ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬಿಕ್ಲು ಶಿವ ಕೊಲೆ ಕೇಸ್‌; ಶಾಸಕ ಬೈರತಿ ಬಸವರಾಜ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

MLA Byrathi Basavaraj: ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್​​ ವಜಾ‌ಗೊಳಿಸಿದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಬಂಧನ ಭೀತಿ ಎದುರಾಗಿದೆ. ಅವರ ಬಂಧನಕ್ಕಾಗಿ ಸಿಐಡಿ ಪೊಲೀಸರು ಈಗಾಗಲೇ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಶಾಸಕ ಬೈರತಿ ಬಸವರಾಜ್

ಬೆಂಗಳೂರು, ಫೆ.10: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ (Biklu Shiva murder case) ಸಂಬಂಧಿಸಿ ಕೆ.ಆರ್.ಪುರಂ ಶಾಸಕ ಬೈರತಿ ಬಸವರಾಜ್‌ಗೆ (MLA Bayarati Basavaraj) ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್​​ ವಜಾ‌ಗೊಳಿಸಿದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ತಲೆಮರೆಸಿಕೊಂಡಿರುವ ಬಿಜೆಪಿ ಶಾಸಕನಿಗೆ ಬಂಧನ ಭೀತಿ ಎದುರಾಗಿದೆ.

ಶಾಸಕ ವಿದೇಶಕ್ಕೆ ಪರಾರಿಯಾಗುವ ಶಂಕೆ ಹಿನ್ನೆಲೆಯಲ್ಲಿ ಅವರ ವಿರುದ್ಧ ‘ಲುಕ್‌ಔಟ್‌’ ನೋಟಿಸ್‌ ಜಾರಿಯಲ್ಲಿದೆ. ರಾಜ್ಯದ ಸಿಐಡಿ ಪೊಲೀಸರು ಹೊರರಾಜ್ಯಗಳ ಪೊಲೀಸರ ಜತೆಗೂ ಸಂಪರ್ಕ ಸಾಧಿಸಿದ್ದು, ಅವರ ಬಂಧನಕ್ಕಾಗಿ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲಿ ಶಾಸಕರನ್ನು ಬಂಧಿಸುವ ಸಾಧ್ಯತೆ ಇದೆ.

2025ರ ಜುಲೈ 15ರಂದು ಬೆಂಗಳೂರಿನ ಹಲಸೂರಿನಲ್ಲಿ ನಡೆದ ರೌಡಿಶೀಟರ್‌ ಬಿಕ್ಲುಶಿವನ ಕೊಲೆ ಪ್ರಕರಣದಲ್ಲಿ ಆರೋಪಿ ರೌಡಿ ಜಗದೀಶ್‌ ಅಲಿಯಾಸ್‌ ಜಗ್ಗ, ಶಾಸಕ ಬೈರತಿ ಬಸವರಾಜ್‌ ಸೇರಿ ಹಲವರ ವಿರುದ್ಧ ಕೇಸ್‌ ದಾಖಲಾಗಿತ್ತು.

24 ಕೊಲೆ ಪ್ರಕರಣಗಳಲ್ಲಿ ಬೇಕಾಗಿದ್ದ ಬಿಹಾರ ಮೂಲದ ಅಪ್ಪ ಮಗ ಬೆಂಗಳೂರಿನಲ್ಲಿ ಬಂಧನ

ಈ ಪ್ರಕರಣದಲ್ಲಿ ಬೈರತಿ ಬಸವರಾಜ್ ಎ5 ಆರೋಪಿಯಾಗಿದ್ದಾರೆ. ಅಲ್ಲದೇ ಜಾಮೀನು ಕೋರಿ ಹೈಕೋರ್ಟ್​ ಮೆಟ್ಟಿಲೇರಿದ್ದರು. ಈ ಹಿಂದೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನಿಂದ ಜಾಮೀನು ಅರ್ಜಿ ನಿರಾಕರಣೆಗೊಂಡ ಬಳಿಕ,​ ಹೈಕೋರ್ಟ್‌ನಿಂದ ಬೈರತಿ ಬಸವರಾಜ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರಾಗಿತ್ತು. ಆದರೆ, ಇದೀಗ ಹೈಕೋರ್ಟ್​ ನಿರೀಕ್ಷಣಾ ಜಾಮೀನು ವಜಾಗೊಳಿಸಿದೆ. ಹೀಗಾಗಿ ಬಿಜೆಪಿ ಶಾಸಕನಿಗೆ ಬಂಧನ ಭೀತಿ ಎದುರಾಗಿದೆ.

ಸಚಿವ ಭೈರತಿ ಸುರೇಶ್ ಕಚೇರಿಯಲ್ಲೇ 300 ಗ್ರಾಂ ಚಿನ್ನಾಭರಣ, ನಗದು ಕಳ್ಳತನ

ಬೆಂಗಳೂರು, ಫೆ.10: ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ (Byrathi Suresh) ಅವರ ವಿಧಾನಸೌಧದ ಕಚೇರಿಯಲ್ಲಿ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ರೂಪಾಯಿ ನಗದು ಇದ್ದ ಕೈಚೀಲ ಕಳವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ಡಿ ಗ್ರೂಪ್ ನೌಕರನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ನವೀನ್ ಎಂಬವರು ಕೆಲಸದ ನಿಮಿತ್ತ ಸಚಿವ ಭೈರತಿ ಸುರೇಶ್ ಅವರ ಕಚೇರಿಗೆ ಬಂದಿದ್ದರು. ಆ ವೇಳೆ 300 ಗ್ರಾಂ ಚಿನ್ನಾಭರಣ ಹಾಗೂ 1.50 ಲಕ್ಷ ನಗದು ಇದ್ದ ಕೈಚೀಲವನ್ನು ತಂದಿದ್ದು, ತೆರಳುವಾಗ ಅದನ್ನು ಕಚೇರಿಯಲ್ಲೇ ಮರೆತು ಹೊರಟಿದ್ದರು. ಮಾರನೇ ದಿನ ಕಚೇರಿಗೆ ಬಂದು ಪರಿಶೀಲಿಸಿದಾಗ ಕೈಚೀಲ ನಾಪತ್ತೆಯಾಗಿರುವುದು ಗಮನಕ್ಕೆ ಬಂದಿದೆ.

Chinnu Pappu: 2 ಲಕ್ಷ ಫಾಲೋವರ್ಸ್‌ ಹೊಂದಿದ್ದ ಇನ್‌ಫ್ಲುಯೆನ್ಸರ್‌ ರೇಶ್ಮಾ ಆತ್ಮಹತ್ಯೆ

ಗಾಬರಿಗೊಂಡ ನವೀನ್ ತಕ್ಷಣ ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದರು. ಕಚೇರಿಯ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದ ವೇಳೆ, ಡಿಪಿಎಆರ್ ಇಲಾಖೆಯ ಡಿ ಗ್ರೂಪ್ ನೌಕರನೊಬ್ಬ ಕೈಚೀಲವನ್ನು ಹೊತ್ತುಕೊಂಡು ಹೋಗಿರುವುದು ಪತ್ತೆಯಾಗಿದೆ. ತಕ್ಷಣ ಕಾರ್ಯಾಚರಣೆ ನಡೆಸಿದ ವಿಧಾನಸೌಧ ಪೊಲೀಸರು ಆರೋಪಿ ಡಿ ಗ್ರೂಪ್ ನೌಕರನನ್ನು ಬಂಧಿಸಿದ್ದಾರೆ.