ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

K.C.Veerendra Puppy: ಅಕ್ರಮ ಬೆಟ್ಟಿಂಗ್ ಪ್ರಕರಣ: ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ

illegal betting case: ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರನ್ನು ಇಡಿ ಅಧಿಕಾರಿಗಳು ಇತ್ತೀಚೆಗೆ ಸಿಕ್ಕಿಂನಲ್ಲಿ ಬಂಧಿಸಿದ್ದರು. ರಿಮಾಂಡ್‌ ಅರ್ಜಿಯಲ್ಲಿ ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ಶಾಸಕ ವೀರೇಂದ್ರ ಪಪ್ಪಿಯನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಅಕ್ರಮ ಬೆಟ್ಟಿಂಗ್: ಶಾಸಕ ವೀರೇಂದ್ರ ಪಪ್ಪಿಗೆ 14 ದಿನ ನ್ಯಾಯಾಂಗ ಬಂಧನ

-

Prabhakara R Prabhakara R Sep 8, 2025 5:41 PM

ಬೆಂಗಳೂರು: ಅಕ್ರಮ ಆನ್‌ಲೈನ್‌ ಬೆಟ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿ ಚಿತ್ರದುರ್ಗದ ಶಾಸಕ ವೀರೇಂದ್ರ ಪಪ್ಪಿ (K.C.Veerendra Puppy) ಅವರಿಗೆ ಸೆಪ್ಟೆಂಬರ್ 22 ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ನ್ಯಾಯಾಲಯಕ್ಕೆ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಸೋಮವಾರ ಹಾಜರುಪಡಿಸಿದ್ದರು. ಈ ವೇಳೆ ರಿಮಾಂಡ್‌ ಅರ್ಜಿಯಲ್ಲಿ ಇಡಿ ಅಧಿಕಾರಿಗಳು ಕಸ್ಟಡಿಗೆ ಕೇಳದ ಹಿನ್ನೆಲೆಯಲ್ಲಿ ಶಾಸಕರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶಿಸಿದೆ.

ಅಕ್ರಮ ಬೆಟ್ಟಿಂಗ್ ಪ್ರಕರಣಕ್ಕೆ (illegal betting case) ಸಂಬಂಧಿಸಿ ಚಿತ್ರದುರ್ಗ ಕಾಂಗ್ರೆಸ್‌ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ (K.C. Veerendra Puppy) ಅವರನ್ನು ಇಡಿ ಅಧಿಕಾರಿಗಳು ಇತ್ತೀಚೆಗೆ ಸಿಕ್ಕಿಂನಲ್ಲಿ ಬಂಧಿಸಿದ್ದರು. ಶಾಸಕರಿಗೆ ಸಂಬಂಧಿಸಿದ 31 ಸ್ಥಳಗಳಲ್ಲಿ ದಾಳಿ ನಡೆಸಿ, 12 ಕೋಟಿ ರೂ. ನಗದು (ಒಂದು ಕೋಟಿ ರೂ. ವಿದೇಶಿ ಕರೆನ್ಸಿ ಸೇರಿ), 6 ಕೋಟಿ ರೂ. ಮೌಲ್ಯದ ಚಿನ್ನಾಭರಣ, 10 ಕೆಜಿ ಬೆಳ್ಳಿ ಮತ್ತು ನಾಲ್ಕು ವಾಹನಗಳನ್ನು ವಶಪಡಿಸಿಕೊಂಡಿದ್ದರು. ಇದಾದ ಬಳಿಕ ಕೆ.ಸಿ. ವೀರೇಂದ್ರ ಪಪ್ಪಿ ಮನೆ ಮೇಲೆ ಮತ್ತೊಮ್ಮೆ ಇಡಿ ಅಧಿಕಾರಿಗಳು ದಾಳಿಯನ್ನು ನಡೆಸಿ, 6 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದಿದ್ದರು.

ಇನ್ನು ಆನ್​ಲೈನ್ ಮತ್ತು ಆಫ್‌ಲೈನ್ ಅಕ್ರಮ ಬೆಟ್ಟಿಂಗ್ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಶಾಸಕ ಕೆ ಸಿ ವೀರೇಂದ್ರ ಅವರನ್ನು ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್) ಕಾಯಿದೆ ಅಡಿ ಬಂಧಿಸಿರುವ ಕ್ರಮವನ್ನು ಕಾನೂನುಬಾಹಿರ ಎಂದು ಘೋಷಿಸುವಂತೆ ಕೋರಿ ವೀರೇಂದ್ರ ಪತ್ನಿ ಆರ್‌ ಡಿ ಚೈತ್ರಾ ಸಲ್ಲಿಸಿರುವ ಅರ್ಜಿ ಸಂಬಂಧ ಜಾರಿ ನಿರ್ದೇಶನಾಲಯಕ್ಕೆ (ಇ ಡಿ) ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ನೋಟಿಸ್ ಜಾರಿಗೊಳಿಸಿತ್ತು.

ಈ ಸುದ್ದಿಯನ್ನೂ ಓದಿ | Veerendra Puppy: ವೀರೇಂದ್ರ ಪಪ್ಪಿಗೆ ಮತ್ತೆ ಇಡಿ ಶಾಕ್; 2 ಚೀಲ ಚಿನ್ನಾಭರಣ ವಶಕ್ಕೆ ಪಡೆದರಾ ಅಧಿಕಾರಿಗಳು?

ಆನ್‌ಲೈನ್‌ ಹಾಗೂ ಆಫ್‌ಲೈನ್‌ ಅಕ್ರಮ ಗೇಮಿಂಗ್‌ ಪ್ರಕರಣ ಸಂಬಂಧ 2022ರ ಜುಲೈ 6ರಂದು ಹಾರೋಹಳ್ಳಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು. ಅದರಲ್ಲಿ ಯಾರೊಬ್ಬರ ಹೆಸರೂ ಉಲ್ಲೇಖವಾಗಿರಲಿಲ್ಲ. ಈ ಎಫ್‌ಐಆರ್‌ ಆಧರಿಸಿ ಇಡಿ 2025ರ ಆಗಸ್ಟ್ 21ರಂದು ಇಸಿಐಆರ್‌ ದಾಖಲಿಸಿತ್ತು. ಆಗಸ್ಟ್ 23ರಂದು ಪ್ರಕರಣದಲ್ಲಿ ಮೊದಲನೇ ಆರೋಪಿಯಾಗಿ ಚಿತ್ರದುರ್ಗದ ಶಾಸಕರಾದ ನನ್ನ ಪತಿ ಕೆ ಸಿ ವೀರೇಂದ್ರ ಅವರನ್ನು ಬಂಧಿಸಲಾಗಿದೆ. ದುರುದ್ದೇಶದಿಂದ ಅವರನ್ನು ಗುರಿಯಾಗಿಸಿ ಇ ಡಿ ಬಂಧಿಸಲಾಗಿದೆ ಎಂದು ಚೈತ್ರಾ ಅರ್ಜಿಯಲ್ಲಿ ಆರೋಪಿಸಿದ್ದಾರೆ.