ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Namaz at Bengaluru airport: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ನಮಾಜ್‌; ತನಿಖೆಗೆ ಹಿಂದೂ ಜನಜಾಗೃತಿ ಸಮಿತಿ ಆಗ್ರಹ

Hindu Janajagruti Samiti: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ನಲ್ಲಿ ಕೆಲ ಮುಸ್ಲಿಮರು ಸಾರ್ವಜನಿಕವಾಗಿ ನಮಾಜ್ ಪಠಣ ನಡೆಸಿರುವ ಘಟನೆ ಗಂಭೀರ ಆತಂಕಕ್ಕೆ ಕಾರಣವಾಗಿದೆ. ಅಲ್ಲಿ ಸುರಕ್ಷತಾ ಅಧಿಕಾರಿಗಳು ಮತ್ತು ನಿರ್ವಾಹಕ ಸಿಬ್ಬಂದಿ ಇದ್ದರೂ ಅವರು ಈ ನಡೆಯ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಪ್ರಶ್ನಾರ್ಹವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ತಿಳಿಸಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ.

ಬೆಂಗಳೂರು, ನ.10: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ನಲ್ಲಿ ಕೆಲ ಮುಸ್ಲಿಮರು ಸಾರ್ವಜನಿಕವಾಗಿ ನಮಾಜ್ ಪಠಣ (Namaz at Bengaluru airport) ನಡೆಸಿರುವ ಘಟನೆ ಗಂಭೀರ ಆತಂಕಕ್ಕೆ ಕಾರಣವಾಗಿದೆ. ಅಲ್ಲಿ ಸುರಕ್ಷತಾ ಅಧಿಕಾರಿಗಳು ಮತ್ತು ನಿರ್ವಾಹಕ ಸಿಬ್ಬಂದಿ ಇದ್ದರೂ ಅವರು ಈ ನಡೆಯ ಮೇಲೆ ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಪ್ರಶ್ನಾರ್ಹವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ (Hindu Janajagruti Samiti) ರಾಜ್ಯ ವಕ್ತಾರ ಮೋಹನ್ ಗೌಡ ತಿಳಿಸಿದ್ದಾರೆ.

ಹಿಂದೂ ಜನಜಾಗೃತಿ ಸಮಿತಿಯು ಈ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದೆ. ಹಿಂದೂ ಸಂಘಟನೆಗಳು ಸಾರ್ವಜನಿಕ ಪ್ರದೇಶ ಅಥವಾ ರಸ್ತೆಯಲ್ಲಿ ಕೇವಲ ಒಂದು ಪಥಸಂಚಲನ ನಡೆಸುವ ಬಗ್ಗೆ ನ್ಯಾಯಾಲಯಕ್ಕೆ ಹೋಗಿ ನ್ಯಾಯ ಕೇಳಬೇಕಾಗುತ್ತದೆ, ಆದರೆ ವಿಮಾನ ನಿಲ್ದಾಣವಂತು ರಾಷ್ಟ್ರದ ಭದ್ರತೆಗೆ ಸಂಬಂಧಿಸಿದ ಉನ್ನತ ಸುರಕ್ಷತಾ ವಲಯ, ಅಲ್ಲಿ ಯಾವುದೇ ಧಾರ್ಮಿಕ ಚಟುವಟಿಕೆಗೆ ಅವಕಾಶ ನೀಡುವುದು ರಾಷ್ಟ್ರದ ಭದ್ರತೆಯ ಮೇಲಿನ ಪ್ರಶ್ನೆಯಾಗಿದೆ. ಇನ್ನೊಂದೆಡೆ, ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಭಯೋತ್ಪಾದಕ ಕೈದಿಗಳಿಗೆ ಮೊಬೈಲ್ ಸೌಲಭ್ಯ ದೊರೆಯುತ್ತಿದೆ ಎಂಬ ವಿಡಿಯೋಗಳು ಹರಿದಾಡುತ್ತಿವೆ. ಇಂದು ವಿಮಾನ ನಿಲ್ದಾಣದಲ್ಲಿಯೇ ನಮಾಜ್ ಪಠಣ ನಡೆಯುತ್ತಿದರೂ ಸರ್ಕಾರ ಸುಮ್ಮನಿರುವುದು ಧಾರ್ಮಿಕ ಓಲೈಕೆಯ ನಿದರ್ಶನಗಳಾಗಿವೆ ಎಂದು ಅವರು ಆರೋಪಿಸಿದ್ದಾರೆ.

