ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Bengaluru News: ಕಾರಿನಲ್ಲಿ ಎಸಿ ಹಾಕಿಕೊಂಡು ವಿಶ್ರಾಂತಿ ಪಡೆಯುತ್ತಿದ್ದ ಚಾಲಕ ಮಲಗಿದ್ದಲ್ಲೇ ಸಾವು!

ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಿಸಿಲು ಹೆಚ್ಚಿದ್ದರಿಂದ ಕಾರಿನ ಎಸಿ ಆನ್ ಮಾಡಿ, ಕಿಟಕಿ ಗಾಜುಗಳನ್ನು ಪೂರ್ತಿಯಾಗಿ ಮುಚ್ಚಿ ಚಾಲಕ ಒಳಗೆ ಮಲಗಿದ್ದರು. ಆದರೆ, ಎಷ್ಟೇ ಕೂಗಿದರೂ, ಕಾರಿನ ಮೇಲೆ ತಟ್ಟಿದರೂ ಚಾಲಕ ಪ್ರತಿಕ್ರಿಯೆ ನೀಡದ ಹಿನ್ನೆಲೆಯಲ್ಲಿ ಜನರು ಪರಿಶೀಲಿಸಿದಾಗ ಚಾಲಕ ಮೃತಪಟ್ಟಿರುವುದು ಕಂಡುಬಂದಿದೆ.

ಬೆಂಗಳೂರು: ಕಾರಿನ ಎಸಿ ಆನ್ ಮಾಡಿ, ಗ್ಲಾಸ್‌ ಏರಿಸಿ ಮಲಗಿದ್ದ ಕ್ಯಾಬ್ ಚಾಲಕನೊಬ್ಬ (Cab Driver) ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ (Bengaluru) ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗೆದರಹಳ್ಳಿ ಬಳಿ ನಡೆದಿದೆ. ದಾಸರಹಳ್ಳಿಯ ನಿವಾಸಿ ಸುನಿತ್ ಮೃತ ಯುವಕ.

ಖಾಸಗಿ ಕಂಪನಿಯೊಂದರಲ್ಲಿ ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಸುನಿತ್, ಇಂದು ಬೆಳಗ್ಗೆ ಸುಮಾರು 10 ಗಂಟೆಯ ವೇಳೆಗೆ ನೆಲಗೆದರಹಳ್ಳಿಯ ರಸ್ತೆ ಪಕ್ಕದಲ್ಲಿ ತಮ್ಮ ಕಾರನ್ನು ಪಾರ್ಕ್ ಮಾಡಿದ್ದರು. ಬಿಸಿಲು ಹೆಚ್ಚಿದ್ದರಿಂದ ಕಾರಿನ ಎಸಿ ಆನ್ ಮಾಡಿ, ಕಿಟಕಿ ಗಾಜುಗಳನ್ನು ಪೂರ್ತಿಯಾಗಿ ಮುಚ್ಚಿ ಒಳಗೆ ಮಲಗಿದ್ದರು. ಆದರೆ, ಕಾರಿನ ಗ್ಲಾಸ್ ಸಂಪೂರ್ಣ ಕ್ಲೋಸ್ ಆಗಿದ್ದರಿಂದ ಉಸಿರುಗಟ್ಟಿ ಕಾರಿನೊಳಗೆ ಚಾಲಕ ಮೃತಪಟ್ಟಿದ್ದಾನೆ.

ಬೆಳಗ್ಗೆಯಿಂದ ಸುಮಾರು ಎರಡು ಗಂಟೆಗಳ ಕಾಲ ಕಾರು ಒಂದೇ ಕಡೆ ನಿಂತಿರುವುದನ್ನು ಗಮನಿಸಿದ ಸ್ಥಳೀಯರಿಗೆ ಅನುಮಾನ ಬಂದಿದೆ. ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಕೆಲವರು ಕಾರಿನ ಹತ್ತಿರ ಹೋಗಿ ಪರಿಶೀಲಿಸಿದಾಗ ಚಾಲಕ ಸೀಟಿನಲ್ಲಿ ಮಲಗಿರುವುದು ಕಂಡುಬಂದಿದೆ. ಎಷ್ಟೇ ಕೂಗಿದರೂ, ಕಾರಿನ ಮೇಲೆ ತಟ್ಟಿದರೂ ಒಳಗಿದ್ದ ಚಾಲಕ ಪ್ರತಿಕ್ರಿಯೆ ನೀಡಲಿಲ್ಲ. ಅನಿವಾರ್ಯವಾಗಿ ಸ್ಥಳೀಯರು ಕಲ್ಲಿನಿಂದ ಕಾರಿನ ಕಿಟಕಿ ಗಾಜನ್ನು ಒಡೆದು ಬಾಗಿಲು ತೆರೆದಿದ್ದಾರೆ. ಆದರೆ, ಅಷ್ಟರಲ್ಲೇ ಚಾಲಕ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ.

ತಕ್ಷಣವೇ ಸ್ಥಳೀಯರು ಮತ್ತು ಪೊಲೀಸರು ಸೇರಿ ಚಾಲಕನನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಿದ್ದಾರೆ. ಆದರೆ ಚಾಲಕನನ್ನು ಪರೀಕ್ಷಿಸಿದ ವೈದ್ಯರು, ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಚಾಲಕನು ಹೃದಯಾಘಾತದಿಂದ ಮೃತಪಟ್ಟಿರಬಹುದು ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.