೆಯನ್ನು ವೈದ್ಯರು ಮತ್ತು ಆಸ್ಪತ್ರೆಗಳು ರೂಢಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ: Byrati Suresh: 10 ಕೋ. ರೂ. ವೆಚ್ಚದಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ: ಕಾಮಗಾರಿ ಶಿಲಾನ್ಯಾಸ ನೆರವೇರಿಸಿದ ಸಾರಿಗೆ ಸಚಿವ ಬೈರತಿ ಸುರೇಶ್

ಬೆಂಗಳೂರು ಇದುವರೆಗೆ ಐಟಿ-ಬಿಟಿ ರಾಜಧಾನಿ ಎಂದು ಖ್ಯಾತವಾಗಿತ್ತು. ಇದೀಗ ಇದರ ಜೊತೆಗೆ ವೈದ್ಯಕೀಯ ಹಬ್‌ ಆಗಿಯೂ ಹೆಸರುವಾಸಿಯಾಗಿದೆ. ಯಾವುದೇ ಪಂಚತಾರ ಹೊಟೇಲ್‌ ಗೂ ಕಡಿಮೆ ಇಲ್ಲದ ರೀತಿಯಲ್ಲಿ ಕೆಲವು ಖಾಸಗಿ ಆಸ್ಪತ್ರೆಗಳಿವೆ. ಇಲ್ಲಿ ಜಾಗತಿಕ ಮಟ್ಟದ ಅತ್ಯುನ್ನತ ಚಿಕಿತ್ಸೆಗಳೂ ದೊರೆಯುತ್ತಿವೆ ಎಂದರು.

ಇಂತಹ ಆಸ್ಪತ್ರೆಗಳು ಚಿಕಿತ್ಸೆಯನ್ನು ಕೇವಲ ವ್ಯಾವಹಾರಿಕವಾಗಿ ನೋಡದೇ, ಬಡ ಜನತೆಗೂ ಕಡಿಮೆ ವೆಚ್ಚದಲ್ಲಿ ಚಿಕಿತ್ಸೆಯನ್ನು ನೀಡುವತ್ತ ಗಮನಹರಿಸಬೇಕು. ಹೀಗಾದಾಗ ಮಾತ್ರ ಜನ ಸಾಮಾನ್ಯರಿಗೂ ಉತ್ತಮ ಗುಣಮಟ್ಟದ ಚಿಕಿತ್ಸೆಗಳು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

Byrati Suresh_Book Re1

ಬ್ಯಾಪ್ಟಿಸ್ಟ್‌ ಆಸ್ಪತ್ರೆ ಕಳೆದ ಐದು ದಶಕಗಳಿಗೂ ಹೆಚ್ಚು ಕಾಲದಿಂದ ಯಾವುದೇ ಲಾಭಾಪೇಕ್ಷೆ ಇಲ್ಲದೇ ಬಡ ಜನರಿಗೆ ಅತ್ಯಂತ ಕಡಿಮೆ ದರದಲ್ಲಿ ಚಿಕಿತ್ಸೆಯನ್ನು ನೀಡುತ್ತಿದೆ. ಹೀಗಾಗಿ ಇದನ್ನು ಬಡವರ ಆಸ್ಪತ್ರೆ ಎಂದೇ ನಮ್ಮ ಕ್ಷೇತ್ರದಲ್ಲಿ ಕರೆಯಲಾಗುತ್ತಿದೆ. ಈ ಆಸ್ಪತ್ರೆಯ ಸೇವೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸಿದರು.

ಕ್ರಿಶ್ಚಿಯನ್‌ ಟ್ರಸ್ಟ್‌ ಗಳು ಸೇರಿದಂತೆ ಅನೇಕ ಟ್ರಸ್ಟ್‌ ಗಳು ಜನರ ಶ್ರೇಯೋಭಿವೃದ್ಧಿಗಾಗಿ ಕಾರ್ಯಕ್ರಮ ಗಳನ್ನು ಮತ್ತು ಸೇವೆಗಳನ್ನು ನೀಡುತ್ತಿದೆ. ಅದೇ ರೀತಿ ಬ್ಯಾಪ್ಟಿಸ್ಟ್‌ ಆಸ್ಪತ್ರೆ ಸಹ ಕೇವಲ ಹೆಬ್ಬಾಳಕ್ಕೆ ಸೀಮಿತವಾಗದೇ, ಇಡೀ ರಾಜ್ಯವಷ್ಟೇ ಅಲ್ಲ, ಹೊರ ರಾಜ್ಯಗಳಿಂದಲೂ ಬರುವ ರೋಗಿಗಳಿಗೆ ಕೈಗೆಟುಕುವ ದರದಲ್ಲಿ ಚಿಕಿತ್ಸೆಯನ್ನು ನೀಡುತ್ತಿರುವುದು ಸ್ವಾಗತಾರ್ಹ ಎಂದು ಬೈರತಿ ಸುರೇಶ್‌ ಹೇಳಿದರು.