ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನ್ಯಾ. ನಾಗಮೋಹನ್‍ದಾಸ್ ವರದಿ ಅವೈಜ್ಞಾನಿಕ ಎಂದು ತಿರಸ್ಕರಿಸಿದ್ದೀರಾ? : ಸಿಎಂಗೆ ಕಾರಜೋಳ ಪ್ರಶ್ನೆ

Govind Karjol: ನ್ಯಾ. ನಾಗಮೋಹನ್‍ದಾಸ್ ಅವರ ವರದಿಯಲ್ಲಿ ಶೇ.17 ಎಂದಿದ್ದರೂ ಶೇ.15ಕ್ಕೆ ಸೀಮಿತ ಮಾಡಿ ಕೊಡಬಹುದಾಗಿತ್ತು. ಯಾಕೆ ಕೊಟ್ಟಿಲ್ಲ. ನಿನ್ನೆ ದಿನ ಬೆಟ್ಟ ಅಗೆದು ಇಲಿ ಹುಡುಕಿದಂತೆ ಸಿದ್ದರಾಮಯ್ಯ ಅವರು ಒಳ ಮೀಸಲಾತಿಯನ್ನು ಜಾರಿ ನಿರ್ಧಾರ ಪ್ರಕಟಿಸಿ ತಮ್ಮ ಬೆನ್ನನ್ನು ತಾವೇ ಚಪ್ಪರಿಸಿಕೊಂಡಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಟೀಕಿಸಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸಂಸದ ಗೋವಿಂದ ಕಾರಜೋಳ .

ಬೆಂಗಳೂರು: ಸಿದ್ದರಾಮಯ್ಯ ಅವರೇ, ನೀವೇ ನೇಮಿಸಿದ ನ್ಯಾ. ನಾಗಮೋಹನ್‍ದಾಸ್ ಅವರ ವರದಿ ಅವೈಜ್ಞಾನಿಕ ಎಂಬ ಕಾರಣಕ್ಕೆ ತಿರಸ್ಕರಿಸಿದ್ದೀರಾ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ (Govind Karjol) ಪ್ರಶ್ನಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀವೇ ರಚಿಸಿದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವರದಿ ವೈಜ್ಞಾನಿಕ ಎಂದು ಒಪ್ಪಿಕೊಂಡಿದ್ದೀರಾ ಎಂದು ಸ್ಪಷ್ಟಪಡಿಸಲು ಒತ್ತಾಯಿಸಿದರು.

ನಾಗಮೋಹನ್‍ದಾಸ್ ಅವರ ವರದಿಯಲ್ಲಿ ಶೇ.17 ಎಂದಿದ್ದರೂ ಶೇ.15ಕ್ಕೆ ಸೀಮಿತ ಮಾಡಿ ಕೊಡಬಹುದಾಗಿತ್ತು. ಯಾಕೆ ಕೊಟ್ಟಿಲ್ಲ. ನಿನ್ನೆ ದಿನ ಬೆಟ್ಟ ಅಗೆದು ಇಲಿ ಹುಡುಕಿದಂತೆ ಸಿದ್ದರಾಮಯ್ಯ ಅವರು ಒಳ ಮೀಸಲಾತಿಯನ್ನು ಜಾರಿ ನಿರ್ಧಾರ ಪ್ರಕಟಿಸಿ ತಮ್ಮ ಬೆನ್ನನ್ನು ತಾವೇ ಚಪ್ಪರಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

