ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

DK Shivakumar: ನಗರ್ತಪೇಟೆ ಅಗ್ನಿ ಅವಘಡ; ಸ್ಥಳಕ್ಕೆ ಡಿಸಿಎಂ ಭೇಟಿ

ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿದ್ದು, ಇದೀಗ ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು: ನಗರ್ತಪೇಟೆಯಲ್ಲಿ ಪ್ಲಾಸ್ಟಿಕ್ ಮ್ಯಾಟ್ ಅಂಗಡಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಐವರು ಸಾವನ್ನಪ್ಪಿದ್ದು, ಇದೀಗ ಘಟನಾ ಸ್ಥಳಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿಕೆ ಶಿವಕುಮಾರ್ (DK Shivakumar)​ ಇಲ್ಲಿ ಅವೈಜ್ಞಾನಿಕವಾಗಿ ಕಟ್ಟಡಗಳನ್ನು ಕಟ್ಟಿದ್ದಾರೆ. ಅನಧಿಕೃತ ಕಟ್ಟಡಗಳಿಗೆ ನೋಟಿಸ್ ನೀಡುವಂತೆ ಬಿಬಿಎಂಪಿ ಸೂಚನೆ ನೀಡಿದ್ದು, ಅಕ್ರಮವಾಗಿ ಕಟ್ಟಡ ನಿರ್ಮಿಸಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಅಗ್ನಿ ಅವಘಡ ಸಂಭವಿಸಿದ ಕಟ್ಟಡ ಪರಿಶೀಲನೆ ಮಾಡಿದರು. ದುರಂತ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ಅವಘಡ ಸಂಭವಿಸಿದಾಗ ಅಗ್ನಿಶಾಮಕ ವಾಹನ ಬರುವುದಕ್ಕೆ ಆಗಿಲ್ಲ. ಒಂದೂವರೆ ಕಿಲೋ‌ ಮೀಟರ್​ನಿಂದ ನೀರು ತಂದು ಹಾಕಿದ್ದಾರೆ. ಈ ದುರಂತದಲ್ಲಿ ಮೃತಪಟ್ಟವರು ರಾಜಸ್ಥಾನ ಮೂಲದವರು. ಈಗಾಗಲೇ ಈ ಬಿಲ್ಡಿಂಗ್ ಮಾಲಿಕರಿಗೆ ನೋಟಿಸ್ ನೀಡಿ ಅರೆಸ್ಟ್ ಮಾಡಲಾಗಿದೆ. ಅಕ್ರಮವಾಗಿ ಕಟ್ಟಡ ಕಟ್ಟುವವರಿಗೆ ನೋಟಿಸ್ ನೀಡಬೇಕು. ಇಲ್ಲಿ ಒಂದು ಬಿಲ್ಡಿಂಗ್ ಬಿದ್ದರೆ ಅಕ್ಕ-ಪಕ್ಕದ ಕಟ್ಟಡಗಳು ಬೀಳುತ್ತೆ ಎಂದರು.

ನಿನ್ನೆ ಘಟನಾ ಸ್ಥಳಕ್ಕೆ ಗೃಹಸಚಿವ ಪರಮೇಶ್ವರ್‌, ಪೊಲೀಸ್ ಆಯುಕ್ತ ಸೀಮಂತ್‌ ಕುಮಾರ್ ಸಿಂಗ್‌, ಶಾಸಕರಾದ ಆರ್‌ವಿ ದೇವರಾಜ್‌, ಉದಯ್‌ ಗರುಡಾಚಾರ್ ಸೇರಿದಂತೆ ಎಲ್ಲರೂ ಭೇಟಿ ನೀಡಿ ಪರಿಶೀಲಿಸಿದರು. ಸ್ಥಳಕ್ಕೆ ಬಂದಿದ್ದ ಸಚಿವ ಜಮೀರ್ ಅಹ್ಮದ್‌ ಖಾನ್‌, ಮೃತರ ಕುಟುಂಬಕ್ಕೆ ವೈಯಕ್ತಿಯವಾಗಿ ಐದು ಲಕ್ಷ ರೂ. ಪರಿಹಾರ ಘೋಷಿಸಿದ್ದು, ಸರ್ಕಾರದಿಂದಲೂ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ: Fire Accident: ದೇವರ ಆರತಿ ವೇಳೆ ನಡೀತು ಘನಘೋರ ಘಟನೆ! ಬೆಂಕಿ ಅವಘಡದಲ್ಲಿ 7 ಜನರಿಗೆ ಗಂಭೀರ ಗಾಯ

ನಗರ್ತಪೇಟೆಯಲ್ಲಿರುವ ಪ್ಲಾಸ್ಟಿಕ್ ನೆಲದ ಚಾಪೆ ಉತ್ಪಾದನಾ ಘಟಕದಲ್ಲಿ ಶನಿವಾರ ಸಂಭವಿಸಿದ ಬೆಂಕಿ ಅವಘಡದಲ್ಲಿ (Fire accident) ಐವರು ಸಾವನ್ನಪ್ಪಿದ್ದಾರೆ. ಮೃತಪಟ್ಟ ಐವರಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದ್ದಾರೆ. ಮೃತರನ್ನು ಮದನ್ (38), ಪತ್ನಿ ಸಂಗೀತಾ (33), ಮತ್ತು ಮಕ್ಕಳಾದ ಮಿತೇಶ್ (8) ಮತ್ತು ವಿಹಾನ್ (5) ಎಂದು ಗುರುತಿಸಲಾಗಿದೆ. ಜೊತೆಗೆ, ಮತ್ತೊಂದು ಮಹಡಿಯಲ್ಲಿದ್ದ ಸುರೇಶ್ ಕೂಡ ಬೆಂಕಿಗೆ ಸಿಲುಕಿ ಮೃತಪಟ್ಟಿದ್ದರು.