ಸರ್ಕಾರವು ಈ ಘಟನೆ ಕುರಿತು ತಕ್ಷಣ ತನಿಖೆ ನಡೆಸಬೇಕು ಮತ್ತು ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | BJP Protest: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ; ಸಿಎಂ, ಗೃಹ ಸಚಿವರ ರಾಜೀನಾಮೆಗೆ ಬಿ.ವೈ. ವಿಜಯೇಂದ್ರ ಆಗ್ರಹ

Mass Namaz: ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಸಾಮೂಹಿಕ ನಮಾಜ್‌: ಪ್ರಿಯಾಂಕ್‌ ಖರ್ಗೆ ಹೇಳಿದ್ದೇನು?

ಬೆಂಗಳೂರು, ನ.10: ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ಕಾರ್ಯಕ್ರಮಗಳಿಗೆ ಅನುಮತಿ ಪಡೆಯುವ ಕಾಂಗ್ರೆಸ್ (Congress) ಸರ್ಕಾರದ ನಿಯಮಕ್ಕೆ ಬಿಜೆಪಿ (BJP) ತಡೆ ತಂದಿರುವುದನ್ನು ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಟೀಕಿಸಿದ್ದಾರೆ. ಬೆಂಗಳೂರು ವಿಮಾನ ನಿಲ್ದಾಣದ (Bengaluru international Airport) ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕ ನಮಾಜ್ (Mass Namaz) ಮಾಡಿದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿ, ನಮಾಜ್‌ ಅನ್ನು ಗರ್ಭಾ ನೃತ್ಯಕ್ಕೆ ಹೋಲಿಸಿದರು. ಇದು ಸಲ್ಲದು ಎಂದಾದರೆ ಅದು ಕೂಡ ಸಲ್ಲದು ಎಂದು ಹೇಳಿದರು.

ಏರ್‌ಪೋರ್ಟ್‌ಗಳಲ್ಲಿ ಪ್ರಾರ್ಥನೆಗೆ ಪ್ರತ್ಯೇಕ ಕೊಠಡಿಗಳು ಇರುತ್ತವೆ. ಎಲ್ಲ ಧರ್ಮದವರೂ ಅವರ ಆಚರಣೆಗಳಲ್ಲಿ ಅಲ್ಲಿ ಮಾಡಿಕೊಳ್ಳಲಿ. ಆದರೆ ಇಲ್ಲಿ ಸಾರ್ವಜನಿಕವಾಗಿ ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಈಗ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿದ್ದಾರೆ. ಆದರೆ ಇತ್ತೀಚೆಗೆ ದಿಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮತ್ತು ಗುಜರಾತ್‌ ಏರ್‌ಪೋರ್ಟ್‌ನಲ್ಲಿ ಗರ್ಭಾ ಡ್ಯಾನ್ಸ್‌ ಮಾಡಿದರು. ಅದು ಸರಿ ಎಂದು ಒಪ್ಪಿಕೊಳ್ತಾರಾ ಎಂದು ಖರ್ಗೆ ಪ್ರಶ್ನಿಸಿದರು.

ಸಾರ್ವಜನಿಕರಿಗೆ ತೊಂದರೆಯಾಗಬಾರದು ಎಂಬುದು ತಮ್ಮ ಸರ್ಕಾರದ ನಿಲುವು. ಬೆಂಗಳೂರಿನಲ್ಲಿ ಪ್ರತಿಭಟನೆಗಳಿಗೆ ಫ್ರೀಡಂ ಪಾರ್ಕ್ ಅನ್ನು ನಿಗದಿಪಡಿಸಲಾಗಿದೆ. ಅನುಮತಿ ಪಡೆಯಬೇಕು. ಸಾರ್ವಜನಿಕ ಗಣೇಶ ವಿಸರ್ಜನೆಗೂ ಅನುಮತಿ ಪಡೆಯಬೇಕು. ನಾವು ಕೂಡ ವೋಟ್‌ ಚೋರಿ ಅಭಿಯಾನ ಮಾಡಿದಾಗ ಅನುಮತಿ ಪಡೆದೇ ಮಾಡಿದ್ದೇವೆ. ಆದರೆ, ಇಡೀ ರಾಜ್ಯಕ್ಕೆ ಈ ನಿಯಮವನ್ನು ವಿಸ್ತರಿಸಿದಾಗ ಬಿಜೆಪಿ ತನ್ನ ಅಂಗ ಸಂಸ್ಥೆಗಳ ಮೂಲಕ ಧಾರವಾಡದಲ್ಲಿ ಮಧ್ಯಂತರ ತಡೆ ತಂದಿದ್ದೇಕೆ ಎಂದು ಖರ್ಗೆ ಪ್ರಶ್ನಿಸಿದ್ದಾರೆ.

