ಬೆಂಗಳೂರು: ಬೆಂಗಳೂರಿನಲ್ಲಿ ಸಂಚರಿಸುವ ಓಲಾ ಮತ್ತು ಉಬರ್ ಸೇರಿ ಎಲ್ಲಾ ಕ್ಯಾಬ್‌ಗಳಿಗೆ ಮೀಟರ್ (meters mandatory) ಅಳವಡಿಕೆಯನ್ನು ಕಡ್ಡಾಯಗೊಳಿಸಿ ಸಾರಿಗೆ ಸಚಿವ ಭೈರತಿ ಸುರೇಶ್ ಆದೇಶ ಹೊರಡಿಸಿದ್ದಾರೆ. ಮೀಟರ್ ಇಲ್ಲದೆ ಯಾವುದೇ ಕಾರಣಕ್ಕೂ ಕ್ಯಾಬ್‌ಗಳನ್ನು ರಸ್ತೆಗಿಳಿಸುವಂತಿಲ್ಲ ಎಂದು ಸಚಿವರು ಖಡಕ್ ಸೂಚನೆ ನೀಡಿದ್ದಾರೆ.
ಪ್ರಯಾಣಿಕರಿಂದ ಮನಬಂದಂತೆ ದರ ವಸೂಲಿ ಮಾಡುವುದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸರ್ಕಾರ ಈ ಕಠಿಣ ನಿರ್ಧಾರಕ್ಕೆ ಮುಂದಾಗಿದೆ. ಅಲ್ಲದೇ ಆಟೋ ಚಾಲಕರು ಕಡ್ಡಾಯವಾಗಿ ಮೀಟರ್ ಹಾಕಿಯೇ ಸಂಚರಿಸಬೇಕು, ಮೀಟರ್ ಇಲ್ಲದ ಆಟೋಗಳ ಸಂಚಾರಕ್ಕೆ ಅವಕಾಶವಿಲ್ಲ ಎಂದು ಸಚಿವರು ಅವರು ಸ್ಪಷ್ಟಪಡಿಸಿದ್ದಾರೆ.
ವಿಮಾನ ನಿಲ್ದಾಣ ರಸ್ತೆಯಲ್ಲಿ ಸಂಚರಿಸುವ ಕ್ಯಾಬ್‌ಗಳಿಗೂ ಈ ನಿಯಮ ಅನ್ವಯವಾಗಲಿದೆ. ವಿಯೆಟ್ನಾಂ ಮೂಲದ ಗ್ರೀನ್ ಎಸ್‌ಎಂ ಕಂಪನಿಯ ಕ್ಯಾಬ್‌ಗಳಿಗೂ ಮೀಟರ್ ಕಡ್ಡಾಯಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವ ಸಂಬಂಧ ಅಗತ್ಯವಿರುವ ಕರಡು ನಿಯಮಾವಳಿಗಳನ್ನು ಸಿದ್ಧಪಡಿಸುವಂತೆ ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸಚಿವ ಭೈರತಿ ಸುರೇಶ್ ನಿರ್ದೇಶನ ನೀಡಿದ್ದಾರೆ.
ಕುಮಾರ ಕೃಪಾ ಗೆಸ್ಟ್ ಹೌಸ್ ಎಂದು ಹೆಸರು ಬಂದಿದ್ದೇಗೆ? 140 ವರ್ಷಗಳ ಇತಿಹಾಸ ಹೊಂದಿರುವ ಕಟ್ಟಡ ಹಿನ್ನೆಲೆಯೇನು?
ಇನ್ನು ಹೊಸ ವರ್ಷದಿಂದ ರಾಜ್ಯಾದ್ಯಂತ ವಾಹನ ಸವಾರರಿಗೆ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೆ ತರಲು ಸರ್ಕಾರ ಸಿದ್ಧತೆ ನಡೆಸಿದೆ. ಫುಟ್‌ಪಾತ್ ಮೇಲೆ ವಾಹನ ಚಲಾಯಿಸಿದರೆ ಭಾರಿ ದಂಡ ವಿಧಿಸುವುದರ ಜತೆಗೆ ಪದೇಪದೆ ನಿಯಮ ಉಲ್ಲಂಘಿಸಿದರೆ ಬೈಕ್ ಸೀಜ್ ಮಾಡಲು ನಿರ್ಧರಿಸಲಾಗಿದೆ.