ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಸಚಿವ ಹಾಗೂ ಚಿತ್ರದುರ್ಗ ಜಿಲ್ಲಾ ಉಸ್ತುವಾರಿ (D. Sudhakar ) ಸಚಿವ ಡಿ. ಸುಧಾಕರ್ (65) ಇಂದು ಮುಂಜಾನೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ( (KIMS Hospital) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಚಿವ ಡಿ. ಸುಧಾಕರ್ ಅವರು ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಮೊಣಕಾಲು ಸಂಬಂಧ ಆಪರೇಷನ್ಗಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸಚಿವ ಡಿ ಸುಧಾಕರ್ ಅವರು ದಾಖಲಾಗಿದ್ದರು. ಈ ಶಸ್ತ್ರಚಿಕಿತ್ಸೆಯ ಬಳಿಕ ಅವರಿಗೆ ಶ್ವಾಸಕೋಶ ಸೋಂಕು ಕಾಣಿಸಿಕೊಂಡಿತ್ತು
ಬಳಿಕ ಅವರನ್ನು ಮಣಿಪಾಲ್ ಆಸ್ಪತ್ರೆಯಿಂದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೆಳಗಿನ ಜಾವ 3:15ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಡಿ. ಸುಧಾಕರ್ ಅವರು ಹಿರಿಯೂರು ಕ್ಷೇತ್ರದ ಶಾಸಕರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದರು.
ಚಿತ್ರದುರ್ಗ ಜಿಲ್ಲಾ ಉಸ್ತುವಾರಿಯಾಗಿದ್ದ ಸುಧಾಕರ್, ಚಳ್ಳಕೆರೆ ಮೂಲದವರಾಗಿದ್ದು, 1961 ಮಾರ್ಚ್28ರಂದು ಎನ್. ದಶರಥಯ್ಯ ಮತ್ತು ಕಾಂಚನಮಾಲಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಪಟ್ಟಣದಲ್ಲಿ ನಡೆದರೆ, ಪದವಿ ಶಿಕ್ಷಣವನ್ನು ಶಿವಮೊಗ್ಗದ ನ್ಯಾಷನಲ್ ಕಾಲೇಜಿನಲ್ಲಿ ಬಿ.ಕಾಂ ಪದವಿಯನ್ನು ಪಡೆದುಕೊಂಡಿದ್ದಾರೆ. ಇವರ ತಂದೆ ಹಾಗೂ ಚಿಕ್ಕಪ್ಪ ರಾಜಕೀಯದಲ್ಲಿದ್ದರಿಂದ ಇವರು ಸಹ ರಾಜಕೀಯದತ್ತ ಆಕರ್ಷಿತರಾದರು. 2004 ರಲ್ಲಿ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.
ಹಿರಿಯ ಪತ್ರಕರ್ತ ಪ್ರಹ್ಲಾದ್ ಕುಳಲಿ ನಿಧನ; ಗಣ್ಯರಿಂದ ಸಂತಾಪ
ನಂತರ ಚಳ್ಳಕೆರೆ ST ಮೀಸಲು ಕ್ಷೇತ್ರ ಆಗಿದ್ದರಿಂದ 2008 ರಲ್ಲಿ ಹಿರಿಯೂರು ಕ್ಷೇತ್ರಕ್ಕೆ ಶಿಫ್ಟ್ ಆಗಿ ಪಕ್ಷೇತರ ಅಭ್ಯರ್ಥಿಯಾಗಿ ಗೆದ್ದರು. 2008 ರಲ್ಲಿ ಪಕ್ಷೇತರ ಶಾಸಕನಾಗಿದ್ದುಕೊಂಡೇ ಬಿಜೆಪಿ ಜೊತೆ ಕೈ ಜೋಡಿಸಿದ್ದರು. ಬಳಿಕ ಮತ್ತೆ ಕಾಂಗ್ರೆಸ್ ಸೇರಿದ್ದರು. ಇವರು ಪತ್ನಿ ಹರ್ಷಿಣಿ, ಮಗ ಸುಹಾಸ್ ಹಾಗೂ ಪುತ್ರಿ ಸ್ಫೂರ್ತಿ ಅವರನ್ನು ಅಗಲಿದ್ದಾರೆ.