ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಪ್ರಾಪ್ತ ವಯಸ್ಸಿನ ಅಪರಾಧ ಕೃತ್ಯಕ್ಕೆ ವಯಸ್ಕನಾದಾಗ ಬಂಧನ ಸಲ್ಲ; ಹೈಕೋರ್ಟ್‌

ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಎಸಗಿರುವ ಅಪರಾಧಗಳನ್ನು ಆಧಾರವಾಗಿಟ್ಟುಕೊಂಡು ವಯಸ್ಕನಾದ ನಂತರ ಗೂಂಡಾ ಕಾಯಿದೆಯಡಿ ಮುನ್ನೆಚ್ಚರಿಕಾ ಕ್ರಮವಾಗಿ ಬಂಧನ ಆದೇಶ ಹೊರಡಿಸಲು ಅಧಿಕಾರವಿಲ್ಲ ಎಂದು ಹೈಕೋರ್ಟ್‌ ತನ್ನ ಆದೇಶದಲ್ಲಿ ತಿಳಿಸಿದೆ. ಆದೇಶಕ್ಕೆ ಅನುಗುಣವಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಅಭಿಚೆರ್ಲಿ ಅಲಿಯಾಸ್‌ ಅಭಿ ಎಂಬುವವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಸರಕಾರಕ್ಕೆ ಸೂಚನೆ ನೀಡಿದೆ.

ವಯಸ್ಕನಾದಾಗ ಬಂಧನ ಸಲ್ಲ; ಹೈಕೋರ್ಟ್‌

-

Vishakha Bhat Heggar
Vishakha Bhat Heggar May 11, 2026 10:11 AM

ಬೆಂಗಳೂರು: ಅಪ್ರಾಪ್ತ ವಯಸ್ಸಿನಲ್ಲಿದ್ದಾಗ ಎಸಗಿರುವ ಅಪರಾಧಗಳನ್ನು ಆಧಾರವಾಗಿಟ್ಟುಕೊಂಡು ವಯಸ್ಕನಾದ ನಂತರ (Karnataka High Court) ಗೂಂಡಾ ಕಾಯಿದೆಯಡಿ ಮುನ್ನೆಚ್ಚರಿಕಾ ಕ್ರಮವಾಗಿ ಬಂಧನ ಆದೇಶ ಹೊರಡಿಸಲು ಅಧಿಕಾರವಿಲ್ಲ ಎಂದು ಹೈಕೋರ್ಟ್‌ ತನ್ನ ಆದೇಶದಲ್ಲಿ ತಿಳಿಸಿದೆ. ಆದೇಶಕ್ಕೆ ಅನುಗುಣವಾಗಿ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರುವ ಅಭಿಚೆರ್ಲಿ ಅಲಿಯಾಸ್‌ ಅಭಿ ಎಂಬುವವರನ್ನು ತಕ್ಷಣ ಬಿಡುಗಡೆ ಮಾಡಬೇಕೆಂದು ಸರಕಾರಕ್ಕೆ ಸೂಚನೆ ನೀಡಿದೆ. ತಮ್ಮ ಪುತ್ರನನ್ನು ಬಂಧಿಸಿರುವ ಆದೇಶ ಪ್ರಶ್ನಿಸಿ ಕೋಲಾರ ಜಿಲ್ಲೆಯ ಕೆಜಿಎಫ್‌ನ ಮೇರಿ ಉಷಾ ಸಲ್ಲಿಸಿದ್ದ ಹೇಬಿಯಸ್‌ ಕಾರ್ಪಸ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಸಿವರಾಮನ್‌ ಮತ್ತು ತಾರಾ ವಿತಸ್ತ ಗಂಜು ಅವರಿದ್ದ ವಿಭಾಗೀಯ ಪೀಠ ಈ ಆದೇಶ ನೀಡಿದೆ.

