ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಬೆಂಗಳೂರಿನಲ್ಲಿ 15 ವರ್ಷದ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಾಯಿ; ಕೇಸ್‌ ದಾಖಲು

Bengaluru News: ಬೆಂಗಳೂರಿನ ಚಂದ್ರಾಲೇಔಟ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಪೊಲೀಸರು ಕಾರ್ಯಾಚರಣೆ ನಡೆಸಿ ಸದ್ಯ ಬಾಲಕಿಯನ್ನು ರಕ್ಷಿಸಿದ್ದು, ಬಾಲಕಿಯ ತಾಯಿ, ಮಲತಂದೆ ಹಾಗೂ ಮಧ್ಯವರ್ತಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

15 ವರ್ಷದ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಾಯಿ!

ಚಂದ್ರಾ ಲೇಔಟ್‌ ಪೊಲೀಸ್‌ ಠಾಣೆ (ಸಂಗ್ರಹ ಚಿತ್ರ) -

Prabhakara R
Prabhakara R Mar 14, 2026 3:00 PM

ಬೆಂಗಳೂರು: 15 ವರ್ಷದ ಸ್ವಂತ ಮಗಳನ್ನೇ ತಾಯಿ ವೇಶ್ಯಾವಾಟಿಕೆ ದಂಧೆಗೆ ದೂಡಿರುವ ಆರೋಪ ನಗರದಲ್ಲಿ ಕೇಳಿಬಂದಿದ್ದು, ಈ ಸಂಬಂಧ ಚಂದ್ರಲೇಔಟ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಣದಾಸೆಗೆ ಬಿದ್ದು ತನ್ನ 15 ವರ್ಷದ ಮಗಳನ್ನು ಹೀನಕೃತ್ಯಕ್ಕೆ ಬಳಸಿಕೊಂಡಿರುವುದು ಪೊಲೀಸರ ಕಾರ್ಯಾಚರಣೆ ವೇಳೆ ಬಯಲಾಗಿದೆ. ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ಆರೋಪದ ಮೇಲೆ ಬಾಲಕಿಯ ತಾಯಿ, ಆಕೆಯ ಮಲತಂದೆ ಹಾಗೂ ಮಧ್ಯವರ್ತಿಯನ್ನು ಬಂಧಿಸಲಾಗಿದೆ.

6 ರಿಂದ 10 ಸಾವಿರ ರೂ. ನಿಗದಿ

ತಾಯಿ ಮತ್ತು ಮಲತಂದೆ ಪ್ರತಿದಿನ ಕಾರಿನಲ್ಲಿ ಬಾಲಕಿಯನ್ನು ಮಧ್ಯವರ್ತಿಯ ಮನೆಗೆ ಕರೆದುಕೊಂಡು ಹೋಗಿ ಬಿಡುತ್ತಿದ್ದರು. ಅಲ್ಲಿ ಬಾಲಕಿ ಸಂಜೆವರೆಗೂ ಗಿರಾಕಿಗಳ ಕಿರುಕುಳಕ್ಕೆ ಬಲಿಯಾಗುತ್ತಿದ್ದಳು. ಬಾಲಕಿಯೊಂದಿಗೆ ಸಮಯ ಕಳೆಯಲು ಮಧ್ಯವರ್ತಿಯು 6 ರಿಂದ 10 ಸಾವಿರ ರೂ.ವರೆಗೂ ಹಣ ನಿಗದಿಪಡಿಸುತ್ತಿದ್ದಳು. ಇದರಲ್ಲಿ ಅರ್ಧದಷ್ಟು ಹಣವನ್ನು ಆಕೆಯ ತಾಯಿಗೆ ನೀಡಲಾಗುತ್ತಿತ್ತು ಎಂಬ ಆಘಾತಕಾರಿ ಮಾಹಿತಿ ತನಿಖೆಯಲ್ಲಿ ಬಹಿರಂಗವಾಗಿದೆ.

