#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Muda Case: ಸಿಎಂ ವಿರುದ್ಧ ಸಿಬಿಐ ತನಿಖೆ ಕೋರಿ ಅರ್ಜಿ; ಆದೇಶ ಕಾಯ್ದಿರಿಸಿದ ಹೈಕೋರ್ಟ್

Muda Case: ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ.

ಸಿಎಂ ವಿರುದ್ಧ ಸಿಬಿಐ ತನಿಖೆ ಕೋರಿ ಅರ್ಜಿ;  ಆದೇಶ ಕಾಯ್ದಿರಿಸಿದ ಹೈಕೋರ್ಟ್

Profile Prabhakara R Jan 27, 2025 5:12 PM

ಬೆಂಗಳೂರು: ಮುಡಾ ಹಗರಣಕ್ಕೆ (Muda Case) ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿರುವ ಹೈಕೋರ್ಟ್, ಆದೇಶವನ್ನು ಕಾಯ್ದಿರಿಸಿದೆ. ಮುಡಾ ಹಗರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ, ವಾದ- ಪ್ರತಿವಾದ ಆಲಿಸಿ ನಂತರ ಆದೇಶವನ್ನು ಕಾಯ್ದಿರಿಸಿತು.

ದೂರುದಾರ ಸ್ನೇಹಮಯಿ ಕೃಷ್ಣ ಪರ ಹಿರಿಯ ವಕೀಲ ಮಣಿಂದರ್ ಸಿಂಗ್ ವಾದ ಮಂಡಿಸಿದರು. ಹಾಗೆಯೇ ಲೋಕಾಯುಕ್ತ ಪೊಲೀಸರಿಂದ ಅಂತಿಮ ವರದಿ ಸಲ್ಲಿಕೆಗೆ ಹೈಕೋರ್ಟ್ ಆದೇಶ ಪ್ರಕಟಿಸುವವರೆಗೂ ಗಡುವು ವಿಸ್ತರಣೆ ಮಾಡಲಾಗಿದೆ.

ಈ ಸುದ್ದಿಯನ್ನೂ ಓದಿ | Actor Shivarajkumar: ನಟ ಶಿವರಾಜ್‌ ಕುಮಾರ್‌ ನಿವಾಸಕ್ಕೆ ತೆರಳಿ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

ಇ.ಡಿ. ಸಮನ್ಸ್‌, ದೂರು ರದ್ದತಿ ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಎಂ ಪತ್ನಿ, ಸಚಿವ ಬೈರತಿ ಸುರೇಶ್‌

ಮುಡಾ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ದೂರು ಮತ್ತು ತನಿಖೆ ಹಾಗೂ ಅಕ್ರಮ ಹಣ ವರ್ಗಾವಣೆ ಕಾಯ್ದೆ (ಪಿಎಂಎಲ್‌ಎ) ಸೆಕ್ಷನ್‌ 50ರ ಅಡಿ ಜಾರಿ ಮಾಡಿರುವ ಸಮನ್ಸ್‌ ರದ್ದುಪಡಿಸುವಂತೆ ಕೋರಿ ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಅವರು ಕರ್ನಾಟಕ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ.

ಹಿರಿಯ ವಕೀಲ ವಿಕ್ರಮ್‌ ಹುಯಿಲಗೋಳ ಅವರು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠದ ಮುಂದೆ ಸೋಮವರ ಅರ್ಜಿ ಉಲ್ಲೇಖಿಸಿದರು. ಎಲ್ಲಾ ಪ್ರಕರಣಗಳು ಮುಗಿದ ಬಳಿಕ ಅರ್ಜಿಗಳನ್ನು ಪರಿಗಣಿಸಲಾಗುವುದು ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಹೇಳಿದರು.

ಹೈಕೋರ್ಟ್‌ ಮುಂದೆ ದಾಖಲಿಸಿರುವ ಮನವಿಯಲ್ಲಿ, ಪ್ರಕರಣವು ಕೆಸರೆ ಗ್ರಾಮದಲ್ಲಿನ 3.14 ಎಕರೆ ಭೂಮಿಯನ್ನು ಸಹೋದರ ಮಲ್ಲಿಕಾರ್ಜುನ ಸ್ವಾಮಿ ಅವರು ಖರೀದಿಸಿ ಅದನ್ನು ತನಗೆ ದಾನವಾಗಿ ನೀಡಿದ್ದರು. ಇದನ್ನು ಆನಂತರ ಡಿನೋಟಿಫೈ ಮಾಡಿಸಲಾಗಿದ್ದು, ತಮ್ಮ‌ ಗಮನಕ್ಕೆ ತರದೇ ಪರಿಹಾರವನ್ನೂ ವಿತರಿಸದೇ ಮುಡಾವು ಲೇಔಟ್‌ ಅಭಿವೃದ್ಧಿಪಡಿಸಲು ಅಕ್ರಮವಾಗಿ ವಶಪಡಿಸಿಕೊಂಡಿತ್ತು ಎನ್ನಲಾಗಿದೆ.

ಮುಂದುವರಿದು, ಹಲವು ಬಾರಿ ಮನವಿ ಸಲ್ಲಿಸಿದ ಬಳಿಕ ಮುಡಾವು ಪರಿಹಾರವಾಗಿ 14 ನಿವೇಶನ ಹಂಚಿಕೆ ಮಾಡಿತ್ತು. ಆನಂತರ 2024ರ ಅಕ್ಟೋಬರ್‌ನಲ್ಲಿ ಅವುಗಳನ್ನು ಮುಡಾಗೆ ಮರಳಿಸಲಾಗಿದೆ. ಅದಾಗ್ಯೂ, ಸಂಬಂಧವೇ ಇಲ್ಲದ ದೂರನ್ನು ಆಧರಿಸಿ, ಹಣ ವರ್ಗಾವಣೆ ನಡೆಯದೇ ಇದ್ದರೂ ಜಾರಿ ನಿರ್ದೇಶನಾಲಯವು ಸಮನ್ಸ್‌ ಜಾರಿ ಮಾಡಿದೆ. ಇದು ಸ್ವೇಚ್ಛೆ, ಕಾನೂನುಬಾಹಿರ ಮತ್ತು ಆಧಾರರಹಿತವಾಗಿರುವುದರಿಂದ ರದ್ದುಪಡಿಸಬೇಕು ಎಂದು ಸಿಎಂ ಪತ್ನಿ ಕೋರಿದ್ದಾರೆ.