ಬಂಧಿತ ಅ.8 ರಂದು ಜನಿಸಿದ್ದು, ಸದ್ಯ 19 ವರ್ಷ ವಯಸ್ಸಿನವರಾಗಿದ್ದಾರೆ. ಅವರ ವಿರುದ್ಧ 2025ರ ಡಿ.11ರಂದು ಗೂಂಡಾ ಕಾಯಿದೆಯಡಿ ಬಂಧನ ಆದೇಶ ಹೊರಡಿಸಲಾಗಿದೆ. ಅವರ ವಿರುದ್ಧದ ಆರೋಪಗಳು 2 023, 2024, 2025 ರಲ್ಲಿ ನಡೆದ ಘಟನೆಗಳಾಗಿವೆ. ಹಾಗಾಗಿ ಅವರ ಬಂಧನಕ್ಕೆ ಹೊರಡಿಸಿರುವ ಆದೇಶದಲ್ಲಿ 18 ವರ್ಷಕ್ಕೂ ಕಡಿಮೆ ವಯಸ್ಸಿನಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಉಲ್ಲೇಖಿಸಲಾಗಿದೆ’’ ಎಂದು ನ್ಯಾಯಾಲಯ ಹೇಳಿದೆ.

ಬಾಲ ನ್ಯಾಯ ಕಾಯಿದೆಯನ್ನು ಸಂವಿಧಾನದ ಪರಿಚ್ಚೇದ 15(3) ಅಡಿಯಲ್ಲಿ ಜಾರಿ ಮಾಡಲಾಗಿದೆ. ಈ ಕಾಯಿದೆಯು ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂಬಂಧಿಸಿದಂತೆ ವಿಶ್ವಸಂಸ್ಥೆ ಮತ್ತು ಹೇಗ್‌ ಸಮ್ಮೇಳನದಲ್ಲಿಆಗಿರುವ ಒಡಂಬಡಿಕೆಗಳ ಅನುಸಾರದಲ್ಲಿ ಜಾರಿ ಮಾಡಲಾಗಿದೆ.

BJP MLA DN Jeevaraj: ಅಂಚೆ ಮತ ತಿರುಚಿದ ಆರೋಪ; ಶೃಂಗೇರಿ ಬಿಜೆಪಿ ಶಾಸಕ ಡಿ.ಎನ್‌. ಜೀವರಾಜ್ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಹಾಗಾಗಿ ಕಾಯಿದೆಯ ಸೆಕ್ಷನ್‌ 24 ರ ಉದ್ದೇಶವು, ಅಪ್ರಾಪ್ತನಾಗಿದ್ದ ಸಂದರ್ಭದಲ್ಲಿ ಮಾಡಿದ ಅಪರಾಧ ಕೃತ್ಯಗಳು, ಪ್ರಾಪ್ತರಾದ ಸಂದರ್ಭದಲ್ಲಿ ಅನ್ವಯವಾಗುವುದಿಲ್ಲ. ಆ ಪ್ರಕರಣಗಳ ಆಧಾರದಲ್ಲಿ ಗೂಂಡಾ ಕಾಯಿದೆಯಡಿ ಬಂಧನ ಆದೇಶ ಹೊರಡಿಸಧಿಲಾಗದು,’’ ಎಂದು ನ್ಯಾಯಾಲಯ ಹೇಳಿದೆ. ಜತೆಗೆ ಬಂಧನದ ನಿರ್ಧಾರ ತೆಗೆದುಕೊಳ್ಳುವಾಗ ಅಧಿಕಾರಿಗಳು ಹಳೆಯ ಪ್ರಕರಣಗಳನ್ನು ಗಣನೆಗೆ ತೆಗೆದುಕೊಂಡಿರುವುದು ಕಾಯಿದೆಯ ಉದ್ದೇಶಕ್ಕೆ ವಿರುದ್ಧವಾಗಿದೆ. ಹೀಗಾಗಿ ಬಂಧನ ಆದೇಶ ರದ್ದುಪಡಿಸಿ ತಕ್ಷಣ ಬಿಡುಗಡೆ ಮಾಡಬೇಕು ಎಂದು ನ್ಯಾಯಪೀಠ ತಿಳಿಸಿದೆ.