Namma Metro: ನಮ್ಮ ಮೆಟ್ರೋ ಹಳಿಗೆ ಜಿಗಿದು ಯುವಕ ಆತ್ಮಹತ್ಯೆಗೆ ಯತ್ನ
ಜಾಲಹಳ್ಳಿ ನಿಲ್ದಾಣದಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯುವಕನೊಬ್ಬ ಯತ್ನಿಸಿದ್ದಾನೆ.
ಬೆಂಗಳೂರು: ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಬೆಂಗಳೂರಿನ ಜಾಲಹಳ್ಳಿಯ ಮೆಟ್ರೋ ನಿಲ್ದಾಣದಲ್ಲಿ ಯುವಕನೊಬ್ಬ ಮೆಟ್ರೋ ಟ್ರೈನ್ ಬರುತ್ತಿದ್ದಂತೆ ಎರಡು ಹಳಿಗಳ ಮಧ್ಯೆ ಜಿಗಿದು ಮಲಗಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಮೆಟ್ರೋ ರೈಲು ಬರುತಿದ್ದಂತೆ ಯುವಕ ಎರಡು ಹಳಿಗಳ ನಡುವೆ ಹಾರಿ ಮಲಗಿದ್ದಾನೆ. ಬೆಳಗ್ಗೆ 10.26ಕ್ಕೆ ಜಾಲಹಳ್ಳಿಯ ಹಸಿರು ಮಾರ್ಗದಲ್ಲಿ ಮೆಟ್ರೋ ಟ್ರೈನ್ ಬರುವಾಗ ಈ ಘಟನೆ ನಡೆದಿದೆ. ಕೂಡಲೇ ಅಲರ್ಟ್ ಆದ ಚಾಲಕ ರೈಲನ್ನು ನಿಲ್ಲಿಸಿದ್ದಾರೆ. ಲೋಕೋ ಪೈಲಟ್ ಮೆಟ್ರೋ ನಿಲ್ಲಿಸಿದ್ದರಿಂದ ಯುವಕ ಬಚಾವ್ ಆಗಿದ್ದಾನೆ. ಮೆಟ್ರೋ ಸಿಬ್ಬಂದಿಗಳು ಯುವಕನನ್ನು ರಕ್ಷಣೆ ಮಾಡಿ ವಶಕ್ಕೆ ಪಡೆದುಕೊಂಡು ಪೊಲೀಸರಿಗೆ ಒಪ್ಪಿಸಿದ್ದಾರೆ.
ಘಟನೆ ವೇಳೆ ಬಿಎಂಆರ್‌ಸಿಎಲ್ ಮೆಟ್ರೋ ಸಂಚಾರವನ್ನು ಕೆಲ ಕಾಲ ಸ್ಥಗಿತಗೊಳಿಸಿತು. ಈ ಹಿನ್ನಲೆಯಲ್ಲಿ ಪ್ರಯಾಣಿಕರು ಪರದಾಟ ಅನುಭವಿಸಿದರು. ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ಹೆಚ್ಚಿನ ವಿಚಾರಣೆ ನಡೆಸಿದ್ದಾರೆ.
ಉತ್ತರ ಕನ್ನಡದಲ್ಲಿ ಗರ್ಭ ಧರಿಸಿದ ಹಸುವಿನ ತಲೆ ಕಡಿದು ಕ್ರೌರ್ಯ
ಕಾರವಾರ: ಬೆಂಗಳೂರಲ್ಲಿ ಹಸುಗಳ ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಘಟನೆ ನಡೆದ ಬೆನ್ನಲ್ಲೇ ಹೊನ್ನಾವರದ ಸಾಲ್ಕೋಡಿನ ಕೊಂಡಕುಳಿಯಲ್ಲಿ ದುರುಳರು, ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ವಿಕೃತಿ ಮರೆದಿರುವುದು ನಡೆದಿದೆ.
ಕೊಂಡಕುಳಿ ಕೃಷ್ಣ ಆಚಾರಿ ಎಂಬುವವರ ಹಸು ಮೇವಿಗಾಗಿ ಹೊರಗಡೆ ಹೋಗಿತ್ತು. ಆದರೆ ರಾತ್ರಿ ಹಸು ಬಾರದ ಹಿನ್ನೆಲೆಯಲ್ಲಿ ಮಾಲೀಕ ಹುಡುಕಾಡಿದ್ದಾರೆ. ಆಗ ಹಸು ಹುಡುಕಲು ಹೋದ ಮಾಲೀಕನಿಗೆ ಆಘಾತ ಕಾದಿತ್ತು. ಕಿರಾತಕರು ಹಸುವಿನ ರುಂಡ ಬೇರ್ಪಡಿಸಿ, ಕಾಲು ಕತ್ತರಿಸಿ, ದೇಹ ತೆಗೆದುಕೊಂಡು ಹೋಗಿದ್ದಾರೆ. ತನ್ನ ಹಸುವಿನ ರುಂಡ ನೋಡಿದ ಮಾಲೀಕ ಆಘಾತಕ್ಕೊಳಗಾಗಿದ್ದು, ಈ ಬಗ್ಗೆ ಹೊನ್ನಾವರ ಪೊಲೀಸ್ ಅಧಿಕಾರಿಗಳಿಗೆ ದೂರು ನೀಡಿದ್ದಾರೆ.