ಆರ್‌ಎಸ್‌ಎಸ್ ಆಗಲಿ ಅಥವಾ ನಮಾಜ್ ಆಗಲಿ, ಸಾರ್ವಜನಿಕವಾಗಿ ನಡೆಸಿದರೆ ಯಾವುದೇ ಕಾರ್ಯಕ್ರಮಕ್ಕೆ ಸರ್ಕಾರದ ಅನುಮತಿ ಅಗತ್ಯ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಿದ್ದರೆ, ಸಾರ್ವಜನಿಕರಿಗೆ ಕಷ್ಟವಾಗದಿದ್ದರೆ ಅನುಮತಿ ನೀಡಲಾಗುವುದು. ಈ ಬಗ್ಗೆ ಕಾನೂನನ್ನು ರಾಜ್ಯಾದ್ಯಂತ ವಿಸ್ತರಿಸಲು ಮುಂದಾದಾಗ ಬಿಜೆಪಿಯೇ ಅಲ್ಲವೇ ತಡೆ ತಂದಿದ್ದು ಎಂದು ಖರ್ಗೆ ಪ್ರಶ್ನಿಸಿದರು.

ಟರ್ಮಿನಲ್‌ 2ರಲ್ಲಿ ನಮಾಜ್

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲವರು ಸಾಮೂಹಿಕ ನಮಾಜ್ (mass namaz in KIA) ಮಾಡಿದ್ದರ ವಿಡಿಯೋ ಇಂದು ವೈರಲ್‌ (viral video) ಆಗಿತ್ತು. ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಕೆಲವರು ಸಾಮೂಹಿಕವಾಗಿ ನಮಾಜ್ ಮಾಡಿದ್ದು, ಹಜ್ ಯಾತ್ರಿಕರನ್ನು ಬೀಳ್ಕೊಡಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕೆಲವರು ನಮಾಜ್ ಮಾಡಿದ್ದಾರೆ ಎನ್ನಲಾಗಿದೆ. ಇದರ ವಿಡಿಯೋ ವೈರಲ್ ಆಗಿದ್ದು, ಹಲವರ ಆಕ್ರೋಶಕ್ಕೂ ಕಾರಣವಾಗಿದೆ.

ಈ ಸುದ್ದಿಯನ್ನೂ ಓದಿ | Mass Namaz in Kempegowda International Airport: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಾಮೂಹಿಕ ನಮಾಜ್‌; ವಿಡಿಯೊ ವೈರಲ್‌, ಆಕ್ಷೇಪ

ಬೆಂಗಳೂರು ವಿಮಾನ ನಿಲ್ದಾಣ ಆವರಣದಲ್ಲಿ ನಮಾಜ್ ಮಾಡಿರುವುದನ್ನು ಕರ್ನಾಟಕ ಬಿಜೆಪಿ ಟೀಕಿಸಿದ್ದು, ಹೆಚ್ಚಿನ ಭದ್ರತಾ ವಲಯದಲ್ಲಿ ಇಂತಹ ಕೆಲಸಕ್ಕೆ ಹೇಗೆ ಅವಕಾಶ ನೀಡಲಾಗಿದೆ ಎಂದು ಪ್ರಶ್ನಿಸಿದೆ. ಪಕ್ಷದ ವಕ್ತಾರ ವಿಜಯ್ ಪ್ರಸಾದ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಐಟಿ ಸಚಿವ ಪ್ರಿಯಾಂಕ್ ಖರ್ಗೆ ಅವರಿಂದ ಈ ಘಟನೆಯ ಬಗ್ಗೆ ಸ್ಪಷ್ಟೀಕರಣವನ್ನು ಕೋರಿದ್ದಾರೆ.