ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Priyank Kharge-RSS: ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್‌ಗೆ ಪ್ರಿಯಾಂಕ್ ಖರ್ಗೆ ಪತ್ರ; ಸಂಘದ ಕಾನೂನುಬದ್ಧ ಸ್ಥಾನಮಾನ, ಆದಾಯ ಕುರಿತು ಸ್ಪಷ್ಟನೆಗೆ ಆಗ್ರಹ

ರಾಷ್ಟ್ರೀಯತೆ, ಶಿಸ್ತು, ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಆರ್‌ಎಸ್‌ಎಸ್‌, ಪಾರದರ್ಶಕತೆ, ಕಾನೂನು ಪಾಲನೆ, ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು. ನಿಯಮಗಳನ್ನು ಪಾಲಿಸಬೇಕೆನ್ನುವ ಆರ್‌ಎಸ್‌ಎಸ್‌ ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಇಲ್ಲ. ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಎಂದು ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಒತ್ತಾಯಿಸಿದ್ದಾರೆ.

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ 100ನೇ ವರ್ಷದ ಸಂಭ್ರಮದಲ್ಲಿರುವ ಸಂದರ್ಭದಲ್ಲಿ ರಾಜ್ಯದ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು, ಆರ್‌ಎಸ್‌ಎಸ್‌ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಅವರಿಗೆ ಪತ್ರ ಬರೆದು ಹಲವು ಪ್ರಶ್ನೆಗಳಿಗೆ ಉತ್ತರಿಸುವಂತೆ ಮನವಿ ಮಾಡಿದ್ದಾರೆ. ಸಂಘದ ಕಾನೂನುಬದ್ಧ ಸ್ಥಾನಮಾನ, ಹಣಕಾಸು ವ್ಯವಹಾರಗಳು, ತೆರಿಗೆ ಪಾವತಿ ಹಾಗೂ ಸಾರ್ವಜನಿಕ ಚಟುವಟಿಕೆಗಳ ಬಗ್ಗೆ ಸ್ಪಷ್ಟನೆ ನೀಡುವಂತೆ ಕೋರಿದ್ದಾರೆ.

ಆರ್‌ಎಸ್‌ಎಸ್‌ 100 ವರ್ಷ ಪೂರೈಸಿದ್ದಕ್ಕಾಗಿ ಅಭಿನಂದನೆ ಸಲ್ಲಿಸುತ್ತಲೇ, 8 ಪ್ರಶ್ನೆಗಳಿಗೆ ಉತ್ತರಿಸುವಂತೆ ಮೋಹನ್ ಭಾಗವತ್ ಅವರಿಗೆ ಖರ್ಗೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?

100 ವರ್ಷಗಳನ್ನು ಪೂರೈಸಿದ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನನ್ನ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಭಾರತ ಮತ್ತು ವಿದೇಶಗಳಲ್ಲಿ 60,000ಕ್ಕೂ ಹೆಚ್ಚು ಶಾಖೆಗಳು ಮತ್ತು ಕೋಟಿ ಸ್ವಯಂಸೇವಕರನ್ನು ಹೊಂದಿದೆ ಎಂದು ಹೇಳಿಕೊಳ್ಳುವ ಈ ಸಂಸ್ಥೆಯು ನಿಸ್ಸಂದೇಹವಾಗಿ ಸಾರ್ವಜನಿಕ ಜೀವನ ಮತ್ತು ಸಮಾಜದಲ್ಲಿ ಗಮನಾರ್ಹ ಉಪಸ್ಥಿತಿ ಹೊಂದಿದೆ. ಈ ಪ್ರಮಾಣ, ಪ್ರಭಾವ ಮತ್ತು ವ್ಯಾಪ್ತಿಯ ಕಾರಣದಿಂದಾಗಿ ಆರ್‌ಎಸ್‌ಎಸ್ ಅನ್ನು ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಸಾಂವಿಧಾನಿಕ ಅನುಸರಣೆಯ ಅತ್ಯುನ್ನತ ಮಾನದಂಡಗಳಿಗೆ ಬದ್ಧಗೊಳಿಸಬೇಕು ಅಂತ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ರಾಷ್ಟ್ರೀಯತೆ, ಶಿಸ್ತು, ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಆರ್‌ಎಸ್‌ಎಸ್‌, ಪಾರದರ್ಶಕತೆ, ಕಾನೂನು ಪಾಲನೆ, ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು. ನಿಯಮಗಳನ್ನು ಪಾಲಿಸಬೇಕೆನ್ನುವ ಆರ್‌ಎಸ್‌ಎಸ್‌ ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಇಲ್ಲ. ಕಾರ್ಮಿಕರು, ಸಣ್ಣ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಎನ್‌ಜಿಒಗಳು, ಟ್ರಸ್ಟ್‌ಗಳು, ಕಂಪನಿಗಳು ಮತ್ತು ನಾಗರಿಕರು ನೋಂದಣಿ, ಬಹಿರಂಗಪಡಿಸುವಿಕೆ, ಲೆಕ್ಕಪರಿಶೋಧನೆ ಮತ್ತು ತೆರಿಗೆ ಪಾವತಿಗೆ ಬದ್ಧರಾಗಿದ್ದಾರೆ. ಆದ್ದರಿಂದ ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಅಂತ ಒತ್ತಾಯಿಸಿದ್ದಾರೆ.



