#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Murder Case: ಬೆಂಗಳೂರಲ್ಲಿ ಹೇಯ ಕೃತ್ಯ; ಬಾಂಗ್ಲಾ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಹತ್ಯೆ

Murder Case: ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಬಾಂಗ್ಲಾದೇಶ ಮೂಲದ ಮಹಿಳೆ ಖಾಸಗಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮನೆಗೆಲಸ ಮಾಡುತ್ತಿದ್ದರು. ಆಕೆ ಮೇಲೆ ಅತ್ಯಾಚಾರ ಎಸಗಿ, ಹತ್ಯೆ ಮಾಡಿದ್ದು, ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಬೆಂಗಳೂರಲ್ಲಿ ಹೇಯ ಕೃತ್ಯ; ಬಾಂಗ್ಲಾದೇಶದ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿ, ಹತ್ಯೆ

Profile Prabhakara R Jan 24, 2025 6:02 PM

ಬೆಂಗಳೂರು: ಬಾಂಗ್ಲಾದೇಶ ಮೂಲದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಹತ್ಯೆ (Physical Abuse) ಮಾಡಿರುವುದು ರಾಮಮೂರ್ತಿ ನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಕೆರೆ ಲೇಕ್ ಬಳಿ ನಿರ್ಜನ ಪ್ರದೇಶದಲ್ಲಿ ಕತ್ತು ಹಿಸುಕಿ, ಕಲ್ಲು ಎತ್ತಿ ಹಾಕಿ ಹತ್ಯೆ (Murder Case) ಮಾಡಿರುವ ಸ್ಥಿತಿಯಲ್ಲಿ ಮೂಲದ 28 ವರ್ಷದ ಮಹಿಳೆಯ ಶವ ಪತ್ತೆಯಾಗಿದೆ. ಪೊಲೀಸರು ಸ್ಥಳ ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಬಾಂಗ್ಲಾದೇಶ ಮೂಲದ ಮಹಿಳೆ ಹಾಗೂ ಆಕೆಯ ಪತಿ ಕಳೆದ 6 ವರ್ಷಗಳಿಂದಲೂ ಮೂವರು ಮಕ್ಕಳೊಂದಿಗೆ ಬೆಂಗಳೂರಿನಲ್ಲಿ ನೆಲೆಸಿದ್ದರು. ನಗರದ ಖಾಸಗಿ ಅಪಾರ್ಟ್‌ಮೆಂಟ್‌ವೊಂದರಲ್ಲಿ ಮಹಿಳೆ ಮನೆಗೆಲಸ ಮಾಡಿಕೊಂಡಿದ್ದಳು. ಗುರುವಾರ ಕೆಲಸ ಮುಗಿಸಿ ಅಪಾರ್ಟ್‌ಮೆಂಟ್‌ನಿಂದ ತೆರಳಿದ್ದ ಮಹಿಳೆ, ಮನೆಗೆ ಮರಳಿರಲಿಲ್ಲ. ಬೆಳಗ್ಗೆ ಕಲ್ಕೆರೆ ಸಮೀಪದ ನಿರ್ಜನ ಪ್ರದೇಶದಲ್ಲಿ ಆಕೆಯ ಮೃತದೇಹ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ರಾಮಮೂರ್ತಿನಗರ ಠಾಣೆ ಪೊಲೀಸರು, ವಿಧಿ ವಿಜ್ಞಾನ ಪ್ರಯೋಗಾಲಯ ಹಾಗೂ ಸೋಕೋ ಟೀಂ ಸಿಬ್ಬಂದಿ ಭೇಟಿ ನೀಡಿ, ತಪಾಸಣೆ ನಡೆಸಿದ್ದಾರೆ‌. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.

ಈ ಬಗ್ಗೆ ಬೆಂಗಳೂರು ಪೂರ್ವ ವಿಭಾಗದ ಜಂಟಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಪ್ರತಿಕ್ರಿಯಿಸಿ, ಮಹಿಳೆಯ ಪತಿ ಪಾಸ್‌ಪೋರ್ಟ್ ಮೂಲಕವೇ ಭಾರತಕ್ಕೆ ಬಂದಿದ್ದಾರೆ. ಆದರೆ ಹತ್ಯೆಯಾದ ಮಹಿಳೆಯು ಪಾಸ್‌ಪೋರ್ಟ್ ಇಲ್ಲದೆ, ಅಕ್ರಮವಾಗಿ ಬಂದಿರುವುದು ತಿಳಿದು ಬಂದಿದೆ. ಪತಿ ನೀಡಿರುವ ದೂರಿನ ಅನ್ವಯ ಲೈಂಗಿಕ‌ ದೌರ್ಜನ್ಯ ಹಾಗೂ ಹತ್ಯೆಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Murder Case: ಆಟೋ ಟಚ್ ಆಗಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ನಡೆಸಿ ಕೊಲೆ, ನಾಲ್ವರು ಅರೆಸ್ಟ್

ಸಾಲದ ಬಾಧೆ, ಮಂತ್ರಿ ಮಾಲ್‌ನ ಮಹಡಿಯಿಂದ ಜಿಗಿದು ವ್ಯಕ್ತಿ ಆತ್ಮಹತ್ಯೆ

ಬೆಂಗಳೂರು: ಸಾಲದ ಬಾಧೆಯಿಂದ (Debt) ಬೇಸತ್ತು ಆತ್ಮಹತ್ಯೆ (Self harming) ಮಾಡಿಕೊಳ್ಳುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಬೆಂಗಳೂರಿನಲ್ಲಿ (Bengaluru news) ಅಂಥ ಮತ್ತೊಂದು ಆತ್ಮಹತ್ಯೆ ಪ್ರಕರಣ (Crime news) ವರದಿಯಾಗಿದೆ. ಸಿಕ್ಕಾಪಟ್ಟೆ ಸಾಲ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು, ಸಾಲದಿಂದ ಬೇಸತ್ತು ಬೆಂಗಳೂರಿನ ಮಲ್ಲೇಶ್ವರ ಬಳಿ ಇರುವ ಮಂತ್ರಿ ಮಾಲ್‌ನ (Mantri Mall) 2ನೇ ಮಹಡಿಯಿಂದ ಜಿಗಿದು ನಿನ್ನೆ ರಾತ್ರಿ ಆತ್ಮಹತ್ಯೆ ‌ಮಾಡಿಕೊಂಡಿದ್ದಾರೆ‌.

ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ತುಮಕೂರು ಜಿಲ್ಲೆಯ ತಿಪಟೂರಿನ‌ ನಿವಾಸಿ ಟಿ.ಸಿ. ಮಂಜುನಾಥ್ (55) ಎಂದು ತಿಳಿದುಬಂದಿದೆ. ನಿನ್ನೆ ರಾತ್ರಿ 9ರ ಸುಮಾರಿಗೆ ಮಾಲ್‌ನಲ್ಲಿ ಹೆಚ್ಚಿನ ಗ್ರಾಹಕರು ಇದ್ದರು.‌ ಅದೇ ವೇಳೆ 2ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಂಜುನಾಥ್ ಅವರು ಬ್ಯಾಂಕ್ ಸೇರಿದಂತೆ ವಿವಿಧೆಡೆ ಸಾಲ ಮಾಡಿಕೊಂಡಿದ್ದರು. ಇದೇ ಕಾರಣಕ್ಕೆ ಅವರು ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ ಎಂದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತ ವ್ಯಕ್ತಿಯ ಕುಟುಂಬಕ್ಕೆ ಮಾಹಿತಿ ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.