ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru News: ಕೌಟುಂಬಿಕ ಕಲಹ; ಇಬ್ಬರು ಪುಟ್ಟ ಮಕ್ಕಳಿಗೆ ವಿಷವಿಕ್ಕಿ ಕೊಂದು, ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ಬೆಂಗಳೂರಿನ ಮತ್ತಿಕೆರೆಯಲ್ಲಿ ಈ ಘೋರ ಘಟನೆ ಸಂಭವಿಸಿದೆ. ಶನಿವಾರ ಸಂಜೆ ದಂಪತಿ ನಡುವೆ ಜಗಳ ನಡೆದಿದೆ. ಇದರಿಂದ ತೀವ್ರ ಮನನೊಂದ ಗೃಹಿಣಿಯು, ಮಕ್ಕಳಿಗೆ ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಕುಡಿಸಿ, ಬಳಿಕ ತಾನೂ ಸೇವಿಸಿದ್ದಾರೆ. ಇದರಿಂದ ಮಕ್ಕಳು ಮೃತಪಟ್ಟಿದ್ದು, ತಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತ ತಾಯಿಯೊಬ್ಬರು, ಇಬ್ಬರು ಪುಟ್ಟ ಮಕ್ಕಳಿಗೆ ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಕುಡಿಸಿ, ತಾನೂ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ದಾರುಣ ಘಟನೆ ಯಶವಂತಪುರದ ಮತ್ತಿಕೆರೆಯಲ್ಲಿ ಸಂಭವಿಸಿದೆ. ಘಟನೆಯಲ್ಲಿ ನಾಲ್ಕು ವರ್ಷದ ನಿವೇದ್ ಚೌದರಿ ಮತ್ತು ಎರಡು ವರ್ಷದ ನಿರ್ಮಲ್ ಚೌದರಿ ಮೃತಪಟ್ಟಿದ್ದಾರೆ.

ಆತ್ಮಹತ್ಯೆಗೆ ಯತ್ನಿಸಿದ ತಾಯಿ ಪವಿತ್ರಾ ಸ್ಥಿತಿ ಗಂಭೀರವಾಗಿದ್ದು, ಪ್ರಸ್ತುತ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂಲತಃ ಪಾವಗಡದವರಾದ ಪ್ರಶಾಂತ್ ಎಂಬುವವರು ಕಳೆದ ಐದಾರು ವರ್ಷಗಳಿಂದ ಮತ್ತಿಕೆರೆಯ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಮೊಬೈಲ್ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರಶಾಂತ್ ಮತ್ತು ಪತ್ನಿ ಪವಿತ್ರಾ ನಡುವೆ ಆಗಾಗ್ಗೆ ಗಲಾಟೆ ನಡೆಯುತ್ತಿತ್ತು ಎನ್ನಲಾಗಿದೆ.

ಶನಿವಾರ ಸಂಜೆ ಕೂಡ ದಂಪತಿ ನಡುವೆ ಜೋರಾಗಿ ಜಗಳ ನಡೆದಿದ್ದು, ಇದರಿಂದ ತೀವ್ರ ಮನನೊಂದ ಪವಿತ್ರಾ ರಾತ್ರಿ ವೇಳೆ ಮಕ್ಕಳಿಗೆ ಹಾಲಿನಲ್ಲಿ ಇಲಿ ಪಾಷಾಣ ಬೆರೆಸಿ ಕುಡಿಸಿ, ಬಳಿಕ ತಾನೂ ಸೇವಿಸಿದ್ದಾರೆ. ಇಂದು ಮುಂಜಾನೆ ಪ್ರಶಾಂತ್ ಎದ್ದಾಗ ಪತ್ನಿ ಮತ್ತು ಮಕ್ಕಳು ಅಸ್ವಸ್ಥಗೊಂಡಿರುವುದು ಕಂಡುಬಂದಿದೆ. ಕೂಡಲೇ ಸ್ಥಳೀಯರ ನೆರವಿನೊಂದಿಗೆ ಎಲ್ಲರನ್ನೂ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅಷ್ಟರಲ್ಲಾಗಲೇ ಮಕ್ಕಳಿಬ್ಬರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.

ಸ್ಥಳಕ್ಕೆ ಯಶವಂತಪುರ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಹೊಂಡದಲ್ಲಿ ಈಜಲು ತೆರಳಿದ ಇಬ್ಬರು ಬಾಲಕರು ಜಲಸಮಾಧಿ

ಬೆಳಗಾವಿ: ಪ್ರಸಿದ್ಧ ಬೆಳಗಾವಿ ಕಪಿಲೇಶ್ವರ ದೇವಾಲಯ ಹೊಂಡದಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲಾಗಿರುವ ಘಟನೆ ಭಾನುವಾರ ನಡೆದಿದೆ. ಶಿವಂ ಪರಶುರಾಮ ಸುಂಡೀಕರ್ (7), ಪರಶುರಾಮ ನಿಲಜಕರ್ (11) ಮೃತರು. ಭಾನುವಾರ ಬೆಳಗ್ಗೆ ನಗರದ ಕಪಿಲೇಶ್ವರ ಹೊಂಡದಲ್ಲಿ ಈಜಲು ಇಬ್ಬರು ತೆರಳಿದ್ದರು. ಈ ವೇಳೆ ನೀರಿನ ಆಳ ಅರಿಯದೆ ಮುಳುಗಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ ಹಾಗೂ ಎಸ್‌ಡಿಆರ್‌ಎಫ್ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ವೇಳೆ ಇಬ್ಬರು ಬಾಲಕರ ಮೃತದೇಹವನ್ನು ಹೊಂಡದಿಂದ ಹೊರತಗೆಯಲಾಗಿದೆ.

ಮನೆಯೊಳಗೆ ರಕ್ತದ ಮಡುವಿನಲ್ಲಿ ಬಿದ್ದ ನಾಲ್ವರು ಮಕ್ಕಳ ಮೃತದೇಹ; ತಾಯಿ ನಾಪತ್ತೆ: ದೇಶವನ್ನೇ ಬೆಚ್ಚಿಬೀಳಿಸಿದ ನಿಗೂಢ ಪ್ರಕರಣ

ಸ್ಥಳಕ್ಕೆ ಖಡೇಬಜಾರ್ ಪೊಲೀಸ್ ಠಾಣೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಾಲಕರ ಮೃತದೇಹವನ್ನು ಮರಣೋತ್ತರ ‌ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಖಡೇಬಜಾರ್ ಪೊಲೀಸರು ಭೇಟಿ ನೀಡಿದ್ದಾರೆ.