ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ರಾಮಲಿಂಗಾ ರೆಡ್ಡಿ ಬೆನ್ನಲ್ಲೇ ಮುನಿಯಪ್ಪ ತಕರಾರು; ಬೇರೆ ಖಾತೆಗೆ ಪಟ್ಟು ಹಿಡಿದ ಸಚಿವ

ನೂತನ ಸಂಪುಟ ರಚನೆಯಾಗಿ ಎರಡೇ ದಿನಕ್ಕೆ ಅಸಮಧಾನ ಭುಗಿಲೆದ್ದಿದೆ. ಹಿರಿಯ ಸಚಿವ ರಾಮಲಿಂಗಾ ರೆಡ್ಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಆಹಾರ ಸಚಿವ ಕೆಹೆಚ್ ಮುನಿಯಪ್ಪ ಖಾತೆಗೆ ಅಸಮಾಧಾನ ಹೊರಹಾಕಿದ್ದಾರೆ. ತಮಗೆ ಬೇರೆ ಖಾತೆ ನೀಡುವಂತೆ ಹೈಕಮಾಂಡ್‌ಗೆ ಸೂಚಿಸಿದ್ದಾರೆ.

ಸಂಗ್ರಹ ಚಿತ್ರ

ನೂತನ ಸಂಪುಟ ರಚನೆಯಾಗಿ ಎರಡೇ ದಿನಕ್ಕೆ ಅಸಮಧಾನ ಭುಗಿಲೆದ್ದಿದೆ. ಹಿರಿಯ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಇದರ ಬೆನ್ನಲ್ಲೇ ಆಹಾರ ಸಚಿವ ಕೆಹೆಚ್ ಮುನಿಯಪ್ಪ (KH Muniyappa) ಖಾತೆಗೆ ಅಸಮಾಧಾನ ಹೊರಹಾಕಿದ್ದಾರೆ. ತಮಗೆ ಬೇರೆ ಖಾತೆ ನೀಡುವಂತೆ ಹೈಕಮಾಂಡ್‌ಗೆ ಸೂಚಿಸಿದ್ದಾರೆ. ನಾನು ಕಾಂಗ್ರೆಸ್ ಪಕ್ಷದಲ್ಲಿ ಸೀನಿಯರ್ ಇದ್ದೇನೆ . ಏಳು ಬಾರಿ ಸಂಸದನಾಗಿ ಕೆಲಸ ಮಾಡಿದ್ದೇನೆ . ನನಗೆ ಬೇರೆ ಖಾತೆ ನೀಡುವಂತೆ ಈಗಾಗಲೇ ವರಿಷ್ಠರ ಗಮನಕ್ಕೆ ತಂದಿದ್ದೇನೆ ಎಂದು ಅವರು ಹೇಳಿದ್ದಾರೆ.

ಪಕ್ಷದ ಅತ್ಯಂತ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದ್ದೇನೆ. ನನ್ನ ಪಕ್ಷ ನಿಷ್ಠೆ ಹೈಕಮಾಂಡ್‌ಗೆ ಗೊತ್ತಿದೆ ಎಂದು ಮುನಿಯಪ್ಪ ಹೇಳಿದ್ದಾರೆ. ಇದೇ ವೇಳೆ ಮುನಿಯಪ್ಪ ಬೆಂಬಲಿಗರು, ಕಾಂಗ್ರೆಸ್ ಹಿರಿಯ ಕಾರ್ಯಕರ್ತು ಕೆಹೆಚ್ ಮುನಿಯಪ್ಪಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಪಕ್ಷದಲ್ಲಿ ಎಲ್ಲರನ್ನೂ ಸಮತೋಲನವಾಗಿ ನೋಡಬೇಕಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್ಲ ನಾಯಕರನ್ನೂ ಒಂದೇ ಕಣ್ಣಿನಿಂದ ನೋಡಬೇಕು’ ಎಂದು ನೇರವಾಗಿ ಅಸಮಾಧಾನ ಹೊರಹಾಕಿದ್ದಾರೆ. ಈ ರೀತಿಯ ಗೊಂದಲಗಳು ಪಕ್ಷಕ್ಕೆ ಒಳ್ಳೆಯದಲ್ಲ, ಇಲಾಖೆಗಳ ಹಂಚಿಕೆ ಸರಿಯಾಗಿಲ್ಲದಿದ್ದರೆ ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗುವ ಆತಂಕವಿದೆ ಎಂದು ಅವರು ಎಚ್ಚರಿಸಿದ್ದಾರೆ.

ತಾವು ಈಗಾಗಲೇ ಮೂರು ವರ್ಷಗಳ ಕಾಲ ಆಹಾರ ಇಲಾಖೆಯನ್ನು ನಿಭಾಯಿಸಿರುವ ಅನುಭವ ಹೊಂದಿದ್ದು, ಈ ಬಾರಿ ತಮಗೆ ಜನರ ನೇರ ಸೇವೆಗೆ ಮುಕ್ತ ಅವಕಾಶವಿರುವ ಕೃಷಿ ಅಥವಾ ಸಮಾಜ ಕಲ್ಯಾಣ ಇಲಾಖೆಯನ್ನು ನೀಡುವಂತೆ ಬೇಡಿಕೆ ಇಟ್ಟಿದ್ದಾಗಿ ಮುನಿಯಪ್ಪ ತಿಳಿಸಿದ್ದಾರೆ.

ಸಚಿವ ರಾಮಲಿಂಗಾ ರೆಡ್ಡಿ ರಾಜೀನಾಮೆ ಬಗ್ಗೆ ಸಿಎಂ ಡಿಕೆ ಶಿವಕುಮಾರ್ ಹೇಳಿದ್ದೇನು?

ರಾಮಲಿಂಗಾ ರೆಡ್ಡಿ ರಾಜೀನಾಮೆ

ಜಲಸಂಪನ್ಮೂಲ ಖಾತೆ ನೀಡಿರುವುದಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಅಸಮಾಧಾನಗೊಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. "ನನಗೆ ಬೆಂಗಳೂರು ಉಸ್ತುವಾರಿ ಖಾತೆ ನೀಡುವುದಾಗಿ ಡಿ.ಕೆ.ಶಿವಕುಮಾರ್ ಅವರೇ ಹೇಳಿದ್ದರು. ಆದರೆ ನೀಡಿಲ್ಲ.. ನಾನು ಆತ್ಮ ಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡುವುದಿಲ್ಲ. ಹೀಗಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

Vishakha Bhat Heggar

View all posts by this author