ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Footpath clearance drive: ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ರೆ ಸುಮ್ಮನಿರಲ್ಲ: ಸಚಿವ ಕೃಷ್ಣಬೈರೇಗೌಡ ಎಚ್ಚರಿಕೆ

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳ ಅನುಸಾರ ಸುರಕ್ಷಿತ ಪಾದಚಾರಿ ಮಾರ್ಗ (ಫುಟ್‌ಪಾತ್) ಅಭಿಯಾನವನ್ನು ಬೆಂಗಳೂರಿನಲ್ಲಿ ಕೈಗೊಳ್ಳಲಾಗಿದೆ. ಫುಟ್‌ಪಾತ್‌ ಒತ್ತುವರಿ ತೆರವು ಕಾರ್ಯಾಚರಣೆ ನಡೆಸುವ ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಬಂಧಿಸಲಾಗುವುದು ಎಂದು ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ.

ಬೆಂಗಳೂರು: ಶಿವಾಜಿನಗರದಲ್ಲಿ ಫುಟ್‌ಪಾತ್‌ ಒತ್ತುವರಿ ತೆರವು (Footpath clearance drive) ಮಾಡಲು ಹೋಗಿದ್ದ ಅಧಿಕಾರಿಗಳ ಮೇಲಿನ ಹಲ್ಲೆ ಪ್ರಕರಣವನ್ನು ಸಚಿವ ಕೃಷ್ಣಬೈರೇಗೌಡ (Krishna Byre Gowda) ಅವರು ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಅವರು, ನಮ್ಮ ಅಧಿಕಾರಿಗಳು ಕಾನೂನು ಪ್ರಕಾರ ಕೆಲಸ ಮಾಡುವಾಗ ಅವರ ಕೆಲಸಕ್ಕೆ ಅಡ್ಡಿಪಡಿಸುವುದು ಅಥವಾ ಅವರ ಮೇಲೆ ಹಲ್ಲೆ ಮಾಡುವಂತಹ ಪ್ರಕರಣಗಳನ್ನು ಕಂಡು ನಾವಂತೂ ಖಂಡಿತ ಸುಮ್ಮನಿರಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ ಈವರೆಗೂ 10 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಮುಖ ಆರೋಪಿ ಬಸವರಾಜ್ ಪಡುಕೋಟೆ ಎಂಬ ವ್ಯಕ್ತಿ ಮೇಲ್ನೋಟಕ್ಕೆ ಇಂತಹ ದಂಧೆಯಲ್ಲಿ ತೊಡಗಿರುವಂತೆ ಕಂಡುಬಂದಿದ್ದು, ಆತನ ವಿರುದ್ಧ ಗೂಂಡಾ ಕೇಸ್ ದಾಖಲಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಸಚಿವರು ತಿಳಿಸಿದ್ದಾರೆ.



ಫುಟ್ ಪಾತ್ ಅತಿಕ್ರಮ ತೆರವು ಕಾರ್ಯಾಚರಣೆ ನಗರದ ಸಾರ್ವಜನಿಕರ ಹಿತಾಸಕ್ತಿ ಕಾಪಾಡುವ ಅಭಿಯಾನ. ಇದನ್ನು ಯಾವುದೇ ದುಷ್ಟ, ದುರುಳರ ಒತ್ತಡಕ್ಕಾಗಲಿ, ದೌರ್ಜನ್ಯಕ್ಕಾಗಲಿ ಮಣಿದು ನಿಲ್ಲಿಸುವ ಪ್ರಮೇಯವೇ ಇಲ್ಲ. ಯಾರೂ ಕೂಡ ಈ ನೆಲದ ಕಾನೂನಿನಗಿಂತ ದೊಡ್ಡವರಲ್ಲ. ನಮ್ಮ ಸರ್ಕಾರ ಕರ್ತವ್ಯನಿರತ ಅಧಿಕಾರಿಗಳ ರಕ್ಷಣೆಗೆ ಬೆಂಗಾವಲಾಗಿ ನಿಲ್ಲುತ್ತದೆ. ಪ್ರತಿಯೊಬ್ಬ ನಾಗರಿಕರ ಸುರಕ್ಷತೆ ಹಾಗೂ ಹಕ್ಕುಗಳ ರಕ್ಷಣೆಗೆ ಕಟಿಬದ್ಧವಾಗಿದೆ ಎಂದು ಹೇಳಿದ್ದಾರೆ.

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ

ಮಾನ್ಯ ಸರ್ವೋಚ್ಚ ನ್ಯಾಯಾಲಯದ ನಿರ್ದೇಶನಗಳ ಅನುಸಾರ ಸುರಕ್ಷಿತ ಪಾದಚಾರಿ ಮಾರ್ಗ (ಫುಟ್‌ಪಾತ್) ಅಭಿಯಾನವನ್ನು ಕೈಗೊಳ್ಳಲಾಗಿದೆ. ಸರ್ಕಾರಿ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಿದ ಪ್ರತಿಯೊಬ್ಬರನ್ನೂ ಬಂಧಿಸಲಾಗುವುದು.

ನಾನು ಜಿಬಿಎ (GBA) ಮತ್ತು ಪೊಲೀಸರೊಂದಿಗೆ ಸತತ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಗಮನಿಸುತ್ತಿದ್ದೇನೆ. ಅಲ್ಲದೆ, ತಪ್ಪಿತಸ್ಥರ ವಿರುದ್ಧ ಮಾದರಿಯಾಗುವಂತಹ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದ್ದಾರೆ.