ಚಂದ್ರಾಲೇಔಟ್ ಪೊಲೀಸರು ಕಾರ್ಯಾಚರಣೆ ನಡೆಸಿ ಸದ್ಯ ಬಾಲಕಿಯನ್ನು ರಕ್ಷಿಸಿದ್ದು, ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ. ಈ ಪ್ರಕರಣದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿದ್ದು, ಪೊಲೀಸರು ಅವರಿಗಾಗಿ ಬಲೆ ಬೀಸಿದ್ದಾರೆ.

ವೈರ್‌ನಿಂದ ಕುತ್ತಿಗೆ ಬಿಗಿದು ಪ್ರೇಯಸಿಯನ್ನು ಕೊಲೆಗೈದ ಪ್ರಿಯಕರ

ಬೆಂಗಳೂರು, ಮಾ.14: ಪ್ರಿಯಕರನೊಬ್ಬ (lover) ತನ್ನ ಪ್ರಿಯತಮೆಯನ್ನು ವೈರ್‌ನಿಂದ ಕುತ್ತಿಗೆ ಬಿಗಿದು ಭೀಕರವಾಗಿ ಕೊಲೆ ಮಾಡಿರುವ ಘಟನೆ, ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊಡತಿ ಬಳಿ ನಡೆದಿದೆ. ಕೊಡಗು ಮೂಲದ ರಂಜಿತಾಳನ್ನು (23) ಆರೋಪಿ ಅಯ್ಯಪ್ಪ ಎಂಬಾತ ಕೊಲೆ ಮಾಡಿದ್ದಾನೆ. ಇಬ್ಬರು ಲಿವ್‌ ಇನ್‌ ರಿಲೇಶನ್ಶಿಪ್‌ನಲ್ಲಿದ್ದರು ಎಂದು ತಿಳಿದುಬಂದಿದೆ.

ರಂಜಿತ ಮತ್ತು ಅಯ್ಯಪ್ಪ ಕೊಡಗು ಜಿಲ್ಲೆಯ ನಿವಾಸಿಗಳಾಗಿದ್ದು, ಮದುವೆಯಾಗಿ ಹೆಂಡತಿಯನ್ನು ಅಯ್ಯಪ್ಪ ಬಿಟ್ಟಿದ್ದ. ಡ್ರೈ ಫ್ರೂಟ್ ಅಂಗಡಿಯಲ್ಲಿ ಆರೋಪಿ ಅಯ್ಯಪ್ಪ ಸೂಪರ್ವೈಸರ್ ಆಗಿ ಕೆಲಸ ಮಾಡುತ್ತಿದ್ದ. ಅಯ್ಯಪ್ಪನನ್ನೆ ಮದುವೆಯಾಗುವುದಾಗಿ ರಂಜಿತ ಮನೆ ಬಿಟ್ಟು ಬಂದಿದ್ದಾಳೆ.

ಬಿಕ್ಲು ಶಿವ ಕೊಲೆ ಪ್ರಕರಣ; ಪರಪ್ಪನ ಅಗ್ರಹಾರ ಜೈಲಿನಿಂದ ಬಿಜೆಪಿ ಶಾಸಕ ಬೈರತಿ ಬಸವರಾಜ್ ಬಿಡುಗಡೆ

ಪತ್ನಿಗೆ ವಿಚ್ಛೇದನ ನೀಡದೆ ಅಯ್ಯಪ್ಪ ರಂಜಿತಾ ಜೊತೆಗೆ ವಾಸವಿದ್ದ. ಇದೀಗ ಮದುವೆ ವಿಚಾರಕ್ಕೆ ರಂಜಿತ ಹಾಗೂ ಅಯ್ಯಪ್ಪನ ನಡುವೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ಅಯ್ಯಪ್ಪ ರಂಜಿತಾಳ ಕುತ್ತಿಗೆಗೆ ವೈರ್‌ ಬಿಗಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಸದ್ಯ ಆರೋಪಿಯನ್ನು ವರ್ತೂರು ಠಾಣೆ ಪೋಲಿಸರು ಆರೆಸ್ಟ್ ಮಾಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.