ಸಾಮಾಜಿಕ ನ್ಯಾಯ, ಸರ್ವರಿಗೂ ಸಮಪಾಲು, ಸಮಬಾಳು ಎಂದು ನಿರಂತರ ಭಾಷಣ ಮಾಡಿದ್ದೀರಲ್ಲವೇ? ಇದು ಕೇವಲ ಭಾಷಣದ ಸರಕೇ ಎಂದು ಪ್ರಶ್ನಿಸಿದ ಅವರು, ಸಿದ್ದರಾಮಯ್ಯ ಅವರೇ, ಅಹಿಂದ ವರ್ಗದ ಕುರಿತು ನಿಮಗೇನಾದರೂ ಬದ್ಧತೆ ಇದೆಯೇ? ಬದ್ಧತೆ ಇದ್ದರೆ ನೀವು ಸಾವಿರಾರು ಕೋಟಿ ಖರ್ಚು ಮಾಡಿ ವರದಿ ತರಿಸಿದ್ದೀರಿ. ಕೆಂಪರಾಜ್ ವರದಿ ಮೂಲೆಗುಂಪು ಮಾಡಿದ್ದೀರಿ. ಅದಾದ ಬಳಿಕ ಜಯಪ್ರಕಾಶ್ ಹೆಗ್ಡೆ ಅವರ ವರದಿ ಮೂಲೆಗುಂಪಾಗಿದೆ. ಮಧುಸೂದನ ನಾಯಕ್ ವರದಿ ಹೊರಗೆ ಬರಲೇ ಇಲ್ಲ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರೇ, ನಿಮಗೆ ಬದ್ಧತೆ ಎಲ್ಲಿದೆ? ಜನರಿಗೆ ಮೋಸ ಮಾಡಿ, ಬಡವರನ್ನು ದಾರಿ ತಪ್ಪಿಸಿ ಬಡವರಿಗೆ ಅಹಿಂದ ನಾಯಕ ಎಂದು ಹೇಳಿ ಅಧಿಕಾರಕ್ಕೆ ಬರುವುದೊಂದೇ ನಿಮ್ಮ ಗುರಿ. ಕುರ್ಚಿ ಉಳಿಸಿಕೊಳ್ಳಲು ನೀವು ಮಾಡುವುದನ್ನು ನೋಡಿದರೆ ಇದಕ್ಕಿಂತ ಹೆಚ್ಚಿನ ಮೋಸವನ್ನು ಪ್ರಪಂಚದಲ್ಲಿ ಬೇರೆ ಯಾರೂ ಮಾಡಲು ಸಾಧ್ಯ ಇಲ್ಲ ಅನಿಸುವುದಾಗಿ ತಿಳಿಸಿದ ಅವರು, ಸಿದ್ದರಾಮಯ್ಯ ಅವರು ಮಹಾ ಮೋಸಗಾರ ಎಂದು ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ ಟೀಕಿಸಿದರು.

ಸಿದ್ದರಾಮಯ್ಯ ಅವರು ಈಚೆಗೆ ಕೇವಲ ಹೊಂದಾಣಿಕೆಯ ರಾಜಕಾರಣಿ ಆಗಿದ್ದಾರೆಂದು ಅವರ ಸಂಪುಟದ ಸಚಿವ ಸತೀಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಅದು ಅಸತ್ಯವೇ ಸತ್ಯವೇ ಎಂದು ಮುಖ್ಯಮಂತ್ರಿಗಳೇ ಹೇಳಲಿ ಎಂದು ಒತ್ತಾಯಿಸಿದ ಅವರು, ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು, ಸಿದ್ದರಾಮಯ್ಯ ಅವರಿಗೆ ಬದ್ಧತೆ ಇಲ್ಲ ಎನ್ನುತ್ತಿದ್ದಾರೆ ಎಂದರು.

ಮೇ 9ರಂದು ಚಿತ್ರದುರ್ಗದಲ್ಲಿ ಬಿಎಸ್‌ವೈ ಅಭಿಮಾನೋತ್ಸವ: ಗೋವಿಂದ ಕಾರಜೋಳ

ಈ ಸಂದರ್ಭದಲ್ಲಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಕೇಂದ್ರದ ಮಾಜಿ ಸಚಿವ ಎ.ನಾರಾಯಣಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್, ಶಾಸಕ ಮಾನಪ್ಪ ಡಿ ವಜ್ಜಲ್, ರಾಜ್ಯ ವಕ್ತಾರ ಎಚ್. ವೆಂಕಟೇಶ್ ದೊಡ್ಡೇರಿ ಉಪಸ್ಥಿತರಿದ್ದರು.