ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಾಹನ ಸವಾರರೇ ಗಮನಿಸಿ; ಬೆಂಗಳೂರಿನ ಈ ಫ್ಲೈಓವರ್‌ಗಳಲ್ಲಿ ಆಟೋ, ದ್ವಿಚಕ್ರ, ಗೂಡ್ಸ್ ವಾಹನಗಳ ಸಂಚಾರಕ್ಕೆ ನಿಷೇಧ

ರಾಜಧಾನಿಯಲ್ಲಿ ಸಂಚಾರ ದಟ್ಟಣೆಯನ್ನು ತಡೆಯಲು ಹಾಗೂ ಫ್ಲೈಓವರ್‌ಗಳ ಮೇಲೆ ಸಂಭವಿಸುವ ಭೀಕರ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಬೆಂಗಳೂರು ಸಂಚಾರಿ ಪೊಲೀಸ್ (BTP) ಇಲಾಖೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ಫ್ಲೈ ಓವರ್ ನಲ್ಲಿ ಬೆಳಗ್ಗೆ 7 ರಿಂದ 11ರವರೆಗೆ ಹಾಗೂ ಸಂಜೆ 4ರಿಂದ 10 ಗಂಟೆಯವರೆಗೆ ಸರಕು ಸಾಗಾಣಿಕೆ ವಾಹನಗಳಿಗೆ ನಿಷೇಧಿಸಲಾಗಿದೆ.

ಸಂಗ್ರಹ ಚಿತ್ರ

ಬೆಂಗಳೂರು: ರಾಜಧಾನಿಯಲ್ಲಿ ಸಂಚಾರ ದಟ್ಟಣೆಯನ್ನು ತಡೆಯಲು ಹಾಗೂ ಫ್ಲೈಓವರ್‌ಗಳ ಮೇಲೆ ಸಂಭವಿಸುವ ಭೀಕರ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಬೆಂಗಳೂರು ಸಂಚಾರಿ ಪೊಲೀಸ್ (Bengaluru Traffic Police) ಇಲಾಖೆ ಮಹತ್ವದ ಆದೇಶವೊಂದನ್ನು ಹೊರಡಿಸಿದೆ. ನಗರದ ಪ್ರಮುಖ 6 ಫ್ಲೈಓವರ್ ಮತ್ತು ಎಲಿವೇಟೆಡ್ ಕಾರಿಡಾರ್‌ಗಳಲ್ಲಿ ಆಟೋರಿಕ್ಷಾ, 2-ವೀಲರ್ ಹಾಗೂ ಸರಕು ಸಾಗಣೆ (ಗೂಡ್ಸ್) ವಾಹನಗಳ ಸಂಚಾರವನ್ನು ಕಟ್ಟುನಿಟ್ಟಾಗಿ ನಿರ್ಬಂಧಿಸಲಾಗಿದೆ.

ಬಿಜಿಎಸ್ ಮೇಲ್ಸೇತುವೆ, ಪೀಣ್ಯ ಎಲಿವೇಟೆಡ್ ಕಾರಿಡಾರ್, ಸಿಲ್ಕ್ ಬೋರ್ಡ್‌ನಿಂದ ರಾಗಿಗುಡ್ಡದವರೆಗೆ ಇರುವ ಡಬಲ್ ಡೆಕ್ಕರ್ ಮೇಲ್ಸೇತುವೆ ಹಾಗೂ ಸಂಜೀವನಗರ ಕ್ರಾಸ್‌ನಿಂದ ವಿದ್ಯಾಶಿಲ್ಪ ಜಂಕ್ಷನ್‌ವರೆಗಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆ ಎಲಿವೇಟೆಡ್ ಕಾರಿಡಾರ್‌ನಲ್ಲಿ ಸೆಪ್ಟೆಂಬರ್ 4ರಿಂದ ನಿರ್ಬಂಧ ಜಾರಿಗೆ ಬರಲಿದೆ. ಎಲೆಕ್ಟ್ರಾನಿಕ್ ಸಿಟಿ ಎಲಿವೇಟೆಡ್ ಕಾರಿಡಾರ್‌ನಲ್ಲಿ ಸೆಪ್ಟೆಂಬರ್ 11ರಿಂದ ನಿರ್ಬಂಧ ಜಾರಿಗೆ ಬರಲಿದೆ.

ಮೈಸೂರು ರಸ್ತೆಯ ಬಿಜಿಎಸ್ ಫ್ಲೈ ಓವರ್ ನಲ್ಲಿ ದಿನದ 24 ಗಂಟೆಯೂ ಭಾರಿ ಸರಕು ಸಾಗಣಿಕೆ ವಾಹನಗಳಿಗೆ ನಿರ್ಬಂಧಿಸಲಾಗಿದೆ. ಬೇರೆ ಫ್ಲೈ ಓವರ್ ನಲ್ಲಿ ಬೆಳಗ್ಗೆ 7 ರಿಂದ 11ರವರೆಗೆ ಹಾಗೂ ಸಂಜೆ 4ರಿಂದ 10 ಗಂಟೆಯವರೆಗೆ ಸರಕು ಸಾಗಾಣಿಕೆ ವಾಹನಗಳಿಗೆ ನಿಷೇಧಿಸಲಾಗಿದೆ.

ಜೂನ್ ಅಂತ್ಯದೊಳಗೆ "ಬೆಂಗಳೂರು-ಮುಂಬೈ" ಸೂಪರ್ ಫಾಸ್ಟ್ ರೈಲು ಸಂಚಾರ ಆರಂಭ

ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವುದು, ಅಪಘಾತಗಳ ತೀವ್ರತೆಯನ್ನು ಕಡಿಮೆ ಮಾಡುವುದು ಮತ್ತು ರಸ್ತೆ ಸುರಕ್ಷತೆ ಹೆಚ್ಚಿಸುವುದು ನಿರ್ಬಂಧದ ಉದ್ದೇಶವಾಗಿದೆ ಎಂದು ಹೇಳಿದ್ದಾರೆ. ಮೇಲ್ಸೇತುವೆಗಳ ವಿನ್ಯಾಸ ಮತ್ತು ಅಗಲ, ಅಪಘಾತಗಳಿಂದ ಉಂಟಾಗುವ ಪರಿಣಾಮ, ವಾಹನಗಳು ಕೆಟ್ಟು ನಿಂತಾಗ ಉಂಟಾಗುವ ಸಂಚಾರ ದಟ್ಟಣೆ, ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿನ ದಟ್ಟಣೆ, ತುರ್ತು ಸಂಚಾರ ನಿರ್ವಹಣೆ ಹಾಗೂ ಪಾದಚಾರಿಗಳು ಮತ್ತು ದ್ವಿಚಕ್ರ ವಾಹನ ಸವಾರರ ಸುರಕ್ಷತೆ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಿ ಈ ನಿರ್ಬಂಧ ವಿಧಿಸಲಾಗಿದೆ.

Vishakha Bhat Heggar

View all posts by this author