ಆರ್‌ಎಸ್‌ಎಸ್‌ ನೋಂದಣಿ ಮಾಡಿಕೊಳ್ಳಬೇಕು

ಆರ್‌ಎಸ್‌ಎಸ್ ತನ್ನ ಶತಮಾನೋತ್ಸವದ ಈ ಸಂದರ್ಭವನ್ನು ಕೇವಲ ಆಚರಣೆಗಾಗಿ ಮಾತ್ರವಲ್ಲ, ಸಾಂವಿಧಾನಿಕ ಆತ್ಮಾವಲೋಕನಕ್ಕಾಗಿಯೂ ಬಳಸಿಕೊಳ್ಳಬೇಕು. ಭಾರತದ ಈ ನೂರನೇ ವರ್ಷದಲ್ಲಿ ದೇಶಕ್ಕೆ ಆರ್‌ಎಸ್‌ಎಸ್ ನೀಡಬಹುದಾದ ಅತ್ಯುತ್ತಮ ಗೌರವವೆಂದರೆ, ತನ್ನನ್ನು ತಾನು ನೋಂದಾಯಿಸಿಕೊಳ್ಳುವುದು, ತನ್ನ ಚಟುವಟಿಕೆಗಳು, ಆರ್ಥಿಕ ವ್ಯವಹಾರಗಳನ್ನು ಬಹಿರಂಗಪಡಿಸುವುದು. ಜೊತೆಗೆ ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಪಾವತಿಸುವುದು ಅಂತ ಪ್ರಿಯಾಂಕ್ ಹೇಳಿದ್ದಾರೆ.

8 ಅಂಶಗಳ ಬಗ್ಗೆ ಸ್ಪಷ್ಟನೆ ನೀಡಲು ಆಗ್ರಹ

  • ಆರ್‌ಎಸ್‌ಎಸ್‌ನ ಕಾನೂನಾತ್ಮಕ ಸ್ಥಾನಮಾನ ಮತ್ತು ಸಂಘಟಿತ ರಚನೆ ವಿವರ
  • ಪದಾಧಿಕಾರಿಗಳು ಮತ್ತು ಅಧಿಕೃತ ಪ್ರತಿನಿಧಿಗಳ ವಿವರಗಳು
  • ದೇಣಿಗೆ, ಕೊಡುಗೆ ಮತ್ತು ಆದಾಯದ ಮೂಲಗಳು
  • ವೆಚ್ಚ ಮತ್ತು ಆಸ್ತಿಪಾಸ್ತಿಗಳ ವಿವರಗಳು
  • ಕಾನೂನಿನ ಪ್ರಕಾರ ಅನ್ವಯವಾಗುವ ತೆರಿಗೆಗಳನ್ನು ಸಕ್ರಮವಾಗಿ ಪಾವತಿಸಲಾಗುತ್ತಿದೆಯೇ ಎಂಬ ವಿಷಯ
  • ಔಪಚಾರಿಕ ನೋಂದಣಿಯಿಲ್ಲದೆ ತನ್ನ ಚಟುವಟಿಕೆಗಳನ್ನು ನಡೆಸಲು ಯಾವ ಕಾನೂನಾತ್ಮಕ ಆಧಾರವನ್ನು ಅವಲಂಬಿಸಲಾಗಿದೆ ಎಂಬ ವಿಷಯ.
  • ಯಾವುದೇ ಸಾರ್ವಜನಿಕ ಜವಾಬ್ದಾರಿಯಿಲ್ಲದೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವ ಹಕ್ಕನ್ನು ಯಾವ ಸಾಂವಿಧಾನಿಕ ಮತ್ತು ಶಾಸನಾತ್ಮಕ ಚೌಕಟ್ಟಿನ ಅಡಿಯಲ್ಲಿ ಪಡೆದುಕೊಳ್ಳಲಾಗಿದೆ?
  • ಸಾರ್ವಜನಿಕ ಕಾರ್ಯಕ್ರಮಗಳು, ಮಾರ್ಗ ಮೆರವಣಿಗೆಗಳು, ಸಾಮೂಹಿಕ ಸಭೆಗಳು ಮತ್ತು ಇತರ ಸಂಘಟಿತ ಚಟುವಟಿಕೆಗಳಿಗೆ ಅನುಮತಿಗಳು, ಅಧಿಕಾರಗಳು ಮತ್ತು ಅನುಸರಣಾ ಕಾರ್ಯವಿಧಾನಗಳ ವಿವರ

ಬಿಜೆಪಿ, ಆರ್‌ಎಸ್‌ಎಸ್‌ ಕುರಿತು ಪ್ರಚೋದನಕಾರಿ ಭಾಷಣ; ಖರ್ಗೆ ಬಂಧನಕ್ಕೆ ಆಗ್ರಹಿಸಿ ಡಿಜಿ-ಐಜಿಪಿಗೆ ದೂರು

ಚರ್ಚೆಗೆ ಸಿದ್ಧ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಭಾರತೀಯ ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕ, ಜವಾಬ್ದಾರಿಯುತ ಸಂಘಟನೆಯಾಗಿ ಕಾರ್ಯನಿರ್ವಹಿಸಬೇಕು. ಈ ಸಂಬಂಧ ನಾವು ನಿಮ್ಮ‌ ಜತೆ ಅಧಿಕೃತ ಚರ್ಚೆಗೆ ಸಿದ್ದರಿದ್ದೇವೆ. ನಿಮ್ಮ ಅಧಿಕೃತ ಪ್ರತಿನಿಧಿಗಳನ್ನು ಕಳುಹಿಸುವ ಬಗ್ಗೆ ಪ್ರತಿಕ್ರಿಯೆ ನಿರೀಕ್ಷಿಸುತ್ತೇವೆ ಅಂತ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಬರೆದಿದ್ದಾರೆ.