ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Minister D Sudhakar: ಸಚಿವ ಡಿ.ಸುಧಾಕರ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ತೀವ್ರ ಅಸ್ವಸ್ಥಗೊಂಡ ಸಚಿವ ಡಿ.ಸುಧಾಕರ್‌ ಅವರನ್ನು ಬೆಂಗಳೂರಿನ ಯಶವಂತಪುರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಘಾ ಘಟಕದಲ್ಲಿ ಸಚಿವ ಡಿ.ಸುಧಾಕರ್‌ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಅವರ ಆರೋಗ್ಯದ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಸಚಿವ ಡಿ.ಸುಧಾಕರ್‌

ಬೆಂಗಳೂರು: ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವ ಡಿ.ಸುಧಾಕರ್ (Minister D Sudhakar) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶ್ವಾಸಕೋಶದ ಸೋಂಕಿನ ಹಿನ್ನೆಲೆಯಲ್ಲಿ ತೀವ್ರ ಅಸ್ವಸ್ಥಗೊಂಡ ಅವರನ್ನು ಯಶವಂತಪುರದ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಘಾ ಘಟಕದಲ್ಲಿ ಸಚಿವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.