ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Moral policing: ಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ; ಮುಸ್ಲಿಂ ಯುವತಿ ಜತೆಗಿದ್ದ ಹಿಂದು ಯುವಕನ ಮೇಲೆ ಹಲ್ಲೆ!

ನೈತಿಕ ಪೊಲೀಸ್ ಗಿರಿ ನಡೆಸಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಕೂಟರ್‌ನಲ್ಲಿ ಕುಳಿತಿದ್ದ ಹಿಂದು ಯುವಕ- ಮುಸ್ಲಿಂ ಯುವತಿಯ ಮೇಲೆ ನೈತಿಕ ಪೊಲೀಸ್‌ಗಿರಿ ಹೆಸರಿನಲ್ಲಿ ಹಲ್ಲೆ ನಡೆಸಲಾಗಿದೆ. ಯುವಕ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ನೈತಿಕ ಪೊಲೀಸ್ ಗಿರಿ; ಐವರ ಬಂಧನ

Profile Vishakha Bhat Apr 11, 2025 10:14 AM

ಬೆಂಗಳೂರು: ಯುವಕ-ಯುವತಿ ಮೇಲೆ ನೈತಿಕ ಪೊಲೀಸ್ ಗಿರಿ (Moral policing) ನಡೆಸಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಸ್ಕೂಟರ್‌ನಲ್ಲಿ ಕುಳಿತಿದ್ದ ಹಿಂದು ಯುವಕ- ಮುಸ್ಲಿಂ ಯುವತಿಯ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಲಾಗಿತ್ತು. ಯುವಕ -ಯುವತಿಯ ಮೇಲೆ ಹಲ್ಲೆ ನಡೆಸಿದ್ದ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದರಿಂದ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಹೀಗಾಗಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಶನಿವಾರ ಸಂಜೆ ಹಿಂದು ಯುವಕನ ಜತೆ ಮುಸ್ಲಿಂ ಯುವತಿ ಇದ್ದದ್ದನ್ನು ಕಂಡು, ಹಿಂದೂ ಯುವಕನ ಜತೆಗೆ ಯಾಕೆ ಇದ್ದೀಯಾ ಎಂದು ಪ್ರಶ್ನಿಸಿದ್ದ ಆರೋಪಿಗಳು, ಹಿಂದು ಯುವಕನ ಮೇಲೆ ಹಲ್ಲೆಗೆ ಮುಂದಾಗಿದ್ದರು. ಸಂತ್ರಸ್ತರು ದೂರು ಸಲ್ಲಿಸಿದ ನಂತರ ಪ್ರಕರಣ ದಾಖಲಿಸಿಕೊಂಡ ಚಂದ್ರಾ ಲೇಔಟ್ ಠಾಣೆ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಚಂದ್ರಾಲೇಔಟ್‌ನ ಪಾರ್ಕ್ ಬಳಿ ಬೆಳಗ್ಗೆ ಸ್ಕೂಟರ್‌ನಲ್ಲಿ ಕುಳಿತು ಮಾತನಾಡುತ್ತಿದ್ದ ಯುವಕ-ಯುವತಿಯನ್ನು ಗುಂಪೊಂದು ಬಂದು ಕಿರುಕುಳ ನೀಡಿತ್ತು. ನೀವಿಬ್ಬರು ಇಲ್ಲಿ ಏನು ಮಾಡುತ್ತೀದ್ದೀರಿ? ಇದು ನಮ್ಮ ಏರಿಯಾ” ಎಂದು ಹೇಳಿದ ಗುಂಪು, ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿತ್ತು. ಆ ಯುವಕ, ಯುವತಿ “ನಾವು ಸ್ನೇಹಿತರು, ಮಾತಾಡುತ್ತಿದ್ದೇವೆ” ಎಂದು ಹೇಳಿದರೂ, ಆ ಗ್ಯಾಂಗ್ ಕಿರುಕುಳ ನೀಡಿ ಹಲ್ಲೆ ಮಾಡಿದೆ. ಬುರ್ಕಾ ಧರಿಸಿ, ಹಿಂದು ಹುಡುಗನ ಜೊತೆ ಯಾಕೆ ಕುಳಿತುಕೊಂಡಿದ್ದೀಯಾ ಎಂದು ಆಕೆಗೆ ಪ್ರಶ್ನೆ ಮಾಡಿದ್ದಾರೆ. ನಾವು ಸುಮ್ಮನೇ ಕುಳಿತು ಮಾತನಾಡುತ್ತಿದ್ದೆವು ಎಂದು ಹೇಳಿದರೂ ಕೇಳದೆ, ಯುವತಿಯ ಜಡೆಯನ್ನು ಹಿಡಿದು ಎಳೆದು, ಇಬ್ಬರ ಮೇಲೂ ಹೊಡೆದು ಹಲ್ಲೆ ಮಾಡಿದ್ದಾರೆ. ಅಷ್ಟೇ ಅಲ್ಲದೆ ನಿಮ್ಮ ತಂದೆ ತಾಯಿಗೆ ಹೇಳುತ್ತೇವೆ ಅವರ ನಂಬರ್‌ ಕೊಡಿ ಎಂದು ಬೆದರಿಕೆ ಹಾಕಿದ್ದರು ಎಂದು ಆರೋಪಿಸಲಾಗಿದೆ.

ಈ ಸುದ್ದಿಯನ್ನೂ ಓದಿ: Physical Abuse: ಬೆಂಗಳೂರಿನಲ್ಲಿ ಮತ್ತೆ ಕಾಮುಕರ ಅಟ್ಟಹಾಸ, ಅಣ್ಣನಿಗೆ ಹಲ್ಲೆ ಮಾಡಿ ಯುವತಿಯ ಸಾಮೂಹಿಕ ಅತ್ಯಾಚಾರ

ಯುವಕನ ಮೇಲೆ ಹಲ್ಲೆ ಮಾಡಿರುವುದನ್ನು ವಿಡಿಯೊ ಮಾಡಿಕೊಳ್ಳಲಾಗಿದೆ. ನಂತರ ಆ ಗ್ಯಾಂಗ್‌ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದೆ. ಹಲ್ಲೆಗೆ ಒಳಗಾದ ಯುವಕ, ಯುವತಿ ಸ್ಥಳೀಯ ಚಂದ್ರಾಲೇಔಟ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ತನಿಖೆ ಆರಂಭಿಸಿದ ಪೊಲೀಸರು ಸೈಯದ್‌, ಶಾಹಿಲ್ ಸೇರಿದಂತೆ ಐವರನ್ನು ಬಂಧಿಸಿದ್ದಾರೆ. ಅವರ ವಿರುದ್ಧ ದೌರ್ಜನ್ಯ, ಹಲ್ಲೆ ಆರೋಪಗಳನ್ನು ದಾಖಲಿಸಲಾಗಿದೆ.